ಜನ-ಜಾನುವಾರು ರಕ್ಷಣೆಗೆ ಕ್ರಮ ಕೈಗೊಳ್ಳಿ
Team Udayavani, Jun 20, 2021, 11:17 AM IST
ಗದಗ: ನೆರೆ ರಾಜ್ಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆಗೂ ಮುನ್ನವೇ ಮಾಹಿತಿ ನೀಡಲಾಗುವುದು ಎಂದು ಮಹಾರಾಷ್ಟ್ರದ ನೀರಾವರಿ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜ್ಯದ ಪ್ರವಾಹ ಸಿದ್ಧತೆ ಕುರಿತು ಗದಗ ಜಿಲ್ಲೆ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತ ಮಾಹಿತಿ ವಿನಿಮಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನೀರಾವರಿ ಸಚಿವರ ಜತೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಜಲಾಶಯಗಳಿಂದ ರಾಜ್ಯಕ್ಕೆ ನೀರು ಬಿಡುಗಡೆ ಕುರಿತು ಮುಂಚಿತವಾಗಿ ಮಾಹಿತಿ ನೀಡಲಾಗುವುದು. ಜನರು ಮತ್ತು ಜಾನುವಾರುಗಳ ರಕ್ಷಣೆ ಮತ್ತು ತಾತ್ಕಾಲಿಕ ಪುನರ್ವಸತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಜಿಲ್ಲೆಯ ಸ್ಥಳಾಂತರ ಗ್ರಾಮಗಳಲ್ಲಿ ನಿರ್ಮಿಸಲಾದ ಮನೆಗಳ ದುರಸ್ತಿಗಾಗಿ ಅನುದಾನದ ಅಗತ್ಯವಿದೆ ಹಾಗೂ ಮಲಪ್ರಭಾ ನದಿಯ ಒತ್ತುವರಿ ತೆರವುಗೊಳಿಸಿದಲ್ಲಿ ಜಿಲ್ಲೆಗೆ ಪ್ರವಾಹ ಭೀತಿ ಕಡಿಮೆಯಾಗಲಿದೆ ಎಂದರು. ಜಿಲ್ಲಾಧಿ ಕಾರಿ ಎಂ. ಸುಂದರೇಶ್ ಬಾಬು ಮಾತನಾಡಿ, ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ. ಎರಡು ದಿನಗಳಿಂದ ಹೆಚ್ಚಿನ ಮಳೆಯಾಗಿದೆ. ಪ್ರವಾಹ ಸ್ಥಿತಿ ನಿಯಂತ್ರಣದಲ್ಲಿದೆ. ಪ್ರವಾಹ ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆಗಳಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.
ಬೆಣ್ಣೆ ಹಳ್ಳ ಹಾಗೂ ಮಲಪ್ರಭಾ ನದಿಯಿಂದ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ರೋಣ ತಾಲೂಕಿನಲ್ಲಿ 16, ನರಗುಂದ 16, ಶಿರಹಟ್ಟಿ 10, ಮುಂಡರಗಿ 11 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 53 ಗ್ರಾಮಗಳು ಪ್ರವಾಹಕ್ಕೆ ಒಳಗಾಗುವ ಸಂಭವವಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯವಿದ್ದಲ್ಲಿ ತಕ್ಷಣ ತೆರೆಯಲು ಕ್ರಮ ವಹಿಸಲಾಗುವುದು. ನರಗುಂದ 13, ರೋಣ 17, ಮುಂಡರಗಿ 5, ಶಿರಹಟ್ಟಿ 8 ಕಡೆಗಳಲ್ಲಿ ಕಾಳಜಿ ಕೇಂದ್ರ ಗುರುತಿಸಿಟ್ಟುಕೊಳ್ಳಲಾಗಿದೆ ಎಂದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ವಿ.ಸೋಮಣ್ಣ, ಶಶಿಕಲಾ ಜೊಲ್ಲೆ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿಪಂ ಸಿಇಒ ಭರತ್ ಎಸ್., ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.