ಜಿಲ್ಲೆಯ ವಿವಿಧೆಡೆ ಗುಡುಗು-ಸಿಡಿಲು ಸಹಿತ ಚದುರಿದ ಮಳೆ
ತುಂಬಿ ಹರಿದ ಹಳ್ಳ-ಕೊಳ್ಳ, ಕೆಲವೆಡೆ ವಾಹನ ಸಂಚಾರ ಸ್ಥಗಿತ
Team Udayavani, Jun 24, 2019, 9:42 AM IST
ಮನೆಯಲ್ಲಿ ನೀರು ನುಗ್ಗಿರುವುದು.
ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹಳ್ಳಗಳು ತುಂಬಿ ಹರಿದಿವೆ. ಕೆರೆಕಟ್ಟೆಗಳು, ಕೃಷಿ ಹೊಂಡ, ಬದುವು-ಬಾಂದಾರ, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.
ರವಿವಾರ ಮಧ್ಯಾಹ್ನ ತಾಲೂಕಿನ ಯಳವತ್ತಿ, ಯತ್ನಳ್ಳಿ, ಮಾಗಡಿ, ಗೊಜನೂರ, ಅಕ್ಕಿಗುಂದ, ಆದ್ರಳ್ಳಿ, ಬಡ್ನಿ, ಬಟ್ಟೂರ, ಸೂರಣಗಿ, ಹುಲ್ಲೂರ, ಬಾಲೆಹೊಸೂರ, ಶಿಗ್ಲಿ, ದೊಡ್ಡೂರ, ರಾಮಗೇರಿ, ಬಸಾಪುರ, ಅಡರಕಟ್ಟಿ ಸೇರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಹಲವು ಗ್ರಾಮಗಳಲ್ಲಿ ವರ್ಷಗಳಿಂದ ಚರಂಡಿ ಸ್ವಚ್ಛಗೊಳಿಸದಿದ್ದರಿಂದ ನೀರು ರಸ್ತೆ ಮೇಲೆ ಹರಿದು ಮನೆಯೊಳಗೂ ನುಗ್ಗಿದವು. ಲಕ್ಷ್ಮೇಶ್ವರದಲ್ಲಿ ಒಳಚರಂಡಿ ಕಾಮಗಾರಿ, ನಗರೋತ್ಥಾನ ಕಾಮಗಾರಿ, ಜಿಯೋ ಕಂಪನಿಯವರು ಎಲ್ಲೆಂದರಲ್ಲಿ ರಸ್ತೆ ಮಧ್ಯ ತಗ್ಗು ತೋಡಿದ್ದರಿಂದ ನೀರು ನಿಂತು ಜನರ ಸಂಚಾರಕ್ಕೆ ತೊಂದರೆಯಾಯಿತು.
ಸಂಚಾರ ಸ್ಥಗಿತ: ಗದಗ-ಲಕ್ಷ್ಮೇಶ್ವರ ಮಾರ್ಗದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ತಾಲೂಕಿನ ಗೊಜನೂರ ಗ್ರಾಮದ ಹತ್ತಿರದ ಹಳ್ಳ ತುಂಬಿ ರಸ್ತೆ ಮೇಲೆ ಹರಿದಿದ್ದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗದಗದಿಂದ ಹಾವೇರಿ, ದಾವಣಗೆರೆ, ಬೆಂಗಳೂರ ಕಡೆಗೆ ಮತ್ತು ಬೆಂಗಳೂರ ಕಡೆಯಿಂದ ಗದಗ ಕಡೆಗೆ ಹೋಗುವ ಎಲ್ಲ ವಾಹನಗಳಿಗೆ ಇದು ಪ್ರಮುಖ ರಸ್ತೆಯಾಗಿದೆ. ಹೀಗಾಗಿ ಎರಡೂ ಕಡೆ ಕಿಮೀನಷ್ಟು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಕೃಷಿ ಚಟುವಟಿಕೆಗಳಿಗೆ ಹೋಗಿದ್ದ ರೈತರು, ದನಕರುಗಳು, ಬೈಕ್ ಸವಾರರು, ಪ್ರಯಾಣಿಕರು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.