ಉತ್ತಮ ಆರೋಗ್ಯಕ್ಕೆ ಯೋಗವೇ ಮದ್ದು

ಜಿಲ್ಲಾದ್ಯಂತ ಯೋಗದಿನ ಆಚರಣೆ • ಶಾಲಾ-ಕಾಲೇಜು, ಸಂಘ-ಸಂಸ್ಥೆ, ಜಿಲ್ಲಾಡಳಿತದಿಂದ ಕಾರ್ಯಕ್ರಮ ಆಯೋಜನೆ • ವಿವಿಧ ಆಸನಗಳ ಪ್ರದರ್ಶನ

Team Udayavani, Jun 22, 2019, 1:28 PM IST

22–June-27

ಗದಗ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಭೀಷ್ಮಕೆರೆ ಬಸವಣ್ಣ ಉದ್ಯಾನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ಗದಗ: ಜೀವನದಲ್ಲಿ ಒತ್ತಡಗಳ ನಿವಾರಿಸುವಲ್ಲಿ ಯೋಗ ಅಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಯೋಗದಿಂದ ಸದಾ ಸರ್ವದಾ ಆರೋಗ್ಯ ಎಂಬ ಅದ್ಭುತ ಕೊಡುಗೆ ನೀಡಿದ ನಮ್ಮ ಸಂಸ್ಕೃತಿಯಿಂದಾಗಿ ಇಡೀ ವಿಶ್ವವೇ ನಿಬ್ಬೆರ ಗಾಗಿರುವುದು ಭಾರತೀಯರಾದ ನಮಗೆ ಅತ್ಯಂತ ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿ.ಪಂ., ಆಯುಷ್‌ ಇಲಾಖೆ, ಜಿಲ್ಲಾ ಯೋಗ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಭೀಷ್ಮ ಕೆರೆ ಆವರಣದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದಿಂದ ಮನಸ್ಸು ಮತ್ತು ದೇಹದ ಅನುಸಂದಾನ ಸಾಧಿಸಬಹುದಾಗಿದೆ. ಯೋಗದ ಮಹತ್ವವನ್ನು ಅರಿತಿದ್ದ ಮಹರ್ಷಿ, ಸಾಧು ಸಂತರು ಯೋಗ ಅಭ್ಯಾಸವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಸ್ಪರ್ಧಾತ್ಮಕ ಯುಗದ ಒತ್ತಡಗಳಲ್ಲಿ ಶಿಸ್ತು ಬದ್ಧ ಜೀವನ ನಡೆಸುವುದು ಅತ್ಯಂತ ಕಷ್ಟಕರವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ನೌಕರರು ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಒತ್ತಡ ರಹಿತ ಜೀವನ ಸಾಗಿಸಬಹುದಾಗಿದೆ ಎಂದರು.

ಶಿವಾನಂದ ಮಠದ ಕೈವಲ್ಯನಾಥ ಸ್ವಾಮೀಜಿ ಮಾತನಾಡಿ, ಎಂಟು ನೂರು ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಪರಂಪರೆಯಲ್ಲಿ ಜೀವನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲೂ ರೋಗ ರುಜಿನಗಳು ಬಾರದಂತೆ ಇರಲು ಪತಂಜಲಿ ಮುನಿಗಳು ಯೋಗವನ್ನು ಕಂಡುಹಿಡಿದಿರುವುದು ಮಹತ್ವದ್ದಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಮನುಷ್ಯ ತನ್ನ ಜೀವನವನ್ನು ಯೋಗ ಜೀವನವನ್ನಾಗಿ ಬದಲಾಯಿಸಿಕೊಳ್ಳಬೇಕು. ಯೋಗದಿಂದ ಮಾತ್ರ ಜೀವನ ನಿತ್ಯೋತ್ಸವವಾಗಲು ಸಾಧ್ಯವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಯೋಗಸಾಧನೆ ಮಾಡಿದ ಮಹನಿಯರಿಗೆ ಸನ್ಮಾನಿಸಲಾಯಿತು. ಜಿಲ್ಲಾ ಆಯುಷ ಅಧಿಕಾರಿ ಸುಜಾತಾ ಪಾಟೀಲ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.