ಸೌಲಭ್ಯಕೊರತೆ:ವಿದ್ಯಾರ್ಥಿಗಳಪರದಾಟ
8 ವರ್ಷದಿಂದ ಶಾಲೆ ಗೋಡೆಗಳಿಗೆ ಬಳಿದಿಲ್ಲ ಬಣ್ಣ ನಿರ್ವಹಣೆ ಕೊರತೆಯಿಂದ ಶೌಚಾಲಯ ನಿರುಪಯುಕ್ತ
Team Udayavani, Nov 28, 2019, 1:22 PM IST
ಚೆನ್ನಕೇಶವುಲು ಗೌಡ
ಗುರುಮಠಕಲ್: ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಪಟ್ಟಣದ ನಾರಾಯಣಪುರ ಬೇಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 1983ರಲ್ಲಿ ಎರಡು ಕೊಠಡಿಗಳು ನಿರ್ಮಾಣವಾಗಿವೆ. ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳು ಹೊರಾಂಗಣದಲ್ಲಿ ಕುಳಿತು ಅಭ್ಯಾಸ ಮಾಡುತ್ತಾರೆ. ಶಾಲೆಯಲ್ಲಿ ಇಬ್ಬರು ಶಿಕ್ಷಕಿಯರು ಇದ್ದಾರೆ. 1ರಿಂದ 5ನೇ ತರಗತಿಗೆ ಒಟ್ಟು 48 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ನಿತ್ಯ ನಾಲ್ಕೈದು ವಿದ್ಯಾರ್ಥಿಗಳು ಗೈರು ಹಾಜರಾಗುತ್ತಿದ್ದರೆ ಶೇ.90ರಷ್ಟು ವಿದ್ಯಾರ್ಥಿಗಳು ಶಾಲೆಗೆ ಆಗಮಿಸುತ್ತಾರೆ. ಶಾಲೆಯಲ್ಲಿ ಎರಡು ಕೊಠಡಿಗಳಿವೆ. ಒಂದು ಕೊಠಡಿಯಲ್ಲಿ ಮುಖ್ಯ ಶಿಕ್ಷಕರ ಟೇಬಲ್, ಖುರ್ಚಿ, ಪಠ್ಯ ಪುಸ್ತಕ, ಶಾಲಾ ದಾಖಲಾತಿ ಇಡಲಾಗಿದೆ. ಇನ್ನೂಂದು ಕೊಠಡಿಯಲ್ಲಿ ಶಿಕ್ಷಕಿ ಮಕ್ಕಳಿಗೆ ಪಾಠ ಮಾಡುತ್ತಾರೆ.
ಇದರಲ್ಲಿ ಶಿಕ್ಷಕಿಯರಿಗೆ ಸಭೆ, ತರಬೇತಿ, ಬ್ಯಾಂಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಜವಾಬ್ದಾರಿ ಇರುತ್ತದೆ. ಅಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕರು ಪಾಠ ಮಾಡಬೇಕಾಗಿದೆ. ಶಾಲೆ ಸುತ್ತಮುತ್ತ ಅನೈರ್ಮಲ್ಯ ವಾತಾವರಣ ಇದೆ. ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಕಟ್ಟಡದ ಛಾವಣಿಗೆ ಬಳಸಲಾದ ಸಿಮೆಂಟ್ ಪದರು ಆಗಾಗ ಉದುರುತ್ತದೆ. ಈ ನಡುವೆ ಅಪಾಯ ಭೀತಿಯಲ್ಲಿ ವಿದ್ಯಾರ್ಥಿಗಳು ಪಾಠ ಕಲಿಯುತ್ತಾರೆ. ಕಳೆದ 8 ವರ್ಷದಿಂದ ಶಾಲೆ ಗೋಡೆಗಳಿಗೆ ಸುಣ್ಣ, ಬಣ್ಣ ಬಳಿದಿಲ್ಲ.
ನಿರ್ವಹಣೆ ಕೊರತೆಯಿಂದ ಶೌಚಾಲಯ ನಿರುಪಯುಕ್ತವಾಗಿದೆ. ಆಟದ ಮೈದಾನ ಇಲ್ಲ. ಹತ್ತು ಹಲವು ಕೊರತೆಗಳ ಮಧ್ಯೆ ಮಕ್ಕಳು ಹೇಗೆ ಗುಣಮಟ್ಟದ ಶಿಕ್ಷಣ ಕಲಿಯಬೇಕು? ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ. ಅನಿವಾರ್ಯ ಎಂಬಂತೆ ಶಿಕ್ಷಕರು ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದಾರೆ.
ಶಿಕ್ಷಣ ಇಲಾಖೆ ತಕ್ಷಣ ಶಾಲೆಗೆ ಕೊಠಡಿ ಮಂಜೂರು ಮಾಡಬೇಕು. ಕೂಡಲೇ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.