ಕಬ್ಬಿಣಾಂಶ ಇರುವ ಆಹಾರ ಸೇವಿಸಿ

•ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಮಾತೃ ಪೂರ್ಣ ಯೋಜನೆ ಸೌಲಭ್ಯ ಪಡೆದುಕೊಳ್ಳಿ

Team Udayavani, Sep 19, 2019, 12:28 PM IST

19-Sepctember-9

ಗುರುಮಠಕಲ್: ಅಂಗನವಾಡಿ ಕೇಂದ್ರದಲ್ಲಿ ಪೋಷಣ್‌ ಅಭಿಯಾನ ಯೋಜನೆಯಡಿ ನಡೆದ ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವನಜಾಕ್ಷಿ ಬೆಂಡಿಗೇರಿ ಉದ್ಘಾಟಿದರು.

ಗುರುಮಠಕಲ್: ಗರ್ಭಿಣಿಯರು, ಬಾಣಂತಿಯರು ಪ್ರತಿದಿನ ಊಟದಲ್ಲಿ ಕಬ್ಬಿಣಾಂಶ ಹೆಚ್ಚಿರುವ ಆಹಾರ ಪದಾರ್ಥ ಸೇವಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವನಜಾಕ್ಷಿ ಬೆಂಡಿಗೇರಿ ಹೇಳಿದರು.

ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್‌ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ಪೌಷ್ಟಿಕ ಆಹಾರ ಶಿಬಿರ ಹಾಗೂ ಮಕ್ಕಳ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗರ್ಭಿಣಿಯರು ನಿತ್ಯ ಸೇವಿಸುವ ಆಹಾರದಲ್ಲಿ ಸಾಕಷ್ಟು ಪೋಷಕಾಂಶಗಳು ಇರುವಂತೆ ನೋಡಿಕೊಳ್ಳಬೇಕು. ಸಾಮಾನ್ಯ ಮಹಿಳೆಗಿಂತ ಗರ್ಭಿಣಿಯರು ಮೂರು ಪಟ್ಟು ಹೆಚ್ಚು ಕ್ಯಾಲೋರಿಯುಕ್ತ ಆಹಾರ ಸೇವಿಸಬೇಕು. ಶಕ್ತಿ ನೀಡುವ, ಪೋಷಕಾಂಶಗಳಿರುವ, ಕ್ಯಾಲ್ಷಿಯಂ ಮತ್ತು ಕಬ್ಬಿಣಾಂಶ ಇರುವ, ಧಾನ್ಯಗಳು, ಸಿರಿಧಾನ್ಯಗಳು, ಸೊಪ್ಪು-ತರಕಾರಿ, ಹಣ್ಣು, ಹಾಲು, ಮೊಸರು, ಮಜ್ಜಿಗೆ, ನುಗ್ಗೆಕಾಯಿ, ಬಟಾಣಿ ಸೇವಿಸುವುದರಿಂದ ಎಲ್ಲ ಪೋಷಕಾಂಶಗಳು ಲಭಿಸುತ್ತವೆ. ವಿಶೇಷವಾಗಿ ಗರ್ಭಿಣಿಯರಿಗೆ ಕ್ಯಾಲ್ಷಿಯಂ ಅಧಿಕ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಗರ್ಭದಲ್ಲಿರುವ ಭ್ರೂಣಕ್ಕೆ ಚೆನ್ನಾಗಿ ಕ್ಯಾಲ್ಷಿಯಂ ಪೂರೈಕೆಯಾದಾಗ ಶಿಶುವಿನ ಮೂಳೆಗಳು ಶಕ್ತಿಯುತವಾಗುತ್ತವೆ. ಹಲ್ಲುಗಳು ಬೆಳೆಯಲು ಸಹಕಾರಿ. ಕಡಿಮೆ ಕ್ಯಾಲೋರಿಗಳಿರುವ ಆಹಾರ ಸೇವಿಸುವುದರಿಂದ ತಾಯಿ ದೇಹದಲ್ಲಿ ಜಿಡ್ಡಿನಾಂಶ ಅಧಿಕವಾಗಿ ಕೆರೋಟಿನ್ಸ್‌ ಉತ್ಪತ್ತಿಯಾಗುತ್ತದೆ. ಇದರಿಂದ ಬುದ್ಧಿಮಾಂಧ್ಯ ಮಕ್ಕಳು ಜನಿಸುವ ಸಾಧ್ಯತೆಯಿರುತ್ತದೆ ಎಂದು ಹೇಳಿದರು.

ಗರ್ಭಿಣಿಯರು, ಬಾಣಂತಿಯರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಮಾತೃ ಪೂರ್ಣ ಯೋಜನೆಯಡಿ ನೀಡುತ್ತಿರುವ ಅನ್ನ, ತರಕಾರಿಯುಕ್ತ ಸಾಂಬಾರ, ಹಾಲು, ಮೊಟ್ಟೆ, ಶೇಂಗಾ ಚಿಕ್ಕಿ ಸೇವಿಸಬೇಕು ಎಂದು ಹೇಳಿದರು.

ಮಹಿಳಾ ಮೇಲ್ವಿಚಾರಕಿ ರೇಣುಕಾ ಯಲಗೋಡ ಮಾತನಾಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲನೇ ಹೆರಿಗೆಗೆ 3 ಕಂತುಗಳಲ್ಲಿ ಸರ್ಕಾರದಿಂದ 5 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಹೇಳಿದರು.

ವಾರ್ಡ್‌ ಸದಸ್ಯ ನರಸಪ್ಪ ಗಡ್ಡಲ್, ಜೆಡಿಎಸ್‌ ಮುಖಂಡ ರವಿಂದ್ರರೆಡ್ಡಿ ಗವಿನೋಳ, ರೇಣುಕಾ ಪಡಿಗೆ, ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ, ವೆಂಕಟಮ್ಮ, ಭಾಗ್ಯಶ್ರೀ, ಮಮತಾ, ರಾಧಾ, ಅಂಗನವಾಡಿ ಸಹಾಯಕಿಯರಾದ ದೇವಕಿ, ಪದ್ಮಮ್ಮ, ಬಾಲಮ್ಮ ಇದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.