ಸಂಚಾರಿ ನಿಯಮ ಪಾಲನೆ ಕಡ್ಡಾಯ
Team Udayavani, May 27, 2019, 8:36 AM IST
ನರೇಗಲ್ಲ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಂಚಾರಿ ಸುರಕ್ಷಾ ಸಪ್ತಾಹ ಅಡಿಯಲ್ಲಿ ರವಿವಾರ ವಿಶೇಷ ಕಾರ್ಯಾಚರಣೆ ನಡೆಸಿ ಆಟೋಗಳ ದಾಖಲೆಗಳನ್ನು ಡಿವೈಎಸ್‌ಪಿ ಪಾಟೀಲ ಪರಿಶೀಲಿಸಿದರು.
ನರೇಗಲ್ಲ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಂಚಾರಿ ಸುರಕ್ಷಾ ಸಪ್ತಾಹ ಅಡಿಯಲ್ಲಿ ರವಿವಾರ ವಿಶೇಷ ಕಾರ್ಯಾಚರಣೆ ನಡೆಸಿ ಆಟೋಗಳ ದಾಖಲೆಗಳನ್ನು ನರಗುಂದ ಡಿವೈಎಸ್‌ಪಿ ಎಸ್.ಎ. ಪಾಟೀಲ ಪರಿಶೀಲಿಸಿದರು.
ನಂತರ ಮಾಡಿನಾಡಿದ ಅವರು, ಪಟ್ಟಣ ಸೇರಿದಂತೆ ಅಬ್ಬಿಗೇರಿ, ಜಕ್ಕಲಿ, ಮಾರನಬಸರಿ, ಬೂದಿಹಾಳ, ಹೊಸಳ್ಳಿ, ನಿಡಗುಂದಿ, ಹಾಲಕೆರೆ, ಗುಜಮಾಗಡಿ, ಯರೇಬೇಲೇರಿ, ಕುರಡಗಿ, ನಾಗರಾಳ, ಡ.ಸ. ಹಡಗಲಿ, ಕಳಕಾಪೂರ ಗ್ರಾಮಗಳಲ್ಲಿ 400ಕ್ಕೂ ಹೆಚ್ಚು ಆಟೋಗಳು ಹಾಗೂ ಚಾಲಕರು ಇದ್ದಾರೆ. ಚಾಲಕರು ತಮ್ಮ ಆಟೋಗಳಲ್ಲಿಯೇ ದಾಖಲಾತಿಗಳನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಇದರಿಂದ ತಪಾಸಣೆ ವೇಳೆ ಅನುಕೂಲವಾಗುತ್ತದೆ. ಆಟೋ ಚಾಲಕರು ರಸ್ತೆ ಸುರಕ್ಷತೆ ನಿಯಮ ಪಾಲನೆ ಕಡ್ಡಾಯವಾಗಿ ಮಾಡಬೇಕು. ವಾಹನ ಚಾಲಕರು ತಮ್ಮ ಪರವಾನಗಿ, ಇನ್ಸುರೆನ್ಸ್, ಮಾಲೀಕತ್ವ ಪತ್ರ, ಆರ್‌ಸಿ ಬುಕ್, ಮಾಲಿನ್ಯ ನಿಯಂತ್ರಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ಇದು ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಅಲ್ಲದೇ ವಾಹನ ಚಾಲಕರು ಖಾಕಿ ಬಟ್ಟೆ ಧರಿಸದೇ ಬೇಜವಾಬ್ದಾರಿ ತೋರುತ್ತಿದ್ದಾರೆ. ಇದು ಸರಿಯಲ್ಲ. ಪಟ್ಟಣದಲ್ಲಿ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಅವುಗಳನ್ನು ನೋಂದಣಿ ಮಾಡಿ. ಯೂನಿಕ್ ನಂಬರ್ ನೀಡಲಾಗುವುದು. ಇದರಿಂದ ರಸ್ತೆ ಸುರಕ್ಷತೆಗೆ ಅನುಕೂಲವಾಗಲಿದೆ ಎಂದರು. ರೋಣ ಸಿಪಿಐ ಮಂಜುನಾಥ ನಡುವಿನಮನಿ ಮಾತನಾಡಿ, ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಆಟೋಗಳಲ್ಲಿ ಅಕ್ರಮ ಮದ್ಯವನ್ನಿಟ್ಟು ಹಳ್ಳಿಗಳಿಗೆ ಸಾಗಾಟ ಮಾಡುತ್ತಿದ್ದಾರೆ ಎನ್ನುವ ಆರೋಪ ಗಂಭೀರವಾಗಿ ಕೇಳಿ ಬರುತ್ತಿದೆ. ಒಂದು ವೇಳೆ ಈ ರೀತಿ ಮಾಡಿದ್ದೇ ಆದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಆಟೋ ಸೀಜ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಿಎಸ್‌ಐ ರಾಜೇಶ ಬಟಕುರ್ಕಿ, ಎಎಸ್‌ಐ ಆರ್.ಎನ್. ರುದ್ರಪ್ಪನವರ, ಪೆದೆಗಳಾದ ಬಸವರಾಜ ಮುಳಗುಂದ, ಮಂಜುನಾಥ ಮುಳಗುಂದ, ಮಂಜುನಾಥ ಬಂಡಿವಡ್ಡರ, ಎಸ್.ಬಿ. ಗೂಳಪ್ಪನವರ, ಹನಮಂತ ಡಂಬಳ, ವಿ.ಡಿ. ಪಾಟೀಲ, ಪಿ.ಎ. ಇಂಗಳೆ, ಬಿ.ಎ. ಸವದತ್ತಿ, ಆನಂದ ಮಾದರ ಸೇರಿದಂತೆ ಆಟೋ ಚಾಲಕರು ಹಾಗೂ ಮಾಲೀಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.