371(ಜೆ) ಸಮರ್ಪಕಅನುಷ್ಠಾನಕ್ಕೆ ನಿರಾಸಕ್ತಿ

ವಿವಿಗಳಲ್ಲಿ ಸಿದ್ಧವಾಗಿಲ್ಲ ಸ್ಥಳೀಯ-ಸ್ಥಳೀಯೇತರರ ಜೇಷ್ಠತಾ ಪಟ್ಟಿಪ್ರತಿ ನೇಮಕಾತಿಯಲ್ಲೂ ಆಕ್ಷೇಪ ಸಲ್ಲಿಕೆ

Team Udayavani, Dec 27, 2019, 11:14 AM IST

27-December-2

„ಕೆ. ನಿಂಗಜ್ಜ
ಗಂಗಾವತಿ:
ಕಲ್ಯಾಣ ಕರ್ನಾಟಕ (ಹೈ.ಕ.)ಸಮಗ್ರ ಅಭಿವೃದ್ಧಿಗಾಗಿ 2013ರಲ್ಲಿ ಸಂವಿಧಾನದ ಕಲಂ 371(ಜೆ)ಗೆ ತಿದ್ದುಪಡಿ ಮಾಡಿ ವಿಶೇಷ ಸ್ಥಾನಮಾನ ದೊರಕಿದರೂ ಸಮರ್ಪಕ ಅನುಷ್ಠಾನದ ಕೊರತೆಯಿಂದ ಕಲಂ 371(ಜೆ) ಅಡಿಯಲ್ಲಿ ದೊರಕುವ ಶೈಕ್ಷಣಿಕ ಸೌಲಭ್ಯಗಳು ಸೇರಿ ನೇಮಕಾತಿಯಾಗುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿದೆ.

ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ವ್ಯಾಪ್ತಿಯ ಹಂಪಿ ಕನ್ನಡ ವಿಶ್ವವಿದ್ಯಾಲಯವೂ ಸೇರಿ ಯಾವ ವಿಶ್ವವಿದ್ಯಾಲಯಗಳಲ್ಲೂ ಸ್ಥಳೀಯ ಮತ್ತು ಸ್ಥಳೀಯೇತರ ಜೇಷ್ಠತಾ ಪಟ್ಟಿ ಇದುವರೆಗೂ ಸರಕಾರಕ್ಕೆ ಸಲ್ಲಿಕೆಯಾಗಿಲ್ಲ. ಇದರ ಪರಿಣಾಮ ಬಹುತೇಕ ವಿವಿಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಕಾರ್ಯ ವಿಳಂಬವಾಗುತ್ತಿದೆ. 6  ಲ್ಲೆಗಳ ಪೊಲೀಸ್‌ ಇಲಾಖೆ ಹೊರತುಪಡಿಸಿ ಬಹುತೇಕ ಇಲಾಖೆಗಳಲ್ಲಿ ಜೇಷ್ಠತಾ ಪಟ್ಟಿ ಸಮರ್ಪಕವಾಗಿ ತಯಾರಿಸಿಲ್ಲ. 6 ಜಿಲ್ಲೆಗಳ ವ್ಯಾಪ್ತಿಯ ವಿಶ್ವವಿದ್ಯಾಲಯಗಳಲ್ಲಿ ಪಿಎಚ್‌ಡಿ ಪ್ರವೇಶ ಸಂದರ್ಭದಲ್ಲೂ ಕಲಂ 371(ಜೆ) ಅನುಷ್ಠಾನವಾಗುತ್ತಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣ ಮತ್ತು ಉನ್ನತ ಶಿಕ್ಷಣದ ಕೊರತೆ ಇದ್ದು ಕಲಂ 371(ಜೆ) ಅನ್ವಯ ಸರಕಾರ ಪ್ರತಿ ಬಜೆಟ್‌ ಸಂದರ್ಭದಲ್ಲೂ 6 ಜಿಲ್ಲೆಗೆ ಪ್ರತೇಕ ಅನುದಾನ ಮೀಸಲಿಟ್ಟು ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು ಮತ್ತು ಹುದ್ದೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸ್ಪಷ್ಟ ಸೂಚನೆ ಇದ್ದರೂ 6 ವರ್ಷಗಳಿಂದ ಶಿಕ್ಷಣಕ್ಕಾಗಿ ಮೀಸಲಿಟ್ಟ ಅನುದಾನ ಸರಕಾರಕ್ಕೆ ಮರಳಿ ಹೋಗುತ್ತಿದ್ದರೂ ಕಲಂ 371(ಜೆ) ಅನುಷ್ಠಾನ ಸಮಿತಿ ಈ ಹಣವನ್ನು ಸಮರ್ಪಕವಾಗಿ ಬಳಸುತ್ತಿಲ್ಲ.

