ಮೇವಿಗಾಗಿ ರೈತರ ಪರದಾಟ
ಪ್ರವಾಹಕ್ಕೆ ಕೊಚ್ಚಿ ಹೋಯ್ತು ಬೆಳೆ-ಮೇವು•ಮೇವಿಗೆ ಜನರ ನೂಕುನುಗ್ಗಲು
Team Udayavani, Aug 22, 2019, 1:09 PM IST
ಗದಗ: ರೋಣ ತಾಲೂಕಿನ ಮೆಣಸಗಿ ಗ್ರಾಮದ ಹೊಸ ಪ್ಲಾಟ್‌ನಲ್ಲಿ ಸುರಿದ ಮೇವು ಹೊತ್ತೂಯ್ದ ರೈತರು.
•ವೀರೇಂದ್ರ ನಾಗಲದಿನ್ನಿ
ಗದಗ: ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕಿನ ಉಭಯ ತಾಲೂಕಿನಲ್ಲಿ ಉಂಟಾಗಿದ್ದ ಪ್ರವಾಹದ ರಭಸಕ್ಕೆ ಮನೆ, ಮಠ ಕೊಚ್ಚಿ ಹೋಗಿದ್ದು, ಜನರ ಬದುಕು ಬೀದಿಗೆ ತಳ್ಳಿದೆ. ಅದರೊಂದಿಗೆ ಅಪಾರ ಪ್ರಮಾಣದ ಕೃಷಿ ಬೆಳೆಗಳು ಹಾನಿಗೀಡಾಗಿದೆ. ಪರಿಣಾಮ ಜಾನುವಾರುಗಳಿಗೆ ಮೇವು ಪೂರೈಸಲಾಗದೇ ಸಂತೆಗೆ ಸಾಗಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಮಲಪ್ರಭೆ ನದಿ ಹಾಗೂ ಬೆಣ್ಣಿಹಳ್ಳ ಉಕ್ಕಿ ಹರಿದಿದ್ದರಿಂದ ನರಗುಂದ 8 ಮತ್ತು ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಈ ಭಾಗದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಅಲ್ಪಸ್ವಲ್ಪ ಬೆಳೆದಿದ್ದ ಹೆಸರು 3414 ಹೆಕ್ಟೇರ್, ಶೇಂಗಾ 485, ಮುಸುಕಿನ ಜೋಳ 4952, ಹತ್ತಿ 1219 ಹಾಗೂ ಸೂರ್ಯಕಾಂತಿ ಸೇರಿದಂತೆ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದಷ್ಟು ಬೆಳೆಗಳೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ ಎಂದು ಅಂದಾಜಿಸಲಾಗಿದೆ.
ಈ ಪೈಕಿ ಬಸರಕೊಡ, ಅಮರಗೋಳ, ಕುರುವಿನಕೊಪ್ಪ, ಹೊಳೆಹಡಗಲಿ, ಮೆಣಸಗಿ ಗ್ರಾಮಗಳಲ್ಲಿ ಮೇವಿನ ಸಮಸ್ಯೆ ಗಂಭೀರವಾಗಿದೆ. ಮೇವು ತುಂಬಿರುವ ಲಾರಿ, ಟ್ರ್ಯಾಕ್ಟರ್‌ಗಳು ಕಣ್ಣಿಗೆ ಬೀಳುತ್ತಿದ್ದಂತೆ ಜನರು ಕೈಚಾಚಿ ಕೊಂಡೇ ಓಡೋಡಿ ಬರುತ್ತಾರೆ. ದಾನಿಗಳು ಲಾರಿಯಿಂದ ಮೇವು ಇಳಿಸುವ ಮುನ್ನವೇ ಮೇವಿನ ಲಾರಿಗೆ ಮುತ್ತಿಕೊಳ್ಳುವ ಜನ, ನಾಮುಂದು ತಾಮುಂದು ಎಂಬಂತೆ ಹೊತ್ತೂಯ್ಯುತ್ತಿದ್ದಾರೆ. ಇದು ಈ ಭಾಗದಲ್ಲಿನ ಮೇವಿನ ಸಮಸ್ಯೆಗೆ ಹಿಡಿದ ಕನ್ನಡಿಯಾಗಿದೆ.
