ವಿಶ್ವನಾಥರೆಡ್ಡಿ ವಿಶ್ವಾಸಕ್ಕೆ ಒಲಿಯಿತು ಕೃಷಿ


Team Udayavani, Jan 20, 2020, 3:51 PM IST

gadaga-tdy-2

ಲಕ್ಷ್ಮೇಶ್ವರ: ಕೃಷಿಯಿಂದ ಕೈಸುಟ್ಟುಕೊಳ್ಳುತ್ತಿರುವ ರೈತ ಸಮುದಾಯ ಇದರಿಂದ ವಿಮುಖರಾಗುತ್ತಿದ್ದಾರೆ.ಆದರೆ ಭೂಮಿತಾಯಿ ನಂಬಿದವರನ್ನು ಕೈ ಬಿಡುವುದಿಲ್ಲ ಎಂಬ ವಿಶ್ವಾಸದಿಂದ ಸಮೀಪದ ಚಿಕ್ಕಸವಣೂರ ಗ್ರಾಮದ ಯುವ ಪ್ರಗತಿಪರ ರೈತ ವಿಶ್ವನಾಥರೆಡ್ಡಿ ಮಲ್ಲಪ್ಪ ಗೋಕಾವಿ ಕೃಷಿಯಿಂದಲೇ ಬದುಕಿನಲ್ಲಿ ಖುಷಿ ಕಂಡಿದ್ದಾರೆ.

ಮೂಲತಃ ಕೃಷಿ ಕುಟುಂಬದಿಂದಲೇ ಬಂದಿರುವ ವಿಶ್ವನಾಥ ಅವರು ತಮ್ಮ ತಂದೆ ಮಲ್ಲಪ್ಪನವರು ಕೋಟಿ ವಿದ್ಯೆಗಿಂತ ಮೇಟಿವಿದ್ಯೆ ಮೇಲು ಎಂದು ವಿಶ್ವನಾಥ ಅವರಲ್ಲಿ ತುಂಬಿದ ವಿಶ್ವಾಸ ಅವರನ್ನೀಗ 2019-20 ನೇ ಸಾಲಿನ ತಾಲೂಕು ಮಟ್ಟದ ಶ್ರೇಷ್ಠ ಯುವ ಕೃಷಿಕನನ್ನಾಗಿ ಗುರುತಿಸುವಂತೆ ಮಾಡಿದೆ. ಜ.20ರಂದು ಧಾರವಾಡದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅವರು ತಮ್ಮ ಒಟ್ಟು 15 ಎಕರೆ ನೀರಾವರಿ ಪ್ರದೇಶದಲ್ಲಿ 3 ಎಕರೆ ಜಮೀನಿನಲ್ಲಿ ವಿವಿಧ ಸಸ್ಯಗಳು, ಮರಗಳು, ಹಣ್ಣು-ಹಂಪಲಗಳನ್ನು ಬೆಳೆಯುವುದರ ಜತೆಗೆ ಆಡು, ಕುರಿ, ಕೋಳಿ, ಆಕಳು ಸಾಕಾಣಿಕೆಯಉಪ ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ.

ಇವರು ಸಮಗ್ರ ಕೃಷಿಯಲ್ಲಿ ಖುಷಿ ಕಂಡುಕೊಂಡಿದ್ದು ದೀರ್ಘ‌ಕಾಲಿನ ಉತ್ತಮ ಆದಾಯ ತರುವ 1150 ಮಹಾಗಣಿ ಸಸ್ಯ, 1150 ಶ್ರೀಗಂಧ, 5 ಎಕರೆ( 400 ಗಿಡ) ಗೋಡಂಬಿ, ತೋಟಗಾರಿಕೆಯ ಇತರೆ ಬೆಳೆಗಳಾದ ಪಪ್ಪಾಯಿ, ಕರಬೇವು, ಪೇರಲ, ಮಾವು,ನುಗ್ಗೆ ಬೆಳೆಯಲಾಗಿದೆ. ಹಡಗು ನಿರ್ಮಾಣ ಮತ್ತು ಮುಖ್ಯವಾದ ಪಿಠೊಪಕರಣಗಳಿಗೆ ಬಳಸುವ ಅತ್ಯಂತ ಬೆಲೆ ಬಾಳುವ ಮಹಾಗಣಿ ಮತ್ತು ಶ್ರೀಗಂಧ ಸಸ್ಯ ಬೆಳೆಸುತ್ತಿದ್ದಾರೆ. ಇವುಗಳು 10-12 ವರ್ಷಕ್ಕೆ ಕಡಿಮೆ ಖರ್ಚಿನಲ್ಲಿ ಸಾಕಷ್ಟು ಆದಾಯ ತರುವ ಮರಗಳಾಗುತ್ತವೆ.

ಆಡು-ಕುರಿ-ಕೋಳಿ ಸಾಕಾಣಿಕೆ: ಕೊಟ್ಟಿಗೆ ಪದ್ಧತಿಯಲ್ಲಿ ವಿನೂತವಾಗಿ ಕುರಿ, ಆಡು, ಕೋಳಿ ಸಾಕಾಣಿಕೆಯಕೈಗೊಳ್ಳುವ ಮೂಲಕ ವರ್ಷದುದ್ದಕ್ಕೂ ಉತ್ತಮ ಆದಾಯ ತಂದುಕೊಳ್ಳುವ ಉಪಕಸುಬು ಮಾಡುತ್ತಿದ್ದಾರೆ. ಆಡು-ಕುರಿ ಮತ್ತು ಆಕಳಿಗಾಗಿ ತೋಟದಲ್ಲಿಕುದರಿಮೆಂತೆ, ಬೇಲಿ ಮೆಂತೆ, ರೇಷ್ಮೆ ಸೇರಿ ವಿಭಿನ್ನ ಜಾತಿಯ ಹುಲ್ಲುಗಳನ್ನು ಬೆಳೆಸುವ ಮೂಲಕ ಹಸಿರು ಮೇವನ್ನು ಬೆಳೆಯುತ್ತಾರೆ. ಈ ಉಪ ಕಸುಬುಗಳಿಂದ ವರ್ಷಕ್ಕೆ 5 ಲಕ್ಷ ರೂ. ಆದಾಯ ತಂದುಕೊಳ್ಳುತ್ತಾರೆ. ಅಲ್ಲದೇ ಇದರಿಂದ ಬರುವ ಗೊಬ್ಬರವನ್ನು ತೋಟಕ್ಕೆ ಬಳಸಿ ಸಂಪೂರ್ಣ ಸಾವಯುವ ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ.

ಸಮಗ್ರ ಕೃಷಿಯಿಂದ ಬದುಕು ಕಟ್ಟಿಕೊಂಡಿದ್ದಲ್ಲದೇ ನಾಲ್ಕಾರು ಜನರಿಗೂ ಉದ್ಯೋಗ ಕಲ್ಪಿಸುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ. ಇವರ ಸಾಧನೆಯನ್ನು ಮನಗಂಡ ತೋಟಗಾರಿಕೆ ಮತ್ತು ಕೃಷಿ ಇಲಾಖೆಯವರು 2019-20ನೇ ಸಾಲಿನ ತಾಲೂಕು ಮಟ್ಟದ ಶ್ರೇಷ್ಠ ಯುವ ಕೃಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಜ.18 ರಿಂದ 20 ರವರೆಗೆ ಧಾರವಾಡದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಈ ಪ್ರಶಸ್ತಿ ಪಡೆಯಲಿದ್ದಾರೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.