ಪಿಯು ಇಂಗ್ಲಿಷ್ ಪರೀಕ್ಷೆ ಯಶಸ್ಸಿಗೆ ಶ್ರಮಿಸಿ
Team Udayavani, Jun 13, 2020, 3:25 PM IST
ಸಾಂದರ್ಭಿಕ ಚಿತ್ರ
ಗದಗ: ಬಾಕಿ ಉಳಿದಿರುವ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ಜೂ. 18ರಂದು ನಡೆಸಲಾಗುತ್ತಿದ್ದು, ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪದೋಷವಾಗದಂತೆ ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಪ್ರವೇಶಧ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನಿರ್ದೇಶಿಸಬೇಕು. ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚಿಸಿದರು.
ಲಾಕ್‌ಡೌನ್ ಕಾರಣದಿಂದಾಗಿ ಬೇರೆ ಜಿಲ್ಲೆಯ ಕೆಲ ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಉಳಿದುಕೊಂಡಿದ್ದು, ಸರ್ಕಾರದ ನಿರ್ದೇಶನದಂತೆ ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಪರೀಕ್ಷೆಗೂ ಮುನ್ನ ಸ್ವಚ್ಛತೆ ಕಾಪಾಡಿಕೊಳ್ಳಬೇಕಲ್ಲದೇ, ಪರೀಕ್ಷಾರ್ಥಿಗಳು ಕುಳಿತುಕೊಳ್ಳಲು ಡೆಸ್ಕ್ಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಎರಡು ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕೋವಿಡ್ ಭೀತಿ ಹೋಗಲಾಡಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ನಿರ್ದೇಶಿಸಿದರು. ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್. ಎಸ್. ರಾಜೂರ ಮಾತನಾಡಿ, ಜಿಲ್ಲೆಯ 19 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಹೆಚ್ಚುವರಿ ಕೊಠಡಿ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ., ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಧೀಕ್ಷಕರು, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.