6 ಜಿಲ್ಲೆಗಳಲ್ಲಿ 108 ಪ್ರಾಥಮಿಕ, 69 ಪ್ರೌಢಶಾಲೆಗಳು, 32 ಪಿಯುಸಿ, 81 ಪದವಿ ಕಾಲೇಜುಗಳಿದ್ದು ಇವುಗಳಿಗೆ ವೇತನಾನುದಾನ ಸೇರಿ ವಿದ್ಯಾರ್ಥಿಗಳ ಮೂಲಸೌಕರ್ಯಕ್ಕೆ ಹಣ ನೀಡಲು ಸರಕಾರ ಮುಂದಾಗುತ್ತಿಲ್ಲ. ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್‌, ವೈದ್ಯಕೀಯ, ಕೃಷಿ, ತೋಟಗಾರಿಕೆ ಮಹಾವಿದ್ಯಾಲಯಗಳ ಸ್ಥಾಪನೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರಕಾರ ಪ್ರಯತ್ನ ನಡೆಸುತ್ತಿಲ್ಲ. 6 ಜಿಲ್ಲೆಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಪದವಿ ಕಾಲೇಜುಗಳ ಜತೆ ಹಾಸ್ಟೆಲ್‌ ಆರಂಭಿಸಲು ಆದೇಶವಿದ್ದರೂ ಇದುವರೆಗೆ ಅನುಷ್ಠಾನ ಮಾಡಿಲ್ಲ. ಯುಪಿಎಸ್ಸಿ, ಕೆಪಿಎಸ್ಸಿ, ಟಿಇಟಿ, ನೀಟ್‌, ಜೆಇಇ ಸೇರಿ ಹಲವು ವೃತ್ತಿ ಪರ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ತರಬೇತಿ ಕೊಡಿಸಲು ಕಲಂ 371(ಜೆ) ಅಡಿಯಲ್ಲಿ ಅವಕಾಶವಿದ್ದರೂ ಇದುವರೆಗೆ ಸರಕಾರ ಮಾಡಿಲ್ಲ.

ಸ್ಥಳೀಯ, ಸ್ಥಳೀಯೇತರ ವೃಂದ ರಚನೆ ಮಾಡಿ ಪ್ರತಿ ಇಲಾಖೆಯಲ್ಲಿ ಸ್ಥಳೀಯರಿಗೆ ಭಡ್ತಿ ನೀಡಲು ನಿಯಮಗಳಿದ್ದರೂ ಸರಕಾರ ಕೆಲವು ಇಲಾಖೆ ಹೊರತುಪಡಿಸಿ ಮಿಕ್ಕುಳಿದ ಇಲಾಖೆಗಳಲ್ಲಿ ಅನ್ಯ ಜಿಲ್ಲೆಯವರೇ ಹಿರಿಯ ಅಧಿಕಾರಿಗಳಾಗಿದ್ದಾರೆ.

