ಅಂಬೇಡ್ಕರ್‌ಭವನ ಈಗ ಅನಾಥ
10 ವರ್ಷದ ಹಿಂದೆ 5 ಲಕ್ಷ ವೆಚ್ಚದಲ್ಲಿ ನಿರ್ಮಾಣಈವರೆಗೂ ಕಟ್ಟಡ ಬಾಗಿಲು ತೆರೆದ ಉದಾಹರಣೆ ಇಲ್ಲ
Team Udayavani, Nov 27, 2019, 12:13 PM IST
ಚೆನ್ನಕೇಶವುಲು ಗೌಡ
ಗುರುಮಠಕಲ್: ಸುಸಜ್ಜಿತ ಕಟ್ಟಡ ನಿರ್ಮಿಸಿದ್ದರೂ ಅಂಬೇಡ್ಕರ್ ಭವನ ಪಾಳು ಬಿದ್ದಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಸಾರ್ವಜನಿಕರಿಗೆ ಉಪಯೋಗವಾದ ಉದಾಹರಣೆಯೂ ಇಲ್ಲದಂತೆ ಅನಾಥವಾಗಿದೆ. 1998ರಲ್ಲಿ ಸಮಾಜ ಕಲ್ಯಾಣ ಇಲಾಖೆಯ 5 ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದ 12ನೇ ವಾರ್ಡ್ ಹರಿಜನವಾಡದಲ್ಲಿ ಭೂ ಸೇನಾ ನಿಗಮದಿಂದ ನಿರ್ಮಿಸಲಾದ ಅಂಬೇಡ್ಕರ ಭವನ ಕಳೆದ 10 ವರ್ಷಗಳಿಂದ ನಿರುಪಯುಕ್ತವಾಗಿ ಉಳಿದಿದೆ. ಇದು ಬಾಗಿಲು ತೆರೆದದ್ದಕ್ಕಿಂತ ಮುಚ್ಚಿದ್ದೇ ಹೆಚ್ಚು. ವಿದ್ಯುತ್, ನೀರು, ಸ್ವಚ್ಛತೆ, ಭವನದ ಸುತ್ತ ಸಸಿಗಳು, ಸಿಸಿ ಕ್ಯಾಮೆರಗಳು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಿ ಪುರಸಭೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿದರೆ ಅಕ್ರಮ ಚಟುವಟಿಕೆಗಳ ತಾಣವಾಗುವ ಬದಲು ಕಟ್ಟಡವೊಂದು ಸಾರ್ವಜನರಿಕರಿಗೆ ವರವಾಗಲಿದೆ ಎಂಬುದರಲ್ಲಿ ಎರಡು ಮಾತಿಲ್ಲ.
ಸರಕಾರ ಸಾರ್ವಜನಿಕರ ಉಪಯೋಗಕ್ಕಾಗಿ ಸಮುದಾಯ ಭವನ ನಿರ್ಮಿಸಿ ಸಭೆ, ಸಮಾರಂಭ, ಮದುವೆ ಮುಂತಾದ ಕಾರ್ಯಗಳಿಗೆ ಅನುವು ಮಾಡಿಕೊಟ್ಟಿದೆ. ಆದರೆ ಸರಕಾರದ ಯೋಜನೆಗಳು ನಿರ್ಲಕ್ಷ್ಯ ಧೋರಣೆಯಿಂದ ಹೇಗೆ ಹಳ್ಳ ಹಿಡಿಯುತ್ತಿವೆ ಎನ್ನುವುದಕ್ಕೆ ಪಟ್ಟಣದ ಅಂಬೇಡ್ಕರ್ ಭವನದ ಸ್ಥಿತಿ ಕನ್ನಡಿಹಿಡಿದಂತಿದೆ. ಓಣಿಯಲ್ಲಿ ಬಡವರು, ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಸಣ್ಣ ಪುಟ್ಟ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳು ಸಮಯ ಸಿಕ್ಕಾಗ ಅಧ್ಯಯನಕ್ಕೆ ಬಳಕೆ ಮಾಡಲು ಹೇಳಿ ಮಾಡಿಸಿದಂತ ವಾತಾವರಣದಲ್ಲಿ ಕಟ್ಟಡವಿದೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೆ ದೃಷ್ಟಿಯಾಡಿಸಿ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಸುಜ್ಜಿತವಾಗಿಸಿ ಕೊಟ್ಟರೆ ಸರಕಾರದ ಅನುದಾನ ಸದ್ಬಳಕೆ ಮಾಡಿದಂತಾಗುತ್ತದೆ ಎಂದು ಹರಿಜನವಾಡ ಬಡಾವಣೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.