ಗುರುಮಠಕಲ್ಗೆ ಸೇಡಂನ ಕೆಲ ಹಳ್ಳಿ ಸೇರಿಸಿ
ಸಾಲಮನ್ನಾಕ್ಕೆ ಚಾಲನೆ ನೀಡಿ ವರ್ಷ ಕಳೆದರೂ ರೈತರಿಗೆ ಲಾಭವಾಗಿಲ್ಲ
Team Udayavani, Jun 23, 2019, 3:29 PM IST
ಗುರುಮಠಕಲ್: ಸಾಲದ ಕುರಿತು ತನಿಖೆ ಮಾಡಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇಡಂ ಶಾಸಕ ರಾಜಕುಮಾರ ಪಾಟೀಲ ಅವರಿಗೆ ಭರವಸೆ ನೀಡಿದರು.
ಗುರುಮಠಕಲ್: ಸೇಡಂ ತಾಲೂಕಿನ ಹಲವು ಹಳ್ಳಿಗಳನ್ನು ಗ್ರಾಮಸ್ಥರ ಅನುಕೂಲದ ಹಿತದೃಷ್ಟಿಯಿಂದ ಗುರುಮಠಕಲ್ ತಾಲೂಕಿಗೆ ಸೇರ್ಪಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಚಂಡರಿಕಿಯಲ್ಲಿ ಮುಖ್ಯಮಂತ್ರಿಗಳ ಜನತಾದರ್ಶನ ನಡೆಸುತ್ತಿದ್ದ ವೇದಿಕೆ ಬಳಿ ಸೇಡಂ ಶಾಸಕ ರಾಜಕುಮಾರ ಪಾಟೀಲ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೇಡಂ ತಾಲೂಕು ಯಾನಾಗುಂದಿ ಗ್ರಾಮದಿಂದ ಗುರುಮಠಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ಸ್ಥಳದವರೆಗೆ ಪಾದಯಾತ್ರೆಯಲ್ಲಿ ತೆರಳಿ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಸೇಡಂನಲ್ಲಿ ಸಾಲ ಮನ್ನಾಕ್ಕೆ ಚಾಲನೆ ನೀಡಿ ವರ್ಷ ಕಳೆದರೂ ರೈತರಿಗೆ ಲಾಭ ಸಿಕ್ಕಿಲ್ಲ. ಸಾಲ ಮನ್ನಾ ಹಾಗೂ ಋಣಮುಕ್ತ ಪತ್ರದ ವಿತರಣೆ ಗೊಂದಲದಿಂದಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಋಣ ಮುಕ್ತ ಪತ್ರವಿಲ್ಲದೆ ಯಾವುದೇ ಬ್ಯಾಂಕ್‌ಗಳು ರೈತರಿಗೆ ಹೊಸ ಸಾಲ ನೀಡದಿರುವುದು ರೈತರಿಗೆ ನುಂಗಲಾರದ ತುತ್ತಾಗಿದೆ ಎಂದು ತಿಳಿಸಿದರು.
ಮರಳು ಸಾಗಾಣಿಕೆಗೆ ಸರಳ ನೀತಿ ಜಾರಿಗೊಳಿಸಬೇಕು. ಕಲಬುರ್ಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಸಂಪೂರ್ಣ ದಿವಾಳಿ ಹಂತಕ್ಕೆ ತಲುಪಿದ್ದು, ಅದನ್ನು ಬಲಪಡಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾಗಿಣಾ ನದಿ ಎರಡು ಬದಿಗಳಲ್ಲಿ ಸುಮಾರು 160 ಕಿ.ಮೀ ದೂರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಕಾಗಿಣಾ ನದಿ ನೀರು ಬಳಕೆಗೆ ಏತ ನೀರಾವರಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದರು.
ಈ ವೇಳೆ ಸೇಡಂ ವಿಧಾನಸಭಾ ಕ್ಷೇತ್ರದ ಕೆಲ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿ ಸಹಕಾರದ ಅವಶ್ಯಕತೆಯಿದೆ ಎಂದು ತೇಲ್ಕೂರ ಹೇಳಿದರು.
ಈ ವೇಳೆ ಸಿಎಂ ಕುಮಾರಸ್ವಾಮಿ ಮಾತನಾಡಿ, ಸಮಿತಿ ರಚಿಸಿ ಸಣ್ಣಪುಟ್ಟ ಬದಲಾವಣೆ ಸೇರಿದಂತೆ ಸೇಡಂನ ಹಳ್ಳಿಗಳನ್ನು ಸೇರಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.