ಮಹಿಳಾ ಸಬಲೀಕರಣ ಪ್ರಯತ್ನ
Team Udayavani, Sep 8, 2019, 10:24 AM IST
ಗದಗ: ಮೈಸೂರು ದಸರಾ ಉತ್ಸವದಲ್ಲಿ ಜಿ.ಪಂ. ವತಿಯಿಂದ ಪ್ರದರ್ಶಿಸಲು ಉದ್ದೇಶಿಸಿರುವ ಸ್ತಬ್ಧ ಚಿತ್ರದ ನೀಲನಕ್ಷೆ.
ಗದಗ: ಬೇಟಿ ಬಚಾವೋ, ಬೇಟಿ ಪಡಾವೊ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದರಿಂದ ಗದಗ ಜಿಲ್ಲಾಡಳಿತಕ್ಕೆ ಕೇಂದ್ರ ಸರಕಾರ ನಿಡುವ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿತ್ತು. ಈಗ ಅದೇ ಯೋಜನೆಯ ಸಾರವನ್ನು ಸ್ತಬ್ಧಚಿತ್ರದ ಮೂಲಕ ಮೈಸೂರು ದಸರಾ ಉತ್ಸವದಲ್ಲಿ ಪ್ರದರ್ಶಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ, ಲಿಂಗಾನುಪಾತ ಕಡಿಮೆ ಮಾಡುವುದು, ಮಹಿಳಾ ಸಬಲೀಕರಣ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು, ಹೆಣ್ಣು ಮಕ್ಕಳ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು 2015ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆಯನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದರೊಂದಿಗೆ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿಗೆ ಒತ್ತು ನೀಡಲಾಗಿದೆ. ಈ ಬಾರಿ ಮೈಸೂರು ದಸರಾ ಉತ್ಸವದಲ್ಲಿ ಈ ಯೋಜನೆಯನ್ನೇ ಸ್ತಬ್ಧ ಚಿತ್ರವನ್ನಾಗಿಸಿ ಪ್ರದರ್ಶಿಸಲು ಅಗತ್ಯ ಸಿದ್ಧತೆಗಳಿಗೆ ಚಾಲನೆ ನೀಡಿದೆ.
2017ರಲ್ಲಿ ತ್ರಿಕೂಟೇಶ್ವರ ದೇವಸ್ಥಾನ, ವೀರನಾರಾಯಣ ಮತ್ತು ಜುಮ್ಮಾ ಮಸೂತಿ ಹೊಂದಿರುವ ಒಂದೇ ಟ್ರಸ್ಟ್ ಕಮಿಟಿಯ ಸ್ತಬ್ಧಚಿತ್ರ, 2018ರಲ್ಲಿ ಜಿಲ್ಲಾಡಳತ ಕೈಗೊಂಡಿದ್ದ ಬೃಹತ್ ಮರಗಳ ಮರು ನೆಡುವಿಕೆ ಕುರಿತು ಸ್ತಬ್ಧ ಚಿತ್ರ ರೂಪಿಸಲಾಗಿತ್ತು. ಈ ಪೈಕಿ 2017ರ ದಸರಾ ಉತ್ಸವದಲ್ಲಿ ಗದಗ ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಬಂದಿತ್ತು. ಕಳೆದ ಎರಡೂ ವರ್ಷಗಳಿಂದ ಇಲ್ಲಿನ ಬಾಲಾಜಿ ಎಂಟರ್‌ಪ್ರೖಸೆಸ್‌ನ ಕಲಾವಿದ ರವಿ ಶಿಶುವಿನಹಳ್ಳಿ ಅವರಿಂದ ಜಿಲ್ಲೆಯ ಸ್ತಬ್ಧ ಚಿತ್ರ ತಯಾರಿಸುತ್ತಿದ್ದು, ಈ ಬಾರಿಯೂ ಅವರಿಗೆ ವಹಿಸಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಮೈಸೂರು ದಸರಾ ಉತ್ಸವ-2019ರ ಪ್ರಯುಕ್ತ ಪ್ರತೀ ವರ್ಷದಂತೆ ಗದಗ ಜಿ.ಪಂ. ನಿಂದ ಸ್ತಬ್ಧ ಚಿತ್ರ ನಿರ್ಮಿಸಲಾಗುತ್ತಿದ್ದು, ಈ ಬಾರಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಮೈಸೂರು ದಸರಾ ಉಪ ಸಮಿತಿಯಿಂದಲೂ ಒಪ್ಪಿಗೆ ಪಡೆಯಲಾಗಿದೆ. ಈ ಸ್ತಬ್ಧ ಚಿತ್ರದ ಮೂಲಕ ಸಾರ್ವಜನಿಕರಲ್ಲಿರುವ ತಾರತಮ್ಯ ಧೋರಣೆ ಹೋಗಲಾಡಿಸುವುದಾಗಿದೆ.•ಚಂದ್ರಶೇಖರ ಆರ್. ಮುಂಡರಗಿ ಜಿ.ಪಂ. ಯೋಜನಾ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.