ತೋಳ ಕೊಂದು ಬೈಕ್‌ಗೆ ಕಟ್ಟಿ ಎಳೆದೊಯ್ದ ಯುವಕರು
Team Udayavani, Oct 18, 2021, 6:43 PM IST
ಲಕ್ಷ್ಮೇಶ್ವರ : ಸೋಗಿವಾಳ ಗ್ರಾಮದಲ್ಲಿ ಮೂವರು ಯುವಕರ ಮೇಲೆ ತೋಳವೊಂದು ದಾಳಿ ಮಾಡಿದೆ. ಇದರಿಂದ ಆಕ್ರೋಶಗೊಂಡ ಯುವಕರು ತೋಳ ಹೊಡೆದು ಸಾಯಿಸಿ ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ಯುತ್ತಿರುವ ಅಮಾನವೀಯ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆ ಅ ಧಿಕಾರಿಗಳು ಯುವಕರ ಪತ್ತೆಗೆ ಜಾಲ ಬೀಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಘಟನೆಯ ವಿವರ: ಸೋಗಿವಾಳ ಗ್ರಾಮದಲ್ಲಿ ಅ.13 ಮತ್ತು 14 ರಂದು ತೋಳವೊಂದು ಗ್ರಾಮಕ್ಕೆ ನುಗ್ಗಿ ಕೆಲವರ ಮೇಲೆ ದಾಳಿ ಮಾಡಿದೆ. ಇದರಿಂದ ರೊಚ್ಚಿಗೆದ್ದ ಕೆಲ ಯುವಕರು ತೋಳವನ್ನು ಕೊಂದು ಅದನ್ನು ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ದು ಬೀಸಾಕಿದ್ದಾರೆ. ಅಲ್ಲದೇ, ಈ ದೃಶ್ಯವನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.
ತೋಳದ ದಾಳಿಗೆ ಗಾಯಗೊಂಡ ಶಿವಾನಂದ ಅತ್ತಿಗೇರಿ ಎಂಬ ಯುವಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ ಚಿಕಿತ್ಸೆಯಿಂದ ಚೇತರಿಸಿಕೊಂಡು ಗ್ರಾಮಕ್ಕೆ ತೆರಳಿದ್ದಾನೆ. ವಿಡಿಯೋದಲ್ಲಿನ ಬೈಕ್ ಹಿಂದಿನ ನಂಬರ್ ಪರೀಕ್ಷಿಸಿದ ಅರಣ್ಯ ಇಲಾಖೆ ಅ ಧಿಕಾರಿಗಳು ಬೈಕ್ ಮಾಲಿಕ ಶಿವರಾಜಕುಮಾರ ಕುರುಬರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಬೈಕ್ ಮಾಲಿಕ ನಾಪತ್ತೆಯಾಗಿದ್ದಾನೆ. ತೋಳಕ್ಕೆ ಹುಚ್ಚು ಹಿಡಿದಿತ್ತೆನ್ನಲಾಗಿದ್ದು, ಸತ್ತಿರುವ ತೋಳದ ಕಳೆಬರಹಕ್ಕಾಗಿ ಅರಣ್ಯ ಸಿಬ್ಬಂದಿ ತಲಾಷ್ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.