ಅಂತ್ಯಕ್ರಿಯೆಗೆ ಹೋದವರು ದುರಂತ ಅಂತ್ಯವಾದರು.! : ಕಾರು ಅಪಘಾತದಲ್ಲಿ ನಾಲ್ವರು ಸಾವು
Team Udayavani, May 12, 2021, 6:12 PM IST
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನವಲಗುಂದ ತಾಲೂಕಿನ ಆರಟ್ಟಿ ಗ್ರಾಮದ ವೀರೇಶ(26), ಶೇಖಪ್ಪ(45), ಬಾಪೂಗೌಡ (25),ಸಾವಿತ್ರಿ(50) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರು. ಒಬ್ಬರು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆದಲ್ಲೇ ಕೊನೆಯುಸಿರೆಳೆದರು. ಇನ್ನು, ಗದಗ ತಾಲೂಕಿನ ಲಿಂಗದಾಳ ಗ್ರಾಮದ ಶಂಕ್ರಪ್ಪ ಬುಕ್ಕಟಿಗಾರ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಗೆ ಕೋವಿಡ್ ಪಾಸಿಟಿವ್
ಇವರು ನವಲಗುಂದದಿಂದ ಗದಗ ಮರ್ಗವಾಗಿ ಲಕ್ಷ್ಮೇಶ್ವರದಲ್ಲಿ ಹತ್ತಿರದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಭಾಗಶ ಕಾರು ಮರಕ್ಕೆ ಸಿಲುಕಿಕೊಂಡಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತ ದೇಹಗಳು ಬಹುದೋರಕ್ಕೆ ಹೋಗಿ ಬಿದ್ದಿದ್ದವು ಎಂಬುದ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಮೃತರ ಪೈಕಿ ಬಾಪೂಗೌಡ ಎಂಬುವವರಿಗೆ ಇದೇ 20 ರಂದು ಮದುವೆ ನಿಶ್ಚಯವಾಗಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.