ಇಂದಿರಾ ಕ್ಯಾಂಟೀನ್ ಶುರು ಯಾವಾಗ?
Team Udayavani, Jun 26, 2019, 10:44 AM IST
ಶಿರಹಟ್ಟಿ: ಇಂದಿರಾ ಕ್ಯಾಂಟೀನ್ ಆರಂಭವಾಗದೇ ಬೀಗ ಜಡಿದಿರುವುದು.
ಶಿರಹಟ್ಟಿ: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಸಿದ್ಧವಾಗಿ ಆರೇಳು ತಿಂಗಳಾದರೂ ಈವರೆಗೆ ಆರಂಭವಾಗಿಲ್ಲ. ಈ ಕುರಿತು ಯಾರೂ ಕೂಡಾ ವಿಚಾರಿಸಿಲ್ಲ.
ಹಿಂದಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಊಟ-ಉಪಾಹಾರ ಲಭ್ಯವಾಗಬೇಕು ಎನ್ನುವ ಬಯಕೆಯಿಂದ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಮಂಜೂರಾಗಿತ್ತು. ಈಗ ಕಟ್ಟಡ ನಿರ್ಮಾಣ ಮುಗಿದಿದ್ದು, ಆರಂಭ ಯಾವಾಗ ಎನ್ನವುದು ಯಕ್ಷ ಪ್ರಶ್ನೆಯಾಗಿದೆ. ಈ ಕುರಿತು ಪಟ್ಟಣದ ಕಾಂಗ್ರೆಸ್ ಮುಖಂಡರು ಮತ್ತು ಜಿಲ್ಲಾ ಮುಖಂಡರು ಇದರ ಬಗ್ಗೆ ಕಾಳಜಿ ತೋರುತ್ತಿಲ್ಲ. ಜೊತೆಗೆ ಅಧಿಕಾರಿಗಳ ನಿರ್ಲಕ್ಷವೂ ಕೂಡಾ ಎದ್ದು ಕಾಣುತ್ತಿದೆ.
ಈ ಕುರಿತು ಕರವೇ ತಾಲೂಕು ಘಟಕದ ಅಧ್ಯಕ್ಷ ರಫಿಕ್ ಕೆರಿಮನಿ ಪ್ರತಿಕ್ರಿಯಿಸಿ, ಸರಕಾರ ಬಡವರಿಗಾಗಿ ಯೋಜನೆ ರೂಪಿಸಿದ್ದು, ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಕುರಿತು ಸಂಬಂಧಪಟ್ಟವರನ್ನು ವಿಚಾರಿಸಿದಾಗ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ನಿರ್ಲಕ್ಷ್ಯ ಧೋರಣೆ ಮುಂದುವರೆದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.