ಧರ್ಮ-ಸಂಸ್ಕೃತಿ ರಕ್ಷಣೆಗೆ ವಿಎಚ್‌ಪಿ ಬದ್ಧ

ಗೋಹತ್ಯೆ ನಿಲ್ಲಬೇಕು. ಗೋವು ಸಾಕುವ ಮೂಲಕ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.

Team Udayavani, Dec 17, 2021, 6:09 PM IST

ಧರ್ಮ-ಸಂಸ್ಕೃತಿ ರಕ್ಷಣೆಗೆ ವಿಎಚ್‌ಪಿ ಬದ್ಧ

ನರಗುಂದ: ಸಂಘಟನೆಯಲ್ಲಿ ಶಕ್ತಿಯಿದೆ. ಋಷಿ ಮುನಿಗಳು ಸಂಚರಿಸಿದ ಈ ನಾಡು, ದೇಶ ಮತ್ತು ದೇಶದ ಜನರ ಧರ್ಮ, ಸಂಸ್ಕೃತಿ ರಕ್ಷಣೆಗೆ ವಿಶ್ವ ಹಿಂದೂ
ಪರಿಷತ್‌ ಮತ್ತು ಭಜರಂಗದಳ ಶ್ರಮಿಸುತ್ತಿವೆ ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಂಘಟನಾ ಮಂತ್ರಿ ಮನೋಹರ ಮಠದ ಹೇಳಿದರು.

ಪಟ್ಟಣದ ಗಾಂಧಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಆಶ್ರಯದಲ್ಲಿ ಶೌರ್ಯ ಸಂಚಲನ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಮತ್ತು ಅನ್ನದಾತರ ಹೋರಾಟಕ್ಕೆ ಪ್ರೇರಣೆ ನೀಡಿದ ಈ ಬಂಡಾಯ ಭೂಮಿಯಲ್ಲಿ ಗೀತಾ ಜಯಂತಿ ದಿನದಂದು ಶೌರ್ಯ ಯಾತ್ರೆ ಹಮ್ಮಿಕೊಂಡಿದ್ದು ಸಂತಸದ ವಿಷಯ. ದೇಶವನ್ನು ಒಡೆಯುವ, ಸಮಾಜವನ್ನು ಒಡೆಯುವ ಕೆಟ್ಟ ಶಕ್ತಿಯನ್ನು ಮಟ್ಟ ಹಾಕಲು ಈ ಸಂಘಟನೆ ಹುಟ್ಟಿಕೊಂಡಿದೆ. ಜಾತಿ, ಬೇಧ ಮಾಡದೆ ಹಿಂದೂ ಧರ್ಮ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಶ್ರಮಿಸುತ್ತಿದೆ ಎಂದರು.

ಸಾನಿಧ್ಯ ವಹಿಸಿದ್ದ ಪಂಚಗ್ರಹ ಗುಡ್ಡದ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು ಮಾತನಾಡಿ, ಒಂದು ಕಾಲದಲ್ಲಿ ಗೋವುಗಳನ್ನು ಸಾಕಿದವರು ಶ್ರೀಮಂತರು ಎಂದು ಗುರುತಿಸಲಾಗುತ್ತಿತ್ತು. ಆದರೆ ಈಗ ಗೋವು ಮಾಯವಾಗಿವೆ. ಗೋಹತ್ಯೆ ನಿಲ್ಲಬೇಕು. ಗೋವು ಸಾಕುವ ಮೂಲಕ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.

ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಸಮಾಜ, ಮನಸ್ಸು ಒಡೆಯುವುದನ್ನು ತಡೆಯಲು ಮತ್ತು ಜಾಗೃತಿ ಮೂಡಿಸುವ ಕೆಲಸವಾಗಬೇಕು. ದುಶ್ಚಟಗಳನ್ನು ತ್ಯಜಿಸಿ, ಉತ್ತಮ ಸಮಾಜ ನಿರ್ಮಿಸಲು ಮುಂದಾದರೆ ಅದು ಸಾರ್ಥಕವಾಗುತ್ತದೆ. ಯುವಕರಿಂದ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು. ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮಾತನಾಡಿ, ದುರ್ಗಣ, ವ್ಯಸನಗಳನ್ನು ತ್ಯಜಿಸಿ ಧರ್ಮದ ದಿಕ್ಸೂಚಿಯಲ್ಲಿ ನಡೆಯಬೇಕು. ಹನುಮಮಾಲೆ ಧರಿಸುವುದು ಸೇವೆ, ಶ್ರದ್ಧೆಯ ಪ್ರತೀಕವಾಗಿದೆ. ಆಚಾರ ವಿಚಾರ ಪಾಲಕರಾಗಿ ಎಂದರು. ಭಜರಂಗದಳದ ಬಸವರಾಜ ಗಡೇಕಾರ ಇದ್ದರು. ಶ್ರೀನಿವಾಸ ಗುಜಮಾಗಡಿ ಸ್ವಾಗತಿಸಿದರು. ಶಿವರಡ್ಡಿ ಪೆಟ್ಲೂರ ನಿರೂಪಿಸಿ, ವಿಕ್ರಮ್‌ ಬೆಳದಡಿ ವಂದಿಸಿದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.