ವಿಲನ್ ರೋಲ್ ಮುಗೀತು, ಈಗ ಹೀರೋ ಸರಕಾರ
Team Udayavani, Sep 17, 2019, 8:26 PM IST
ಗದಗ: ರಾಜ್ಯದಲ್ಲಿ ವಿಲನ್ ಅಧಿಕಾರವಧಿ, ಪಾರ್ಟ್ ಟೈಮ್ ಸರಕಾರದ ರೋಲ್ ಮುಗಿದು, ಈಗ ಹೀರೋ ಸರಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದ ಜನತೆಗೂ ಈಗ ನಿಶ್ಚಿಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸ್ವಾರಸ್ಯಕರವಾಗಿ ಹೇಳಿದರು.
ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ರಿಂದ 2018ರ ವರೆಗೆ ವಿಲನ್(ಸಿದ್ದರಾಮಯ್ಯ) ಸರಕಾರ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆಯಾದರೂ, ಅವರಿಗೆ ಕಣ್ಣಲ್ಲಿ ಹನಿ ನೀರೂ ಬರಲಿಲ್ಲ. ಸಾಲದು ಎಂಬಂತೆ ಸಮಾಜವನ್ನೂ ಒಡೆದರು. ಅದಕ್ಕೆ ಜನರು ತಿರಸ್ಕರಿಸಿದರು.
ಬಳಿಕ ಪಾರ್ಟ್ ಟೈಮ್ ಸರಕಾರ ಅಧಿಕಾರಕ್ಕೆ ಬಂದು ಎಚ್.ಡಿ.ಕುಮಾರಸ್ವಾಮಿ ಸೈಡ್ ಆಕ್ಟರ್ ಆಗಿದ್ದರು. ಇದೀಗ ಹೀರೋ ಸರಕಾರ ಅಧಿಕಾರಕ್ಕೆ ಬಂದಿದೆ. ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಂದಿನ ಮೂರೂವರೆ ವರ್ಷ ಯಾವುದೇ ಅಡೆತಡೆಯಿಲ್ಲದೇ ರಾಜ್ಯ ಅಭಿವೃದ್ಧಿಯತ್ತ ಮುನ್ನಡೆಯಲಿದೆ. ಸದ್ಯ ಎದುರಾಗಿರುವ ಬರ ಮತ್ತು ನೆರೆಯನ್ನು ಸಮರ್ಥವಾಗಿ ನಿಭಾಯಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.