26ರಂದು ಮೈಸೂರಲ್ಲಿ ವಿಶ್ವ ರೈತ ದಿನಾಚರಣೆ

ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರ ಚಿಂತನೆ ನಡೆಸಬೇಕು.

Team Udayavani, Dec 15, 2021, 1:36 PM IST

26ರಂದು ಮೈಸೂರಲ್ಲಿ ವಿಶ್ವ ರೈತ ದಿನಾಚರಣೆ

ಗದಗ: ಕರ್ನಾಟಕ ರಾಜ್ಯ ಬೆಳೆಗಾರರ ಸಂಘದಿಂದ ಡಿ.26 ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ವಿಶ್ವ ರೈತ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಒತ್ತಾಯಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ವೀರನಗೌಡ ಪಾಟೀಲ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಶೇ.65 ಕ್ಕಿಂತಲೂ ಹೆಚ್ಚು ಜನರು ಕೃಷಿಯಲ್ಲಿ ನಿರತ ರಾಗಿದ್ದಾರೆ. ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೈಗಾರಿಕೋದ್ಯಮಗಳು, ಯಾಂತ್ರೀ ಕರಣ ಉದ್ದಿಮೆಗಳ ಬೃಹತ್‌ ಪ್ರಮಾಣದಲ್ಲಿ ಬೆಳವಣಿಗೆ ಯಾಗಿದ್ದರಿಂದ ಹವಾಮಾನ ಕಲುಷಿತ ಗೊಂಡಿದೆ. ಅಲ್ಲದೇ, ರೈತರು ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ವಾರ್ಷಿಕ ಆದಾಯ ಕಡಿಮೆಯಾಗಿದ್ದರಿಂದ ಬಹುತೇಕ ರೈತರು ಕೃಷಿ ಯಿಂದ ವಿಮುಖರಾಗುತ್ತಿದ್ದಾರೆ ಎಂದರು.

ಈ ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರ ಚಿಂತನೆ ನಡೆಸಬೇಕು. ಅವುಗಳನ್ನು ಪರಿಹರಿಸುವುದರ ಜೊತೆಗೆ ರೈತರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿ ಸಬೇಕು. ತುಂಡು ಜಮೀನಿನಿಂದ ಹೆಚ್ಚು ಲಾಭ ಸಿಗದೇ ರೈತರಿಗೆ ಸಾಮೂಹಿಕ ಪಾಲುದಾರಿಕೆಯಲ್ಲಿ ಕೃಷಿ ಪದ್ಧತಿ ಪರಿಚಯಿಸಬೇಕು. ರೈತರು ರಾಸಾಯನಿಕ ಗೊಬ್ಬರಕ್ಕೆ ಮಾರು ಹೋಗಿರುವುದನ್ನು ತಪ್ಪಿಸಲು ಪಶು ಸಂಗೋಪನೆ ಹಾಗೂ ಸಮಗ್ರ ಕೃಷಿ ಪದ್ಧತಿಗೆ ಒತ್ತು ನೀಡಬೇಕು. ಕೃಷಿ ಕಾರ್ಮಿಕರ ಕೊರತೆ ಹಾಗೂ ಆರ್ಥಿಕ ವೆಚ್ಚದಿಂದ ಮುಕ್ತಿ ಹೊಂದಲು ಕೃಷಿ ಯಂತ್ರೋಪಕರಣಗಳು ಸುಲಭವಾಗಿ ಬಾಡಿಗೆಗೆ ಒದಗಿಸುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.

ಕಾರ್ಮೀಕರ ಕೌಶಲ್ಯ ಅಭಿವೃದ್ಧಿಗೆ ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ರೈತರಿಗೆ ಅಗತ್ಯಕ್ಕೆ ತಕ್ಕಂತೆ ವಿದ್ಯುತ್‌ ಪೂರೈಕೆ ಮಾಡಬೇಕು. ಹವಾಮಾನ ವೈಫರೀತ್ಯದಿಂದ ಅಪಾರ ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಬೇಕು. ಕನಿಷ್ಟ ಬೆಂಬಲ ಬೆಲೆಯನ್ನು ಎಲ್ಲ ಬೆಳೆಗಳಿಗೂ ವಿಸ್ತರಿಸಬೇಕು. ಕಬ್ಬಿನಿಂದ ಉತ್ಪಾದಿಸುವ ಎತನಾಲ್‌ ಲಾಭಂಶದಲ್ಲಿ ರೈತರಿಗೆ ಪಾಲು ನೀಡಲು ಕಾನೂನು ಜಾರಿಗೊಳಿಸಬೇಕು. ಹನಿ ನೀರಾವರಿಗೆ ನೀಡುವ ಸಹಾಯ ಧನವನ್ನು ಹೆಚ್ಚಿಗೆ ಮಾಡಬೇಕೆಂದು ಒತ್ತಾಯಿಸಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಕಾಶ ಸಜ್ಜನರ, ರವಿ ನಾಯ್ಕ, ನಿಂಗಪ್ಪ ಬಿಂಗಿ, ಸುರೇಶ ಹಲವಾಗಲಿ, ಶಿದ್ಧನಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.