ಪೌರಕಾರ್ಮಿಕರ ಗಂಟಲು ದ್ರವ ಸಂಗ್ರಹ

Team Udayavani, Jul 5, 2020, 1:50 PM IST

ಪೌರಕಾರ್ಮಿಕರ ಗಂಟಲು ದ್ರವ ಸಂಗ್ರಹ

ಗದಗ: ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ನಗರಸಭೆ ಪೌರ ಕಾರ್ಮಿಕರಿಗೆ ಶನಿವಾರ ಇಲ್ಲಿನ ಮುನ್ಸಿಪಲ್‌ ಕಾಲೇಜು ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ನಗರಸಭೆ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಲಾಯಿತು. ಮಧುಮೇಹ, ರಕ್ತದೊತ್ತಡ, ಎಲುಬು ಮತ್ತು ಕೀಲು ನೋವು ಸೇರಿದಂತೆ ಇನ್ನಿತರೆ ಕಾಯಿಲೆಗಳ ಬಗ್ಗೆಯೂ ತಪಾಸಣೆ ನಡೆಸಿದ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸ್ಥಳದಲ್ಲೇ ಔಷಧೋಪಚಾರ ನೀಡಿದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡಿದರು.

ಇದೇ ವೇಳೆ ಕಾಲೇಜಿನ ಪ್ರತ್ಯೇಕ ಕೊಠಡಿಯಲ್ಲಿ ಪೌರ ಕಾರ್ಮಿಕರಿಂದ ಗಂಟಲು ದ್ರವ್ಯ ಮಾದರಿ ಸಂಗ್ರಹಿಸಿ ಕೋವಿಡ್‌-19 ಪರೀಕ್ಷೆಗಾಗಿ ಜಿಮ್ಸ್‌ ಪ್ರಯೋಗಾಲಯಕ್ಕೆ ರವಾನಿಸಲಾಯಿತು. ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು, ಮಹಾಮಾರಿ ಕೋವಿಡ್‌-19 ಸೋಂಕನ್ನು ಸರಳ ಪರಿಹಾರೋಪಾಯದ ಮೂಲಕ ತಡೆಗಟ್ಟಬಹುದು. ಕೋವಿಡ್‌ ಬಗ್ಗೆ ಜನರು ಹಾಗೂ ಪೌರ ಕಾರ್ಮಿಕರು ಭಯಬೀತರಾಗದೇ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸೊಂಕಿನಿಂದ ಮುಕ್ತರಾಗಬೇಕು. ಅದಕ್ಕಾಗಿ ಮನೆಯಿಂದ ಹೊರಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜನ ಸಂದಣಿಯಿಂದ ದೂರವಿರಬೇಕು. ಸಾಮಾಜಿಕ ಅಂತರ ಮರೆಯಬಾರದು. ಇಂತಹ ಸಾಮಾನ್ಯ ಕಟ್ಟುಪಾಡುಗಳನ್ನು ಪಾಲಿಸಿದರೆ ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಿದರು.

ಎಸ್‌ಪಿ ಯತೀಶ ಎನ್‌. ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್‌.ಎನ್‌. ರುದ್ರೇಶ, ಪರಿಸರ ಅಭಿಯಂತರ ಗಿರೀಶ ತಳವಾರ, ವಿರೂಪಾಕ್ಷಪ್ಪ ರಾಮಗಿರಿ, ಎಂ.ಎಂ. ಮಕಾನದಾರ, ಎ.ವೈ. ದೊಡ್ಡಮನಿ, ಚಂದ್ರಶೇಖರ ಹಾದಿಮನಿ, ಕೆಂಚಪ್ಪ ಪೂಜಾರಿ, ಸಣ್ಣಪ್ಪ ಬೊಳಮ್ಮನವರ ಇದ್ದರು.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.