ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ
Team Udayavani, Jan 2, 2021, 2:09 PM IST
ಗಜೇಂದ್ರಗಡ: ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ನೀಡದಿರುವುದನ್ನು ಖಂಡಿಸಿಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಹಾಕಿ, ಕಚೇರಿ ಮುಂಭಾಗದಲ್ಲಿಯೇಬುತ್ತಿ ಕಟ್ಟಿಕೊಂಡು ಊಟ ಮಾಡಿವಿನೂತನ ಪ್ರತಿಭಟನೆ ನಡೆಸಿದ ಘಟನೆ ಶಾಂತಗೇರಿಯಲ್ಲಿ ಶುಕ್ರವಾರ ನಡೆದಿದೆ.
ಶಾಂತಗೇರಿ ಗ್ರಾಮದ ಮಹಿಳೆಯರಿಗೆ ಗುಡ್ಡಗಾಡುಪ್ರದೇಶದಲ್ಲಿ ಉದ್ಯೋಗಖಾತ್ರಿ ಯೋಜನೆ ಅಡಿ ಕೆಲನೀಡುವುದಲ್ಲದೇ, ಕಡಿಮೆ ಕೂಲಿಯಲ್ಲಿ ಹೆಚ್ಚಿನ ಕೆಲಸ ನೀಡುತ್ತಿದ್ದಾರೆ.ಜೆಸಿಬಿ ಯಂತ್ರಗಳ ಮೂಲಕ ಕೆಲಸಮಾಡಿಸುವ ದುರುದ್ದೇಶದಿಂದ ಕಡಿಮೆ ಕೂಲಿಯ ನೆಪವೊಡ್ಡಿ ಯಾರೂ ಕೆಲಸಕ್ಕೆ ಹೋಗದಂತೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ನಿಯಮಾವಳಿ ಪ್ರಕಾರ ಹೆಚ್ಚಿನ ಕೆಲಸಕ್ಕೆ ಹೆಚ್ಚಿನ ಕೂಲಿ ನೀಡಿ ಎಂದುಕೇಳಿಕೊಂಡರೂ ಗ್ರಾಪಂ ಅ ಧಿಕಾರಿಗಳುಕೂಲಿ ನೀಡುವಲ್ಲಿ ತಾರತಮ್ಯ ಎಸಗುತ್ತಿದ್ದಾರೆ. ಉದ್ಯೋಗ ಖಾತ್ರಿಯೋಜನೆಯನ್ನು ಸಮರ್ಪಕವಾಗಿಅನುಷ್ಠಾನ ಗೊಳಿಸುವಲ್ಲಿ ವಿಫಲರಾಗಿದ್ದಾರೆ. ಕೂಡಲೇ ಮೇಲಧಿಕಾರಿಗಳು ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಗ್ರಾಮದ ಮಹಿಳೆಯರು ಪಂಚಾಯತಿ ಮುಂದೆಯೇ ಗುದ್ದಲಿ,ಪಿಕಾಸಿ, ಸೆಲಿಕಿ ಮತ್ತು ಬುಟ್ಟಿಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಬಸವರಾಜ ಹೊಸಮನಿ, ಶಾಂತಪ್ಪ ಹಟ್ಟಿಮನಿ, ಶಂಕ್ರಪ್ಪ ಹಟ್ಟಿಮನಿ, ಶಾಂತಪ್ಪ ಹುಲ್ಲಣ್ಣವರ, ಉಮೇಶ ಹಲ್ಲಣ್ಣನವರ, ಪ್ರವೀಣ ಹೊಸಮನಿ,ಸಂತೋಷ ಹುಲ್ಲಣ್ಣವರ, ಪ್ರಕಾಶಹುಲ್ಲಣ್ಣನವರ, ಶಾಂತಪ್ಪ ಹೊಸಮನಿ,ಶಿವಪ್ಪ ಹೊಸಮನಿ, ಭರತ್ ತುಗ್ಗಣಿ, ಪರಸಪ್ಪ ಪಿಳಬಂಟರ ಸೇರಿದಂತೆಹಲವಾರು ಜನರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.