ಸಾಧಿಸುವ ತುಡಿತ ಎಲ್ಲರಲ್ಲಿ ಹೆಚ್ಚಲಿ: ಸ್ವಾಮೀಜಿ
Team Udayavani, May 5, 2019, 2:32 PM IST
ಹೊಳೆಆಲೂರ: ವಿದ್ಯಾರ್ಥಿ ತನ್ನ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ತುಡಿತ ಹೊಂದಿದ್ದರೆ ಯಾವುದು ಅಸಾಧ್ಯವಲ್ಲ. ಆದರೆ ಸ್ಪಷ್ಟ ಗುರಿ, ನಿರಂತರ ಹಾಗೂ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಆತ್ಮವಿಶ್ವಾಸ ಹೊಂದಿರಬೇಕು ಎಂದು ಯಚ್ಚರೇಶ್ವರ ಮಠದ ಯಚ್ಚರಸ್ವಾಮಿಗಳು ಹೇಳಿದರು.
ಗ್ರಾಮದ ಯಚ್ಚರೇಶ್ವರ ಮಠದಲ್ಲಿ ಶನಿವಾರ ನಡೆದ ಭಗವತ್ ಚಿಂತನಾ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಗಳಿಸಿದ 42 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ತಂತ್ರಜ್ಞಾನದ ನೂತನ ಆವಿಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭಾವಿ ಬದುಕು ಸುಂದರವಾಗಿಸಿಕೊಳ್ಳುವ ಜೊತೆಗೆ ನಮ್ಮ ಕೌಟುಂಬಿಕ ವ್ಯವಸ್ಥೆ, ಸಾಮಾಜಿಕ ಬದ್ದತೆ, ಧಾರ್ಮಿಕ ಆಚಾರ-ವಿಚಾರಗಳಿಗೆ, ಗುರು-ಹಿರಿಯರಿಗೆ ಗೌರವ ನೀಡುವುದನ್ನು ಪಾಲಿಸಿದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ ಎಂದು ಹೇಳಿದರು.
ಯಚ್ಚರೇಶ್ವರ ವಿದ್ಯಾ ಸಂಸ್ಥೆಯ ಗೌರವ ಅಧ್ಯಕ್ಷ ಎ.ಎನ್. ಬಡಿಗೇರ ಮಾತನಾಡಿ, ಇಂದು ಶಿಕ್ಷಣ ಕ್ಷೇತ್ರದಲ್ಲಿ ನಿತ್ಯ ಆವಿಸ್ಕಾರ ಹಾಗೂ ಸ್ಪರ್ಧೆ ಅನಿವಾರ್ಯವಾಗಿದೆ. ಸಾಧನೆ ಎಂಬುದು ಸಾಧಕನ ಸೊತ್ತೆ ಹೊರತು ಸೊಮಾರಿಯ ಸೊತ್ತು ಅಲ್ಲ. ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ತುಡಿತ ಹಾಗೂ ಅದಕ್ಕೆ ತಕ್ಕ ಪ್ರಾಮಾಣಿಕ ಶ್ರಮ ನಿಮ್ಮನ್ನು ಎತ್ತರಕ್ಕೆ ಏರಿಸಬಲ್ಲದು ಎಂದು ಹೇಳಿದರು.
ನಿವೃತ್ತ ಶಿಕ್ಷಕ ಬಿ.ಆರ್. ಬಡಿಗೇರ ಮಾತನಾಡಿ, ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಯ ಯಂತ್ರವಾಗಿ ಪರಿಗಣಿಸಿದೆ. ಅವರಲ್ಲಿರುವ ಮಾನವೀಯ ಮೌಲ್ಯಕ್ಕೆ ಜೀವ ತುಂಬಿ, ಸಂಸ್ಕಾರವಂತ, ಸಮಾಜಮುಖೀ ಚಿಂತನೆಯ ಸತøಜೆಗಳಾಗಿ ರೂಪಿಸುವ ಹೊಣೆಗಾರಿಕೆಯನ್ನು ಪಾಲಕರು, ಶಿಕ್ಷಕರು ಪಾಲಿಸಬೇಕು. ಧಾರ್ಮಿಕ ಕಾರ್ಯಕ್ರಮಗಳು, ಧಾರ್ಮಿಕ ಸಾಧು ಸಂತರ ಸಹವಾಸದಿಂದ ಯುವಕರಿಗೆ ವಿದ್ಯೆಯ ಜೊತೆಗೆ ವಿನಯ, ವಿವೇಕ ಪ್ರಾಪ್ತಿಯಾಗಿ ನಿತ್ಯ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸುವ ಚೈತನ್ಯ ಶಕ್ತಿ ಪ್ರಾಪ್ತಿಯಾಗುತ್ತದೆ ಎಂದು ಹೇಳಿದರು.
ಯಚ್ಚರೇಶ್ವರ ವಿದ್ಯಾ ಸಂಸ್ಥೆಯ ಗೌರವ ಅಧ್ಯಕ್ಷ ಎ.ಎನ್. ಬಡಿಗೇರ, ತಾಲೂಕು ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ವಿ. ಬ್ಯಾಡಗಿ, ಶಿಕ್ಷಕ ಕೆ.ಬಿ. ಕಡೆಮನಿ, ಶಿಕ್ಷಕಿ ಎಸ್.ಆರ್. ಸಾಲಿಮಠ, ಉಮಾ ಕಲ್ಲನಗೌಡ್ರ, ಸಿಂಚನ ಸಂಸ್ಥೆಯ ಅಧ್ಯಕ್ಷ ವೀರಯ್ಯ ವಸ್ತ್ರದ, ಮಲ್ಲಿಕಾರ್ಜುನ ಭರಮಗೌಡ್ರ, ಪಾಡು ಮಹೇಂದ್ರಕರ, ಮಲ್ಲಿಕಾರ್ಜುನ ಉಗಲಾಟ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.