ಕಂಪ್ಲಿ-ಗಂಗಾವತಿ ಸೇತುವೆಯಲ್ಲಿ ಬಿರುಕು

•1961ರಲ್ಲಿ ನಿರ್ಮಿಸಿದ ಸೇತುವೆ ಅಲ್ಲಲ್ಲಿ ಬಿರುಕು•ಪ್ರವಾಹ ಕಡಿಮೆಯಾದ ನಂತರ ಪರೀಕ್ಷೆ

Team Udayavani, Aug 15, 2019, 3:11 PM IST

15-Agust-32

ಗಂಗಾವತಿ: ಪೊಲೀಸ್‌ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಪ್ಲಿ-ಗಂಗಾವತಿ ಸೇತುವೆ ಪರೀಕ್ಷಿಸಿದರು.

ಗಂಗಾವತಿ: ಹೈದ್ರಾಬಾದ್‌ ಕರ್ನಾಟಕ ಮತ್ತು ಗಣಿ ಜಿಲ್ಲೆ ಸೇರಿ ಮಧ್ಯೆ ಕರ್ನಾಟಕವನ್ನು ಸಂಪರ್ಕಿಸುವ ಗಂಗಾವತಿ-ಕಂಪ್ಲಿ ಸೇತುವೆ ತುಂಗಭದ್ರಾ ನದಿಯ ಪ್ರವಾಹಕ್ಕೆ ಸಿಲುಕಿ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಸದ್ಯ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ. ತುಂಗಭದ್ರಾ ಡ್ಯಾಂನಿಂದ ಈ ಭಾರಿ 3 ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿಸಿದ್ದು, ಹೆಚ್ಚಿನ ಪ್ರವಾಹ ಬಂದಿದ್ದರಿಂದ ಸೇತುವೆ ಮೇಲ್ಭಾಗದಲ್ಲಿ ಹಾಕಿರುವ ಕಾಂಕ್ರೀಟ್ ಕೊಚ್ಚಿಹೋಗಿದೆ. ಸೇತುವೆಯ ಎರಡು ಭಾಗದಲ್ಲಿ ರಕ್ಷಣಾ ಕಬ್ಬಿಣದ ಸರಳುಗಳು ನೀರಿನ ರಭಸಕ್ಕೆ ಕಿತ್ತು ಹೋಗಿದ್ದು, ಎರಡೂ ಬದಿ ನದಿಗುಂಟ ಬಂದ ಕಸ ಸಂಗ್ರಹವಾಗಿದೆ. ಇದರಿಂದ ನೀರಿನ ರಭಸ ಹೆಚ್ಚಾಗಿ ಸುಮಾರು ಒಂದು ಕಿ.ಮೀ. ಉದ್ದದ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಬೀದರ, ಕಲಬುರಗಿ, ಯಾದಗಿರಿ ಮತ್ತು ಹೈದ್ರಾಬಾದ್‌ನಿಂದ ಬೆಂಗಳೂರು, ಹೊಸಪೇಟೆ, ಬಳ್ಳಾರಿಗೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತಿದ್ದು, 1961ರಲ್ಲಿ ಅಂದಿನ ಮೈಸೂರು ಸರಕಾರ ಇದನ್ನು ನಿರ್ಮಿಸಿದೆ. ಲೋಕೊಪಯೋಗಿ ಇಲಾಖೆ ಸಚಿವರಾಗಿದ್ದ ವೀರಣ್ಣಗೌಡರು ಉದ್ಘಾಟಿಸಿದ್ದರು. ಸೇತುವೆ ನಿರ್ಮಾಣಗೊಂಡು 58 ವರ್ಷ ಗತಿಸಿದರೂ ಇನ್ನೂ ಸಂಚಾರಕ್ಕೆ ಯೋಗ್ಯವಾಗಿದೆ. 2008ರಿಂದ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಗಣಿಗಾರಿಕೆಯಿಂದ ಗಣಿ ಅದಿರನ್ನು ವಿಶಾಖಪಟ್ಟಣ ಮತ್ತು ಗೋವಾಗೆ ಸಾಗಿಸಲು ಲಾರಿಗಳು ಹೆಚ್ಚಾಗಿ ಸಂಚಾರ ನಡೆಸಿದ್ದರಿಂದ ಸೇತುವೆ ಸ್ವಲ್ಪ ಪ್ರಮಾಣದಲ್ಲಿ ಹಾನಿಗೀಡಾಯಿತು. ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರಿಂದ ಗಣಿ ಅದಿರು ಸಾಗಿಸುವ ಲಾರಿಗಳ ಸಂಚಾರ ತಡೆಯಲಾಗಿತ್ತು. ಕಳೆದ ಐದು ವರ್ಷಗಳಿಂದ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ಸಾಗಿಸುವ ಲಾರಿಗಳು ಇದೇ ಸೇತುವೆ ಅವಲಂಬಿಸಿದ್ದು, ಸೇತುವೆ ಅಭದ್ರಗೊಳ್ಳಲು ಕಾರಣವಾಗಿದೆ ಎನ್ನಲಾಗುತ್ತಿದೆ.

