ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ


Team Udayavani, Jun 19, 2024, 2:22 PM IST

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

ಉದಯವಾಣಿ ಸಮಾಚಾರ
ಗದಗ: ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಜಿಲ್ಲೆಯ ವಿವಿಧ ಇಲಾಖೆ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜನ-ಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್‌ಗಳನ್ನು
ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದರೆ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದೆ. ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾ ಧಿತವಾಗುವ
ಹಳ್ಳಿಗಳೆಂದು ಗುರುತಿಸಲಾಗಿದೆ. ಅಲ್ಲಿಯೂ ಸಹ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗುವಂತೆ ಸೂಚಿಸಿದರು.

ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ
ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳ ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳ ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ ಎಂದರು. ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.

ದಿಢೀರ್‌ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಭರತ್‌ ಎಸ್‌., ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್‌, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ
ಶಿರಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.