![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 1, 2023, 2:39 PM IST
ಗದಗ: ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರವಿವಾರ ನಗರದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ವಿಜಯೇಂದ್ರ ಅವರು, ನಮ್ಮ ನಾಡಿನ ಯುಗಪುರುಷರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಹಾನಗಲ್ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ ನೀಡಿದ ಉತ್ತಮ ಸಂದೇಶ, ನೀತಿಪಾಠಗಳನ್ನು ಯವಕರಿಗೆ ತಲುಪಿಸುವ ಉದ್ದೇಶದಿಂದ ನಿರ್ಮಾಣ ಮಾಡಿರುವ ವಿರಾಟಪುರ ವಿರಾಗಿ ಚಲನಚಿತ್ರ ರಾಜ್ಯ, ದೇಶದ ಜನರ ಮನೆಮನ ತಲುಪಲಿ ಎಂದು ಹಾರೈಸಿದರು.
ವಿರಾಟಪುರ ವಿರಾಗಿ ಕೃತಿಯನ್ನು ಬಿಡುಗಡೆಗೊಳಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನು ಧಾರ್ಮಿಕವಾಗಿ ಆಚರಿಸುವಂತೆ ಅವಕಾಶ ಒದಗಿಸಿ ಕೊಟ್ಟಿರುವ ಜಡೆಯ ಶಾಂತಲಿಂಗ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ಶ್ರೀಗಳ ಹಾಗೂ ನಿರ್ಮಾಪಕರ ಅಪ್ಪಣೆ ಮೇರೆಗೆ ಗದಗ ನಗರದಲ್ಲಿ ಚಲನಚಿತ್ರ ಬಿಡುಗಡೆಯಾದ ದಿನದಿಂದ ಒಂದು ವಾರಗಳ ಕಾಲ ಉಚಿತ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಹೇಳಿದರು.
ಜಡೆಯ ಶಾಂತಲಿಂಗ ಶ್ರೀಗಳು, ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಮ್ಮುಖ ವಹಿಸಿದ್ದರು.
ನಿರ್ದೇಶಕ ಬಿ.ಎಸ್. ಲಿಂಗದೇವರು, ನಟ ಸುಚೇಂದ್ರಪ್ರಸಾದ್, ಸಂಗೀತ ನಿರ್ದೇಶಕ ಮಣಿಕಾಂತ ಖದ್ರಿ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮುಖಂಡ ಅನಿಲ ಮೆಣಸಿನಕಾಯಿ, ತೋಂಟೇಶ ಮಾನ್ವಿ ಇದ್ದರು.
ಇದಕ್ಕೂ ಮುನ್ನ ಬೆಳಗಾವಿ, ಮಹಾರಾಷ್ಟ್ರದ ಸೊಲ್ಲಾಪೂರ, ಮೈಸೂರು ಸೇರಿ ರಾಜ್ಯದ ಆರು ಸ್ಥಳಗಳಿಂದ ಆರಂಭವಾದ ವಿರಾಗಿ ಶ್ರೀ ಕುಮಾರೇಶ್ವರ ರಥದ ಮೆರವಣಿಗೆ ನಗರದಲ್ಲಿ ನಡೆಯಿತು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.