ಇಂದೇ ಉಸ್ತುವಾರಿ ಬದಲಾಯಿಸಿ, ನನಗೇನು ಅಭ್ಯಂತರವಿಲ್ಲ: ಶಾಸಕರ ವಿರುದ್ಧ ಗರಂ ಆದ ಬಿ.ಸಿ.ಪಾಟೀಲ
Team Udayavani, Apr 11, 2022, 3:17 PM IST
ಗದಗ: ಅಕ್ರಮ ಮರಳುಗಾರಿಕೆ ವಿಚಾರವಾಗಿ ರೋಣ ಶಾಸಕ ಕಳಕಪ್ಪ ಬಂಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಧ್ಯೆ ವಾಗ್ವಾದ ನಡೆಯಿತು. ‘ಇವತ್ತೇ ಉಸ್ತುವಾರಿ ಬದಲಾವಣೆ ಮಾಡಿಸಿ ನನಗೇನು ಅಭ್ಯಂತರವಿಲ್ಲ. ಆಸಕ್ತಿಯೂ ಇಲ್ಲ’ ಎಂದು ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಗರಂ ಆದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಪೊಲೀಸ್ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಎಸ್ ಪಿ ವಿವರಿಸಿದರು. ಕ್ರಮಗಳು ಮತ್ತಷ್ಟು ಬಿಗಿಯಾಗಲಿ ಎಂದು ಸಚಿವ ಬಿ.ಸಿ.ಪಾಟೀಲ ಸೂಚಿಸಿದರು.
ಅದಕ್ಕೆ ನಯವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ ರೋಣ ಶಾಸಕ ಕಳಕಪ್ಪ ಬಂಡಿ, ಹೀಗೆ ಎಲ್ಲ ಅಕ್ರಮ ಗಣಿಗಾರಿಕೆಯನ್ನು ತಡೆಯಿರಿ. ಲಾರಿಗಳಿವೆ ದುಪ್ಪಟ್ಟು ದಂಡ ಹಾಕಿ, ಅವರು ತಮ್ಮ ಬಂಗಾರ, ಒಡೆವೆ ಎಲ್ಲವನ್ನೂ ಕೊಟ್ಟು ಮನೆ ಸೇರಲಿ. ಮನೆ, ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಳ್ಳಲಿ. ರಸ್ತೆ ಕಾಮಗಾರಿಗಳಿಗೆ ಅಮೆರಿಕಾದಿಂದ ಮರಳು ಬರುತ್ತದೆ ಎಂದು ವ್ಯಂಗ್ಯವಾಡಿದರು.
ನೀವು ಆಗಾಗ ಬಂದು ಅಧಿಕಾರಿಗಳಿಗೆ ಈ ರೀತಿ ನಿರ್ದೇಶನ ನೀಡಿದರೆ, ಅಧಿಕಾರಿಗಳು ಅದನ್ನೇ ಜಾರಿಗೊಳಿಸುತ್ತಾರೆ. ಜನರಿಗೆ ಸ್ಥಳೀಯ ಜನಪ್ರತಿನಿಧಿಗಳು ಉತ್ತರ ನೀಡಬೇಕಾಗುತ್ತದೆ ಎಂದು ಶಾಸಕ ಬಂಡಿ ಅಸಮಾಧಾನ ವ್ಯಕ್ತಪಡಿಸಿದರು.
‘ನೀವು ಈ ರೀತಿ ಮಾತನಾಡುವುದು ಸರಿಯಲ್ಲ’ ಎಂದ ಸಚಿವರು, ‘ಸರಕಾರದಿಂದ ಅನುಮತಿ ಪಡೆದು ಕಾನೂನು ಬದ್ಧವಾಗಿ ಮಾಡಲಿ’ ಎಂದು ತಾಕೀತು ಮಾಡಿದರು.
ಇದನ್ನೂ ಓದಿ:ರಾಮನವಮಿ ವೇಳೆ ಹಿಂಸಾಚಾರ: ಗಲಭೆಕೋರರಿಂದ ನಷ್ಟ ವಸೂಲಿ; ಮಧ್ಯಪ್ರದೇಶ ಸಿಎಂ
ಈ ವೇಳೆ ಶಾಸಕ- ಸಚಿವರ ಮಧ್ಯೆ ವಾಗ್ವಾದ ನಡೆಯಿತು. ‘ಜಿಲ್ಲಾ ಉಸ್ತುವಾರಿ ಬೇಡ ಎನ್ನುವುದಾದರೆ, ಮುಖ್ಯಮಂತ್ರಿಗಳಿಗೆ ಹೇಳಿ ಬದಲಾಯಿಸಿಕೊಳ್ಳಿ. ಅದನ್ನು ಹೇಳಬೇಡಿ, ಇದನ್ನು ಮಾಡಬೇಡಿ ಎನ್ನುವುದಾದರೆ ಸಭೆ ಯಾಕೆ ಕರೆದಿರುವುದು. ನಮ್ಮ ಕಾರ್ಯವೈಖರಿ ಬದಲಾಗಲ್ಲ’ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊನೆಗೆ ಮಧ್ಯ ಪ್ರವೇಶಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಇಬ್ಬರನ್ನೂ ಸಮಾಧಾನ ಪಡಿಸಿ, ವಾಕ್ಸಮರಕ್ಕೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.