ವಾಸ್ತವದ ಅಂಶ ಜನಮನದಲ್ಲಿ ತುಂಬಿದ ನಿಜ ಶರಣ: ಯರನಾಳ
ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರವಾದ ವಾಸ್ತವದ ಅಂಶಗಳನ್ನು ಜನಮನದಲ್ಲಿ ಮೂಡಿಸಿದ್ದರು.
Team Udayavani, Jan 22, 2022, 5:56 PM IST
ಗದಗ: ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯನವರ ಸೇವಾ ಟ್ರಸ್ಟ್, ಉಡಚಮ್ಮದೇವಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 902ನೇ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ಉಪನ್ಯಾಸ ನೀಡಿದ ಡಾ| ಗಣೇಶ ಸುಲ್ತಾನಪುರ, 12ನೇ ಶತಮಾನದ ಬಸವಣ್ಣವರ ಅನುಯಾಯಿ ಶರಣ ಸಾವಿರಾರು ವರ್ಷಗಳಿಂದ ಧರ್ಮ ದೇವರುಗಳ ಬಗ್ಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನು ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರವಾದ ವಾಸ್ತವದ ಅಂಶಗಳನ್ನು ಜನಮನದಲ್ಲಿ ಮೂಡಿಸಿದ್ದರು.
ಜಿಲ್ಲಾಧ್ಯಕ್ಷ ಬಿ.ಎನ್.ಯರನಾಳ ಮಾತನಾಡಿ, ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ವಿಧ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ಸಮುದಾಯದ ಜನರು ಕಟ್ಟಡ ನಿರ್ಮಾಣಕ್ಕೆ ನೆರವಾಗಬೇಕು ಎಂದು ಮನವಿ ಮಾಡಿದರು. ಉಪಾಧ್ಯಕ್ಷ ಸಿ.ಬಿ.ಬಾರಕೇರ ಮಾತನಾಡಿ, ನಮ್ಮ ಸಮುದಾಯ ಶಿಕ್ಷಣದಲ್ಲಿ ಸ್ವದ್ಯೋಗದಲ್ಲಿ ಮುಂದುವರೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯ ಬಳಸಿಕೊಳ್ಳಲು ಜಾಗೃತರಾಗಬೇಕು ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಜೆ.ಬಿ.ಗಾರವಾಡ ಮಾತನಾಡಿ, ಜಿಲ್ಲಾ ಸಂಘಟನೆಯಿಂದ ಈಗಾಗಲೇ ಸಾಕಷ್ಟು ಕಾರ್ಯ ಚಟುವಟಿಕೆಗಳನ್ನು ಮಾಡಲಾಗಿದ್ದು, ಮಹಿಳಾ ಘಟಕ, ಯುವ ಘಟಕ ಹಾಗೂ ನೌಕರರ ಘಟಕಗಳನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.
ಈ ಸಂರ್ದರ್ಭದಲ್ಲಿ ಚಂದ್ರಶೇಖರ ಪೂಜಾರ, ಕೆ.ಎನ್ ಸುಣಗಾರ, ರವಿಕುಮಾರ ಸವಣ್ಣೂರ, ವಾಸಣ್ಣ ಲಕ್ಷೆಶ್ವರ, ಉಮೇಶ ಪೂಜಾರ, ಸುಭಾಷ ಕದಡಿ, ಸಂತೋಷ ಪೂಜಾರ, ರಾಮಣ್ಣ ಲಕ್ಷೆಶ್ವರ, ಅರ್ಜುನ ಪೂಜಾರ, ಮಾಲತೇಶ ಬಾರ್ಕಿ, ನಾಗರಾಜ ಗುಡಿಸಾಗರ, ರವಿ ಬಾರಕೇರ, ಶರಣಪ್ಪ ಅಬ್ಬಿಗೇರಿ, ವಿ.ಜಿ. ಬಾರಕೇರ, ಫಕ್ಕೀರಪ್ಪ ಲಕ್ಷೆಶ್ವರ, ಚಾಮರಾಜ ಪೂಜಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.