ಕಪ್ಪತ್ತಗುಡ್ಡಕ್ಕೆ ಗಣಿಗಾರಿಕೆ ಕರಿನೆರಳು

ವನ್ಯಧಾಮ ಘೋಷಣೆ ಹಿಂಪಡೆಯುವ ಹುನ್ನಾರ ಪರಿಸರ ಪ್ರೇಮಿಗಳಲ್ಲಿ ಹೆಚ್ಚಿದ ಆತಂಕ

Team Udayavani, Sep 26, 2019, 4:21 PM IST

26-Sepctember-15

ವೀರೇಂದ್ರ ನಾಗಲದಿನ್ನಿ
ಗದಗ: ದಕ್ಷಿಣ ಭಾರತ ಸಸ್ಯಕಾಶಿ, ಅಮೂಲ್ಯ ಔಷಧೀಯ ಸಸ್ಯ, ಜೀವ ವೈವಿದ್ಯ ಹಾಗೂ ಉತ್ಕೃಷ್ಟ ಖನಿಜ ಸಂಪತ್ತು ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಮೇಲೆ ಮತ್ತೆ ಗಣಿಗಾರಿಕೆಯ ಕರಿನೆರಳು ಆವರಿಸತೊಡಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯುರಪ್ಪ ನೇತೃತ್ವದಲ್ಲಿ ಸೆ. 26ರಂದು ನಡೆಯಲಿರುವ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಕಪ್ಪತ್ತಗುಡ್ಡ ವನ್ಯಧಾಮ ಘೋಷಣೆಯನ್ನು ಹಿಂಪಡೆಯುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಪರಿಸರ ಪ್ರೇಮಿಗಳಲ್ಲಿ ಆತಂಕ ಶುರುವಾಗಿದೆ.

ಪೋಸ್ಕೋ ಹೋರಾಟದ ಬಳಿಕ 2016ರಿಂದ ಕಪ್ಪತ್ತಗುಡ್ಡ ವಿಚಾರವಾಗಿ ಸರಕಾರ ಮತ್ತು ಈ ಭಾಗದ ಪರಿಸರವಾದಿಗಳ ನಡುವಿನ ಹಗ್ಗ ಜಗ್ಗಾಟ ಮುಂದುವರಿದಿದೆ. 2016ರ ಆ. 31ರಂದು ಕಪ್ಪತ್ತಗುಡ್ಡಕ್ಕೆ ಸಂರಕ್ಷಿತ ಅರಣ್ಯ ಸ್ಥಾನಮಾನ ಕಲ್ಪಿಸಿದ್ದ ಸರಕಾರ, ಅದೇ ವರ್ಷ ನ. 4ರಂದು ಹಿಂಪಡೆದಿತ್ತು. ಸರಕಾರದ ಈ ನಡೆಯನ್ನು ಖಂಡಿಸಿ ಲಿಂ| ತೋಂಟದ ಸಿದ್ಧಲಿಂಗ ಸ್ವಾಮೀಜಿ, ಎಸ್‌.ಆರ್‌. ಹಿರೇಮಠ, ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಮೂರು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆದ ಫಲವಾಗಿ ಏಪ್ರಿಲ್‌ 2017ರಲ್ಲಿ ಸರಕಾರ ಮತ್ತೆ ಸಂರಕ್ಷಿತ ಸ್ಥಾನ ಕಲ್ಪಿಸಿತ್ತು.

ಕಳೆದ ಮೇ 16ರಂದು ನಡೆದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಕಪ್ಪತ್ತಗುಡ್ಡ 80 ಸಾವಿರ ಎಕರೆ ಪ್ರದೇಶದಲ್ಲಿ 50 ಸಾವಿರ ಎಕರೆ ಪ್ರದೇಶವನ್ನು ವನ್ಯಧಾಮ ಎಂದು ಘೋಷಿಸಿ ಆದೇಶ ಹೊರಡಿಸಿ, ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಬೇಕು ಎಂಬ ಗಣಿದಣಿಗಳ ಆಸೆಗೆ ಚಪ್ಪಡಿ ಕಲ್ಲು ಹಾಕಿದ್ದರು.

ಕಪ್ಪತ್ತಗಿರಿಗೆ “ಗಣಿ’ಯೇ ಕುತ್ತು?: ಕಪ್ಪತ್ತಗುಡ್ಡ ಭಾಗದಲ್ಲಿರುವ ಅತ್ತಿಕಟ್ಟಿ ಗ್ರಾಮದ ಬಳಿ ಪ್ರಮುಖ ಗಣಿಗಾರಿಕೆ ಕಂಪನಿಯೊಂದರ 40 ಎಕರೆಗೂ ಹೆಚ್ಚಿನ ಭೂಮಿ ಇದೆ. ಅಲ್ಲಿ ಬಂಗಾರದ ಗಣಿಗಾರಿಕೆಗೆ ಸಿದ್ಧತೆ ನಡೆದಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ, ಕಂಪನಿ ಕೆಲವು ಮಧ್ಯವರ್ತಿಗಳಿಂದ ಖರೀದಿಸಿದ ಭೂಮಿಯದ್ದು ಅದಕ್ಕೆ ತೊಡಕಾಗಿದೆ.