ಇನ್ನುಳಿದ ನೆರೆ ಪೀಡಿತ ಗ್ರಾಮಗಳ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಸರಕಾರದಿಂದ ಕೆಲವೆಡೆ ಮೇವು ವಿತರಿಸಲಾಗುತ್ತಿದೆಯಾದರೂ ಅದು ಸಾಲುತ್ತಿಲ್ಲ ಎಂಬುದು ರೈತರ ಅಳಲು.
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಐದೂ ತಾಲೂಕಿನಲ್ಲಿ ತಲಾವೊಂದರಂತೆ ಜಿಲ್ಲಾಡಳಿತ ಗೋಶಾಲೆಗಳನ್ನು ಆರಂಭಿಸಿದೆ. ಆದರೆ, ಗೋಶಾಲೆಗಳು ಗ್ರಾಮದಿಂದ ದೂರವಿರುವ ಕಾರಣಕ್ಕೆ ರೈತರು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಪ್ರವಾಹ ಪೀಡಿತ ಪ್ರತೀ ಗ್ರಾಮದಲ್ಲೂ ಮೇವು ವಿತರಣಾ ಕೇಂದ್ರ ಆರಂಭಿಸಿ, ಅನುಕೂಲ ಕಲ್ಪಿಸಬೇಕು ಎಂಬುದು ರೈತರ ಒತ್ತಾಯ.
•ಡಾ| ಚನ್ನಕೇಶವಪಶು
ಸಂಗೋಪನಾ ಇಲಾಖೆ ಉಪನಿರ್ದೇಶಕ
•ಶಿವಾನಂದ ಕಟ್ಟಣ್ಣವರ,
ಮೆಣಸಗಿ ರೈತ
ಸತತ ಬರ ಹಾಗೂ ಮಳೆ ಕೊರತೆಯಿಂದ ಈಗಾಗಲೇ ಜಿಲ್ಲೆಯ ರೈತರಿಗೆ ಮೇವಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ರೈತರು ಸಾಲಸೋಲ ಮಾಡಿ ರೈತರು ಮೇವು ಖರೀದಿಸಿದ್ದರು. ಅದು ಕೂಡಾ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ರೈತರನ್ನು ಚಿಂತೆಗೀಡುಮಾಡಿದೆ. ನೆರೆ ಪೀಡಿತ ಪ್ರದೇಶಗಳಲ್ಲಿ ಜನರು ತಮ್ಮ ಹೊಟ್ಟೆ ತುಂಬಿಸಿಕೊಂಡು ಸ್ವಂತಕ್ಕೆ ಸೂರು ಕಂಡುಕೊಳ್ಳೂವುದೇ ಸವಾಲಾಗಿದೆ. ಇನ್ನು, ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟಸಾಧ್ಯ. ಹೀಗಾಗಿ ಅನಿವಾರ್ಯವಾಗಿ ಜಾನುವಾರುಗಳನ್ನು ಸಂತೆಗೆ ಸಾಗಿಸುವಂತಾಗಿದೆ ಎನ್ನುತ್ತಾರೆ ರೋಣ ತಾಲೂಕಿನ ಹೊಳೆಹಡಗಲಿ ಗ್ರಾಮದ ರೈತ ಯಲ್ಲಪ್ಪ.
ನೆರೆ ಪೀಡಿತ ಪ್ರದೇಶಗಳ ಜನರ ಅನುಕೂಲಕ್ಕಾಗಿ ಈಗಾಗಲೇ ರಾಜ್ಯದ ವಿವಿಧೆಡೆಯಿಂದ ದಾನಿಗಳು ಬಟ್ಟೆ, ಆಹಾರ ಪದಾರ್ಥಗಳು ಹಾಗೂ ಅಡುಗೆ ಸಾಮಗ್ರಿ ಒದಗಿಸುತ್ತಿದ್ದಾರೆ. ಇನ್ನೂ ಕೆಲವರು ಜಾನುವಾರುಗಳ ಅನುಕೂಲಕ್ಕಾಗಿ ಮೇವು ಒದಗಿಸುವ ಮೂಲಕ ಮಾನವೀಯತೆ ತೋರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.