ಬೇಡಿಕೆ ಈಡೇರಿಕೆಗೆ ಬೀದಿಗಿಳಿದ ಕಾರ್ಮಿಕರು
ಸಾರ್ವತ್ರಿಕ ಮುಷ Rರದ ಭಾಗವಾಗಿ ಪ್ರತಿಭಟನೆ
Team Udayavani, Mar 29, 2022, 3:30 PM IST
ಗದಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಕರೆ ನೀಡಿರುವ ಅಖೀಲ ಭಾರತ ಎರಡು ದಿನಗಳ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವಿವಿಧ ವಲಯಗಳ ಕಾರ್ಮಿಕರು ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ-ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೆ ಮಾಸಿಕ 7,500 ರೂ. ನೇರ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯ ನೀಡಬೇಕು. ಬಂಡವಾಳ ಶಾಹಿಗಳ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್(ತಿದ್ದುಪಡಿ) ಮಸೂದೆಯನ್ನು ವಾಪಸ್ ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಂಗನವಾಡಿ, ಆಶಾ, ಬಿಸಿಯೂಟ ಸೇರಿದಂತೆ ಸ್ಕೀಂ ವರ್ಕರ್ಸ್ ಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು. ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಸಾಮಾನ್ಯ ಕನಿಷ್ಟ ವೇತನ 26 ಸಾವಿರ ರೂ. ಜಾರಿಗೆ ತರಬೇಕು. ಹಮಾಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ವಸತಿ ರಹಿತ ಅಸಂಘಟಿತ ಕಾರ್ಮಿಕರಿಗೆ ವಸತಿ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ, ಬಸವರಾಜ ಮಂತೂರು, ಆರ್.ಎಸ್.ಸಂಕನಗೌಡ್ರ, ರುದ್ರಪ್ಪ ಕಂದಗಲ್ಲ, ಶಿವು ಮೊರಬ, ಯಮುನಾ ಗೊಟೂರು, ಸಾವಿತ್ರಿ ಸಬನೀಸ, ಶೈಲಜಾ ಕೊಂಕಲ, ನಾಗರತ್ನ ಬಡಿಗಣ್ಣವರ, ಶೋಭಾ ಕರಿಲಿಂಗಣ್ಣವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.