ಕಾಟಾಚಾರಕ್ಕೆ ಸಭೆ ಬೇಡ
Team Udayavani, Oct 4, 2019, 2:44 PM IST
ಲಕ್ಷ್ಮೇಶ್ವರ: ಸರ್ಕಾರದ ಎಲ್ಲ ಇಲಾಖೆಗಳ ಕಾರ್ಯ ಯೋಜನೆಗಳ ಅನುಷ್ಠಾನ, ಪ್ರಗತಿ ಪರಿಶೀಲನಾ ಸಭೆಗಳನ್ನು ಗ್ರಾಮ ಮಟ್ಟದಲ್ಲಿ ನಡೆಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ತ್ತೈಮಾಸಿಕ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸಭೆ ಕೇವಲ ಕಾಟಾಚಾರಕ್ಕಾಗಬಾರದು ಎಂದು ಜಿಪಂ ಸದಸ್ಯ ಎಸ್.ಪಿ. ಬಳಿಗಾರ ಆಗ್ರಹಿಸಿದರು.
ಸಮೀಪದ ಅಡರಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರುಗಿದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಗಳು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುತ್ತದೆ. ಆದರೆ ಅವುಗಳ ಬಗ್ಗೆ ಜನರಿಗೆ ಸರಿಯಾದ ತಿಳಿವಳಿಕೆ ಇರುವುದಿಲ್ಲ. ಕಾರಣ ಯೋಜನೆ ಅನುಷ್ಠಾನ ಮಾಡುವ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಗ್ರಾಮದಲ್ಲಿ ಗ್ರಂಥಾಲಯ ಮತ್ತು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕಲ್ಪಿಸಿದರೆ ಜಿಪಂ ಅನುದಾನ ಕಲ್ಪಿಸುವುದಾಗಿ ಹೇಳಿದರು.
ಗ್ರಾಪಂ ಅಧ್ಯಕ್ಷ ಗಣೇಶ ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಂಥಾಲಯ ಮತ್ತು ಅಂಗನವಾಡಿ ಕಟ್ಟಡಕ್ಕೆ ನಿವೇಶನ ಗುರುತಿಸಿದ್ದು, ಈ ಸ್ವತ್ತು ಉತಾರ ಸಿದ್ಧವಾದ ಕೂಡಲೇ ದಾಖಲೆಗಳೊಂದಿಗೆ ಜಿಪಂ ಸದಸ್ಯರಿಗೆ ಸಲ್ಲಿಸುವುದಾಗಿ ಹೇಳಿದರು. ಮುಖ್ಯವಾಗಿ ಸಭೆಗೆ ಕೃಷಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬರಬೇಕಿತ್ತು. ಸದ್ಯ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚಾಗಿ ಡೆಂಘೀ ಜ್ವರದ ಬಾಧೆ ಕಾಡುತ್ತಿದೆ. ಈ ಬಗ್ಗೆ ಜನರಿಗೆ ತಿಳಿವಳಿಕೆ ಹೇಳಬೇಕಾಗಿದೆ. ಅಲ್ಲದೇ ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ತಿಳಿಸಬೇಕಿದೆ. ಆದರೆ ಅವರ್ಯಾರೂ ಸಭೆಗೆ ಬಂದಿಲ್ಲ. ಅನಿವಾರ್ಯ ಕಾರಣಗಳ ಅಧಿಕಾರಿಗಳು ಬರದಿದ್ದರೂ ಇಲಾಖೆ ಸಿಬ್ಬಂದಿಗಳೊಂದಿಗೆ ಕಾರ್ಯ ಯೋಜನೆಗಳ ಮಾಹಿತಿ ಕಳುಹಿಸಬೇಕು ಎಂದರು.
ಉಪಾಧ್ಯಕ್ಷೆ ಮಹಾದೇವಿ ಚಿಕ್ಕಣ್ಣವರ, ಸುರೇಶ ತೋಟದ, ಪಿಡಿಒ ಸವಿತಾ ಸೋಮಣ್ಣವರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಶಾಲೆ ಮುಖ್ಯ ಶಿಕ್ಷಕರು, ಜಿಪಂ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಇಂಜಿನಿಯರ್, ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.