ತುಂಗಭದ್ರಾ ನದಿಯಲ್ಲಿ ಪ್ರತಿ ವರ್ಷ ಪ್ರವಾಹ ಬಂದಾಗ ಕಂಪ್ಲಿ ಸೇತುವೆ ಮುಳುಗಡೆಯಾಗುತ್ತದೆ. ಜನ ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಜನಪ್ರತಿನಿಧಿಗಳ ಶಿಫಾರಸ್ಸಿನಂತೆ ಲೋಕೊಪಯೋಗಿ ಇಲಾಖೆ ಅಧಿಕಾರಿಗಳು ಕಂಪ್ಲಿ ಸೇತುವೆ ಮೇಲ್ಭಾಗದಲ್ಲಿ ನೂತನ ಸೇತುವೆ ನಿರ್ಮಿಸಲು ಸರಕಾರಕ್ಕೆ 100 ಕೋಟಿ ರೂ. ಪ್ರಸ್ತಾವನೆ ಕಳುಹಿಸಿದ್ದಾರೆ. ಚಿಕ್ಕಜಂತಗಲ್ ಸರಕಾರಿ ಶಾಲೆಯ ಹತ್ತಿರದಿಂದ ಕಂಪ್ಲಿ ಕೋಟೆ ಪ್ರದೇಶದ ಹೊರಭಾಗದಿಂದ ಸೇತುವೆ ರಸ್ತೆ ಬರುವಂತೆ ಯೋಜನೆಯಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಇದರಿಂದ ಚಿಕ್ಕಜಂತಗಲ್ ಮತ್ತು ಕಂಪ್ಲಿ ಹೊರಭಾಗದಲ್ಲಿ ರಸ್ತೆ ಹೋಗುವಂತೆ ಯೋಜನೆ ರೂಪಿಸಲಾಗಿದ್ದು, ಇದರಿಂದ ವಾಹನ ಮತ್ತು ಜನದಟ್ಟಣೆ ಕಡಿಮೆಯಾಗಲಿದೆ. ತುಂಗಭದ್ರಾ ನದಿಯಲ್ಲಿ ಎಷ್ಟು ಪ್ರವಾಹ ಬಂದರೂ ಸೇತುವೆ ಮುಳುಗುವುದಿಲ್ಲ.

ಸೇತುವೆಯನ್ನು ಹಂಪಿ ಎಎಸ್‌ಪಿ ಹಾಗೂ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಡಾ| ಸಿಮಿ ಮರಿಯಮ್‌ ಜಾರ್ಜ್‌, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ರೇಣುಕಾ ಪಾಟೀಲ್, ಕಂಪ್ಲಿ ಸಿಪಿಐ ಹುಲುಗಪ್ಪ, ಪಿಎಸ್‌ಐ ವಾಸು, ಲೋಕೊಪಯೊಗಿ ಇಲಾಖೆ ಎಇಇ ನಶ್ರತ್‌ ಅಲಿ, ಎ.ಇ. ರಾಜಪ್ಪ, ದೇವೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

5-pavagada

Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.