ಆಕ್ಷೇಪಗಳ ಸುರಿಮಳೆ: 2013ರಲ್ಲಿ 6 ಜಿಲ್ಲೆಗಳಿಗೆ ಕಲಂ 371(ಜೆ) ಅನುಷ್ಠಾನವಾದಾಗಿನಿಂದ ಇಲ್ಲಿಯವರೆಗೆ ನೇಮಕಾತಿ ಸೇರಿ ಭಡ್ತಿ ವಿಷಯದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಸುಮಾರು 700ಕ್ಕೂ ಅಧಿ ಕ ಆಕ್ಷೇಪಗಳನ್ನು ಸಲ್ಲಿಸಲಾಗಿದೆ. ಆಕ್ಷೇಪಗಳನ್ನು ನಿವಾರಿಸುವಲ್ಲಿ ಸರಕಾರ ಇಚ್ಛಾಶಕ್ತಿ ತೋರುತ್ತಿಲ್ಲ. ಅನುಷ್ಠಾನದ ಕ್ಯಾಬಿನೆಟ್‌ ಉಪಸಮಿತಿ ಸಭೆ ಸೇರಿ ಅನುಷ್ಠಾನದಲ್ಲಿರುವ ತೊಂದರೆ ನಿವಾರಣೆಗೆ ಮುಂದಾಗುತ್ತಿಲ್ಲ. ಪ್ರತಿ ಸರಕಾರದಲ್ಲೂ ಅನುಷ್ಠಾನ ಸಮಿತಿಗೆ ಅನ್ಯ ಜಿಲ್ಲೆಯವರೇ ಅಧ್ಯಕ್ಷರಾಗುತ್ತಿರುವುದರಿಂದ ಕಲಂ 371(ಜೆ) ಸಮರ್ಪಕ ಜಾರಿಗೆ ಆಸಕ್ತಿ ತೋರುತ್ತಿಲ್ಲ ಎನ್ನಲಾಗುತ್ತಿದೆ.

ಕಲಂ 371(ಜೆ) ಅನ್ವಯ 6 ಜಿಲ್ಲೆಗಳಲ್ಲಿರುವ ಅನುದಾನ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಅನುದಾನ ನೀಡಲು ಅವಕಾಶವಿದೆ. ಹುದ್ದೆಗಳ ವೇತನಾನುದಾನ ಮಾಡಲು ಅವಕಾಶವಿದೆ. ಯುಪಿಎಸ್ಸಿ, ಕೆಪಿಎಸ್ಸಿ ಸೇರಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಬೇಕು. ಸ್ಥಳೀಯ ಇಲಾಖೆಗಳು ಸೇರಿ ವಿಶ್ವವಿದ್ಯಾಲಯಗಳಲ್ಲಿ ಜೇಷ್ಠತಾ ಪಟ್ಟಿ ಸಿದ್ದಪಡಿಸಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಅಗತ್ಯ. ಕ್ಯಾಬಿನೆಟ್‌ ಉಪಸಮಿತಿಗೆ ಸ್ಥಳೀಯ ಸಚಿವರನ್ನೇ ಅಧ್ಯಕ್ಷರನ್ನಾಗಿಸಬೇಕು. ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕು ಮತ್ತು ಖಾಸಗಿಯವರಿಗೂ ಅವಕಾಶ ನೀಡಬೇಕು.
ಡಾ| ಶರಣಬಸಪ್ಪ ಕೋಲ್ಕಾರ್‌,
ಸಂಶೋಧಕರು

ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ಕಲಂ 371(ಜೆ) ಯೋಜನೆ
ಸಮರ್ಪಕವಾಗಿ ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ. ಶೈಕ್ಷಣಿಕ ಭಡ್ತಿ ನೇಮಕಾತಿಯಲ್ಲಿ ಕೆಲ ಸಮಸ್ಯೆಗಳಿದ್ದು ಅನುಷ್ಠಾನ ಕ್ಯಾಬಿನೆಟ್‌ ಉಪಸಮಿತಿಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತದೆ. 6 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ, ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಸೇರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಅಗತ್ಯ ಕ್ರಮ ಜರುಗಿಸಲಾಗುತ್ತದೆ. ಕಲಂ 371(ಜೆ) ಸಮರ್ಪಕ ಅನುಷ್ಠಾನಕ್ಕೆ ತಜ್ಞರ ಶಿಕ್ಷಣ ಪರಿಣತರ ಸಲಹೆ ಸೂಚನೆ ಪಡೆಯಲಾಗುತ್ತದೆ.
ಬಿ.ಶ್ರೀರಾಮುಲು, ಸಚಿವರು ಹಾಗೂ
371(ಜೆ) ಅನುಷ್ಠಾನ ಕ್ಯಾಬಿನೆಟ್‌ ಉಪಸಮಿತಿ ಸದಸ್ಯರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.