ನಿಲ್ಲದ ಜಿಟಿಜಿಟಿ ಮಳೆ
ಗ್ರಾಹಕರಿಲ್ಲದೇ ಬಣಗುಡುತ್ತಿದೆ ಮಾರುಕಟ್ಟೆ-ಹದಗೆಟ್ಟಿದೆ ರಸ್ತೆಗಳು
Team Udayavani, Aug 8, 2019, 12:02 PM IST
ಗದಗ: ನಗರದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಬುಧವಾರವೂ ಮುಂದುವರಿಯಿತು.
ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನಗಳಿಂದ ಆಶ್ಲೇಷ ಮಳೆ ಬಿಟ್ಟು ಬಿಡದಂತೆ ಸುರಿಯುತ್ತಿದೆ. ಮಂಗಳವಾರ ಸಂಜೆಯಿಂದಲೇ ನಿರಂತರವಾಗಿ ಜಿಟಿಜಿಟಿಯಾಗಿ ಸುರಿಯುತ್ತಿರುವ ಮಳೆ ಬುಧವಾರ ಸಂಜೆವರೆಗೂ ಮುಂದುವರಿಯಿತು.
ಅವಳಿ ನಗರದಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಸಾರ್ವಜನಿಕರು ಹಾಗೂ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಕೊಡೆ, ರೇನ್‌ಕೋಟ್‌ಗಳನ್ನು ಧರಿಸಿಯೇ ಮನೆಯಿಂದ ಹೊರ ಬರುವಂತಾಯಿತು. ಮಳೆಯಿಂದಾಗಿ ಮಾರುಕಟ್ಟೆ ಪ್ರದೇಶ ಬಹುತೇಕ ಗ್ರಾಹಕರಿಲ್ಲದೇ ಬಣಗುಡುತ್ತಿತ್ತು. ಸತತ ಮಳೆಯಿಂದ ಅವಳಿ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳಲ್ಲಿ ಮಳೆ ನೀರು ನಿಂತು, ಚರಂಡಿ ಹಾಗೂ ರಸ್ತೆಗಳ ನಡುವಿನ ವ್ಯತ್ಯಾಸ ತಿಳಿಯದಂತಾಯಿತು. ಯುಜಿಡಿ ಹಾಗೂ 24×7 ಕುಡಿಯುವ ನೀರಿನ ಕಾಮಗಾರಿಗಳಿಂದಾಗಿ ರಸ್ತೆಗಳೆಲ್ಲ ಹದಗೆಟ್ಟಿವೆ. ಇದರಿಂದಾಗಿ ತೆಗ್ಗುದಿನ್ನೆಗಳನ್ನು ಗುರುತಿಸಲಾಗದೇ ಸೈಕಲ್ ಹಾಗೂ ದ್ವಿಚಕ್ರ ವಾಹನಗಳ ಸವಾರರು ಪರದಾಡುವಂತಾಯಿತು.
ಜಿಟಿಜಿಟಿ ನಡುವೆಯೇ ಆಗಾಗ ಮಳೆ ಬಿರುಸುಗೊಳ್ಳುತ್ತಿತ್ತು. ಕಚೇರಿ ಹಾಗೂ ನಾನಾ ಕೆಲಸ ಕಾರ್ಯಗಳಿಂದಾಗಿ ಮಾರುಕಟ್ಟೆಗೆ ಆಗಮಿಸಿದ್ದ ಜನರು, ಮಳೆಯಿಂದ ರಕ್ಷಿಸಿಕೊಳ್ಳಲು ವಾಣಿಜ್ಯ ಮಳಿಗಳ ಮುಂಭಾಗದಲ್ಲಿ ಆಶ್ರಯ ಪಡೆದು ಮಳೆ ನಿಲ್ಲುವುದನ್ನೇ ಕಾಯುವಂತಾಯಿತು.
ಕಳೆದ 24 ಗಂಟೆಗಳಲ್ಲಿ ಗದಗಿನಲ್ಲಿ 10.7 ಮಿ.ಮೀ., ಮುಂಡರಗಿಯಲ್ಲಿ 3 ಮಿ.ಮೀ., ನರಗುಂದ 12.2 ಮಿ.ಮೀ., ರೋಣದಲ್ಲಿ 8.0 ಮಿ.ಮೀ., ಶಿರಹಟ್ಟಿಯಲ್ಲಿ 16.5 ಮಿ.ಮೀ. ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 50.4 ಮಿ.ಮೀ. ನಷ್ಟು ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.