ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಧರಣಿ ಸತ್ಯಾಗ್ರಹ
Team Udayavani, Jul 3, 2019, 10:05 AM IST
ಮುಂಡರಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮುಂಡರಗಿ: ತಾಲೂಕಿನ ಕಟ್ಟಡ ಕಾರ್ಮಿಕರು, ಬಾರ ಬೈಂಡಿಂಗ್ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಮನವಿ ಸಲ್ಲಿಸಿದರು.
ಕಾರ್ಮಿಕ ಇಲಾಖೆ ಕಾರ್ಯಾಲಯಕ್ಕೆ ಕಾರ್ಮಿಕರು ತೆರಳಿ ಸಮಸ್ಯೆಗಳನ್ನು ಹೇಳಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಶೈಕ್ಷಣಿಕ ಧನ ಸಹಾಯ, ವೈದ್ಯಕೀಯ ಧನ ಸಹಾಯ, ಮರಣ ಧನ ಸಹಾಯ, ಮದುವೆ ಸಹಾಯ ಧನ, ಅನಿಲ ಭಾಗ್ಯ ಸೇರಿದಂತೆ ಯಾವುದೇ ಸೌಲಭ್ಯಗಳು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಲಾಯಿತು.
ತಹಶೀಲ್ದಾರ್ ಡಾ| ವೆಂಕಟೇಶ ನಾಯಕರಿಗೆ ಮನವಿ ಸಲ್ಲಿಸಲಾಯಿತು.
ಗ್ಯಾನಪ್ಪ ಶೀರಿ, ಮುದಿಯಪ್ಪ ಕುಂಬಾರ, ಬಾಷು ನಾಯ್ಕರ, ನಾಗರಾಜ ವಡ್ಡರ್, ರಾಜಾಭಕ್ಷಿ ಬೆಟಗೇರಿ, ಸುಭಾಸ ಕುಂಬಾರ, ನಾಗರಾಜ ಕೋರ್ಲಹಳ್ಳಿ, ಅಡಿವೆಪ್ಪ ಛಲವಾದಿ, ರಾಮಣ್ಣ ಬಂಡಿವಡ್ಡರ್, ಸುರೇಶ ಕರಮುಡಿ, ಮದಲಗಟ್ಟಿ ಕಲ್ಲಕುಟಿರ್, ರಾಮಣ್ಣ ಕಲ್ಲಜುಟಿಗರ, ವೆಂಕಟೇಶ ಕರಡಿಕೊಳ್ಳ ಫೀರೋಜ್‌ಖಾನ್ ಘೋರಿ, ಸಲೀಂ ಅಹ್ಮದ್ ತಳಗಡೆ, ಖಾಜಾಸಾಬ್ ಶಿರಹಟ್ಟಿ, ನೌಷಾದಸಾಬ್ ಶಿರಹಟ್ಟಿ, ಕಾಶಿಮಸಾಬ್ ಹಮ್ಮಸಾಗರ ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.