ದೆಹಲಿಗೆ ತೆರಳಿದ್ದ ಗದಗ ಜಿಲ್ಲೆಯವರಿಗೆ ಸೋಂಕಿಲ್ಲ
Team Udayavani, Apr 2, 2020, 3:52 PM IST
ಗದಗ: ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾಗಿರುವ ಜಿಲ್ಲೆಯ 6 ಜನರನ್ನು ಗುರುತಿಸಲಾಗಿದ್ದು, ಅವರ ರಕ್ತ ಮತ್ತು ಗಂಟಲು ದ್ರವ್ಯದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಆರು ಜನರ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ಮಾ. 10ರಂದು ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗದಗ ನಗರದ 6 ಜನರು ಪಾಲ್ಗೊಂಡಿದ್ದರು.
ಸಮಾರಂಭದ ನಡೆದು ಒಂದೆರಡು ದಿನಗಳ ನಂತರ ಅವರು ನಗರಕ್ಕೆ ಆಗಮಿಸಿದ್ದಾರೆ. ಅವರೆಲ್ಲರೂ ನಗರಕ್ಕೆ ಬಂದು ಈಗಾಗಲೇ 14 ದಿನಗಳನ್ನು ಕಳೆದಿದ್ದಾರೆ. ಯಾವುದೇ ರೀತಿಯ ಸೋಂಕು ಕಂಡುಬಂದಿಲ್ಲ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಆದರೂ ಅವರ ಮೇಲೆ ಜಿಲ್ಲಾಡಳಿತ ನಿಗಾವಹಿದೆ. ದೆಹಲಿಯ ನಿಜಾಮುದ್ದೀನ್ ಮರ್ಕಜ್‌ನಲ್ಲಿ ಪಾಲ್ಗೊಂಡಿದ್ದ ಜಿಲ್ಲೆ 6 ಜನರ ಗಂಟಲು ದ್ರವ್ಯ ಮಾದರಿ ವರದಿ ನಕಾರಾತ್ಮಕವಾಗಿ ಬಂದಿರುವ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.
ನೆರವು: ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿದೆ. ಭಿಕ್ಷುಕರು, ಬಡವರು ಹಾಗೂ ಮೂಕ ಪ್ರಾಣಿಗಳು ಆಹಾರ ಸಿಗದೇ ನರಳುವಂತಾಗಿದೆ. ಜನ, ಜಾನುವಾರುಗಳ ಹಸಿವು ನೀಗಿಸಲು ತೋಂಟದಾರ್ಯ ಮಠ ಹಾಗೂ ಸವಿತಾ ಸಮಾಜ ಸುಧಾರಣಾ ಸಂಘ, ಯಂಗ್ ಇಂಡಿಯಾ ಪರಿವಾರದವರು ನಗರದಲ್ಲಿರುವ ಭಿಕ್ಷುಕರು,ಕಾರ್ಮಿಕರು ಹಾಗೂ ಪೊಲೀಸರು ಊಟ-ಉಪಹಾರ ನೀಡಿ ಉಪಚರಿಸಿದರು. ಅಷ್ಟೇ ಅಲ್ಲದೇ ಮೂಕ ಪ್ರಾಣಿಗಳಿಗೂ ಆಹಾರ ವಿತರಿಸಲಾಯಿತು.
205 ಜನರು ನಿಗಾಕ್ಕೆ: ಜಿಲ್ಲೆಯಲ್ಲಿ ಹೊಸದಾಗಿ 10 ಜನರು ಸೇರಿದಂತೆ ಇಲ್ಲಿವರೆಗೆ ನಿಗಾಕ್ಕೆ ಒಳಗಾದವರ ಸಂಖ್ಯೆ 205ಕ್ಕೆ ತಲುಪಿದ್ದು, 13 ಜನರು 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 179 ಜನರು ಮನೆಯಲ್ಲಿಯೇ ಪ್ರತ್ಯೇಕ ನಿಗಾಹದಲ್ಲಿದ್ದಾರೆ. 13 ಜನರು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದು, ಪರೀಕ್ಷೆಗಾಗಿ ಸಂಗ್ರಹಿಸಿದ ಗಂಟಲು ದ್ರವ್ಯ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 59 ಪ್ರಕರಣಗಳ ಪೈಕಿ 56 ಜನರ ವರದಿ ನೆಗೆಟಿವ್ ಎಂದು ಬಂದಿದೆ. ಇನ್ನುಳಿದ ಮೂವರ ವರದಿಗಳು ಬಾಕಿ ಇವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.