29ಕ್ಕೆ ಸಾಮೂಹಿಕ ವಿವಾಹ: ಬಿ. ಮಾಳಮ್ಮ
Team Udayavani, Dec 9, 2019, 6:39 PM IST
ಹಗರಿಬೊಮ್ಮನಹಳ್ಳಿ: ಪಟ್ಟಣದ ಹಳೇ ಹಗರಿಬೊಮ್ಮನಹಳ್ಳಿ ಸಮುದಾಯ ಭವನದಲ್ಲಿ ಡಿ. 29ರಂದು ರಾಷ್ಟ್ರಕವಿ ಕುವೆಂಪು ಅವರ 116ನೇ ಜನ್ಮದಿನದ ನಿಮಿತ್ತ 3ನೇ ವರ್ಷದ ಸರಳ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವದಾಸಿ ವಿಮೋಚನೆ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಮಾಳಮ್ಮ ತಿಳಿಸಿದರು.
ಪಟ್ಟಣದ ದೇವದಾಸಿ ವಿಮೋಚನೆ ಸಂಘದ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. 2 ವರ್ಷಗಳಿಂದಲೂ ಸಾಮೂಹಿಕ ಮದುವೆ ಹಮ್ಮಿಕೊಳ್ಳಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಡ ಜನರ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಮೂಹಿಕ ಮದುವೆಯಿಂದ ರೈತರು, ಕೃಷಿ ಕಾರ್ಮಿಕರು ಹೊಲಮನೆ ಒತ್ತೆ ಇಡುವುದು ತಪ್ಪುತ್ತದೆ. ದೇವದಾಸಿ ವಿಮೋಚನೆ ಸಂಘದ ಸದಸ್ಯರೆ ಮದುವೆ ಹೊಣೆ ಹೊತ್ತಿದ್ದು, ರೊಟ್ಟಿ, ಕಾಳ ಸೇರಿ ವಿವಿಧ ಆಹಾರ ಸಾಮಗ್ರಿಗಳ ನೆರವು ನೀಡುತ್ತಿದ್ದಾರೆ. ಮಸಣ ಕಾರ್ಮಿಕರ ಸಂಘ ಮತ್ತು ದೇವದಾಸಿಯರ ಮಕ್ಕಳ ಸಂಘದ ಸದಸ್ಯರೂ ಮದುವೆ ಸಹಭಾಗಿತ್ವ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಹಿರಿಯ ಬರಹಗಾರ ಹುರುಕಡ್ಲಿ ಶಿವಕುಮಾರ್ ಮಾತನಾಡಿ, ಈಗಾಗಲೇ 10 ಜೋಡಿ ಸಾಮೂಹಿಕ ಮದುವೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 15 ಜೋಡಿ ಮದುವೆ ಗುರಿ ಹೊಂದಲಾಗಿದೆ. ದೇವದಾಸಿಯರ ಮಕ್ಕಳನ್ನು ಮದುವೆಯಾಗುವವರಿಗೆ ಸರಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲ ಉದ್ದೇಶಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಈ ಕುರಿತು ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.
ಸಂಡೂರಿನ ವಿರಕ್ತಮಠದ ಪ್ರಭುಸ್ವಾಮೀಜಿ ಸಾನ್ನಿಧ್ಯವಹಿಸುವರು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ ತಿಳಿಸಿದರು. ಸಂಘದ ಅಧ್ಯಕ್ಷೆ ಬಿ. ಮೈಲಮ್ಮ, ಕಾರ್ಯದರ್ಶಿ ಪಿ.ಚಾಂದ್‌ಬಿ, ಸಿಐಟಿಯು ತಾಲೂಕು ಕಾರ್ಯದರ್ಶಿ ಎಸ್.ಜಗನ್ನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.