ರಾಜ್ಯದಲ್ಲಿಯೇ ಅತೀ ವೇಗವಾಗಿ ಜಿಲ್ಲೆಯಲ್ಲಿ ಗಾಳಿ ಬೀಸುತ್ತದೆ. ಈ ಕಾರಣಕ್ಕಾಗಿ ಇಲ್ಲಿ ಪವನ ವಿದ್ಯುತ್‌ ಗೋಪುರಗಳ ಸಂಖ್ಯೆ ಹೆಚ್ಚು. ಜಿಲ್ಲೆಯ ಎತ್ತರ ಪ್ರದೇಶವಾಗಿರುವ ಕಪ್ಪತಗುಡ್ಡದಲ್ಲಿಯೇ ಗೋಪುರ ನಿರ್ಮಿಸಿ ಲಾಭ ಮಾಡಿಕೊಳ್ಳಲು ಹಲವು ಕಂಪನಿಗಳು ಈಗಾಗಲೇ ಕೋಟ್ಯಂತರ ಹಣ ಸುರಿದು ಕಾಯುತ್ತಿವೆ. ಗಣಿಗಾರಿಕೆ ಮತ್ತು ಪವನ ವಿದ್ಯುತ್‌ ಘಟಕ ಸೇರಿದಂತೆ ಅರಣ್ಯೇತರ ಚಟುವಟಿಕೆಗಳಿಗೆ ಸಂರಕ್ಷಿತ ಅರಣ್ಯ ಹಾಗೂ ವನ್ಯಜೀವಿಧಾಮ ಪ್ರದೇಶದಲ್ಲಿ ಅವಕಾಶ ಸಿಗದು. ಇದೇ ಕಾರಣಕ್ಕೆ 2016ರಲ್ಲಿ ಸರಕಾರ ಸಂರಕ್ಷಿತ ಅರಣ್ಯವೆಂದು ಘೋಷಿಸಿದಾಗ ಗಣಿ ಕಂಪನಿಯೊಂದು ನ್ಯಾಯಾಲಯದ ಮೆಟ್ಟಿಲೇರಿತ್ತು. ಅದಕ್ಕೂ ಮುನ್ನ ಸಂರಕ್ಷಿತ ಸ್ಥಾನ ಮಾನ ಕಲ್ಪಿಸಿದ್ದ ಸರಕಾರ ಹಿಂಪಡೆಯುವಂತೆ ಮಾಡಿದ್ದು, ಇದೇ ಗಣಿ ಕಂಪನಿ ಲಾಭಿ ನಡೆಸಿತ್ತು ಎಂಬ ವಿಚಾರ ಗುಟ್ಟಾಗಿ ಉಳಿದಿಲ್ಲ.

ಈ ನಡುವೆ ಎಚ್‌.ಡಿ. ಕುಮಾರಸ್ವಾಮಿ ಸರಕಾರ ಕಪ್ಪತ್ತಗುಡ್ಡವನ್ನು ವನ್ಯಧಾಮವನ್ನಾಗಿಸಿ ಘೋಷಿಸಿದ್ದು, ಲಾಭಿ ಕೋರರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಹೇಗಾದರೂ ಮಾಡಿ ಕಪ್ಪತ್ತಗುಡ್ಡವನ್ನು ಗಣಿಗಾರಿಕೆ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಇದೀಗ ಬಿಜೆಪಿ ಸರಕಾರದಲ್ಲಿ ಲಾಭಿ ನಡೆದಿದೆ ಎಂದು ಹೇಳಲಾಗಿದೆ.

ಅದಕ್ಕಾಗಿ ಹೋರಾಟದ ನೆಪದಲ್ಲಿ ಕಪ್ಪತ್ತಗುಡ್ಡ ಸೆರಗಿನಲ್ಲಿ ವಾಸಿಸುವರನ್ನು ಸರಕಾರದ ವಿರುದ್ಧ ಎತ್ತಿಕಟ್ಟು ಪ್ರಯತ್ನಗಳು ನಿರಂತರವಾಗಿದೆ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರು ಲಿಂಗೈಕ್ಯರಾದ ಬಳಿಕ ಪ್ರಾಯೋಜಿತ ಹೋರಾಟಗಳು ಹೆಚ್ಚುತ್ತಿದ್ದು, ಅದೇ ಅರ್ಜಿಗಳನ್ನು ಮುಂದಿಟ್ಟುಕೊಂಡು ಸರಕಾರ ವನ್ಯಧಾಮ ಆದೇಶವನ್ನು ಹಿಂಪಡೆಯಬಹುದು. ಸೆ.26 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ
ವನ್ಯಜೀವಿ ಮಂಡಳಿ ಸಭೆಯಲ್ಲಿ ಕಪ್ಪತ್ತಗುಡ್ಡ ವನ್ಯಧಾಮ ಡಿನೋಟಿಫಿಕೇಷನ್‌ ವಿಚಾರ ಪ್ರಸ್ತಾಪವಾಗಲಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf

Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.