ಕಂಟೇನ್ಮೆಂಟ್ ನಿವಾಸಿಗಳಿಗೆ ಎಚ್ಚರಿಕೆ
Team Udayavani, May 16, 2020, 3:15 PM IST
ಗದಗ: ಪ್ರತಿಬಂಧಿತ ಪ್ರದೇಶವಾಗಿದ್ದರೂ ಗಂಜೀಬಸವೇಶ್ವರ ವೃತ್ತ ಪ್ರದೇಶದಲ್ಲಿ ದ್ವಿತೀಯ ಸಂಪರ್ಕದಿಂದ ಸೋಂಕಿಗೆ ಒಳಗಾದ ಎರಡು ಪ್ರಕರಣಗಳು ಕೋವಿಡ್-19 ಸೋಂಕು ಸಕಾರಾತ್ಮಕ ಎಂದು ದೃಢಪಟ್ಟಿವೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶವನ್ನು ನಿರ್ಬಂಧಿಸಲಾಗಿದ್ದು, ಯಾರೂ ಮನೆಯಿಂದ ಹೊರ ಬರಬಾರದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಾರ್ವಜನಿಕರಿಗೆ ಎಚ್ಚರಿಸಿದರು.
ನಗರದ ಗಂಜೀಬಸವೇಶ್ವರ ವೃತ್ತ ಭಾಗಕ್ಕೆ ಭೇಟಿ ನೀಡಿ, ಕಂಟೇನ್ಮೆಂಟ್ ಪ್ರದೇಶಗಳನ್ನು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಕಂಟೇನ್ಮೆಂಟ್ ಎಂದು ಘೋಷಿಸಿದ್ದರೂ, ದ್ವಿತೀಯ ಸಂಪರ್ಕದಲ್ಲಿದ್ದ ಇನ್ನಿಬ್ಬರಿಗೆ ಸೋಂಕು ಹರಡಿರುವುದು ಕಳವಳಕಾರಿ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರವು ಆರೋಗ್ಯ ವಿಪತ್ತಿನ ಕಾಯ್ದೆಯಡಿಜಾರಿಗೊಳಿಸಿದ ನಿರ್ಬಂಧಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸದಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಹೊರಗೆ ಕಾಲಿಟ್ಟರೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುವುದರಿಂದ ಜನರು ಮನೆ ಬಿಟ್ಟು ಹೊರಗೆ ಬರದಿರಲು ಪ್ರತಿಬಂಧಿಸಲಾಗಿದೆ. ಜನರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗದಗ –ಬೆಟಗೇರಿ ನಗರಸಭೆ ಈ ಕುರಿತು ಸಾಕಷ್ಟು ಜಾಗೃತಿ ಮೂಡಿಸಿದೆ. ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಹೋಗಿ ಎಚ್ಚರಿಸುತ್ತಿದ್ದಾರೆ. ದಯವಿಟ್ಟು ನಿಗದಿತ ಪ್ರತಿಬಂಧಕ ಅವಧಿಯಲ್ಲಿ ಮನೆ ಬಿಟ್ಟು ಹೊರಗೆ ಬರದೆ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಎಸ್‌ಪಿ ಯತೀಶ್ ಎನ್., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿವೈಎಸ್‌ಪಿ ಪ್ರಹ್ಲಾದರಾವ್, ಗದಗ -ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.