ಹಕ್ಯಾಳದಲ್ಲಿ ನೀರಿಗಾಗಿ ಪರದಾಟ
ಬತ್ತಿದ ಕೆರೆ-ಗ್ರಾಮದಲ್ಲಿರುವ ಕೊಳವೆಬಾವಿಗಳ ಕುಸಿದ ಅಂತರ್ಜಲ
Team Udayavani, May 8, 2019, 1:00 PM IST
ಕಮಲನಗರ: ಹಕ್ಯಾಳ ಗ್ರಾಮದಲ್ಲಿ ಮಹಿಳೆಯರು ನೀರಿಗಾಗಿ ಪರದಾಡುತ್ತಿರುವುದು.
ಕಮಲನಗರ: ತಾಲೂಕಿನ ಹಕ್ಯಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಮಹಿಳೆಯರು ನಿತ್ಯ ಕೊಡ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ ಹತ್ತಿರವಿರುವ ಕೆರೆಯಲ್ಲಿ ನೀರು ಬತ್ತಿ ಹೋಗಿರುವುದರಿಂದ ಗ್ರಾಮದಲ್ಲಿರುವ ಕೊಳವೆ ಬಾವಿ, ತೆರೆದ ಬಾವಿಗಳಲ್ಲಿ ನೀರಿಲ್ಲದಂತಾಗಿದೆ. ಮುರ್ಕಿ ಗ್ರಾ.ಪಂ. ವ್ಯಾಪ್ತಿಯ ಈ ಗ್ರಾಮದಲ್ಲಿ 1200 ಕ್ಕೂ ಹೆಚ್ಚು ಜನ ಸಂಖ್ಯೆಯಿದ್ದು, 4 ಕೊಳವೆ ಬಾವಿ, 1 ತೆರೆದ ಬಾವಿ ಇದೆ.
ಇದರಲ್ಲಿ 2 ಕೊಳವೆ ಬಾವಿ ಬತ್ತಿ ಹೋಗಿದ್ದು, 2 ಕೊಳವೆ ಬಾವಿ, 1 ತೆರೆದ ಬಾವಿಯಿಂದ ನೀರು ಅಲ್ಪ-ಸ್ವಲ್ಪ ಬರುತ್ತಿದ್ದರಿಂದ ನೀರಿನ ಸಮಸ್ಯೆ ಉಂಟಾಗಿದೆ.
ಪ್ರಸಕ್ತ ಎಸ್.ಸಿ. ಬಡಾವಣೆಯಲ್ಲಿ 1 ಕೊಳವೆ ಬಾವಿ, ಹನುಮಾನ ಮಂದಿರದ ಹತ್ತಿರವಿರುವ 1 ಕೊಳವೆ ಮತ್ತು ಗ್ರಾಮದ ಹೊರವಲಯದಲ್ಲಿರುವ 1 ತೆರೆದ ಬಾವಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಅಂತರ್ಜಲದ ಮಟ್ಟ ಕುಸಿದ ಕಾರಣ ಗ್ರಾಮಸ್ಥರಿಗೆ ನೀರು ಸಾಕಾಗುತ್ತಿಲ್ಲ. ಸುಮಾರು ಒಂದು ತಿಂಗಳಿನಿಂದ ಗ್ರಾಮದಲ್ಲಿ ನೀರಿಗಾಗಿ ಮನೆಯ ಕೆಲಸಗಳನ್ನೆಲ್ಲ ಬಿಟ್ಟು ಮಹಿಳೆಯರು, ಮಕ್ಕಳು, ವೃದ್ಧರು ಕೊಡಗಳನ್ನು ಹಿಡಿದುಕೊಂಡು ಅಕ್ಕ-ಪಕ್ಕದ ಹೊಲ, ಗದ್ದೆಗಳಿಗೆ ಹೋಗಿ ನೀರು ತಂದು ಬಳಸಿಕೊಳ್ಳುತ್ತಿದ್ದಾರೆ. ಈ ಮಧ್ಯದಲ್ಲಿ ವಿದ್ಯುತ್ ಕೈಕೊಡುತ್ತಿದೆ. ಆಗ ಗಂಟೆಗಟ್ಟಲೇ ಕಾಯ್ದು ನೀರು ತರಬೇಕಿದೆ ಎಂದು ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ನೀರಿನ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಗ್ರಾಮ ಪಂಚಾಯತ್ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಚುನಾಯಿತರು, ಅಧಿಕಾರಿಗಳು ಕೂಡಲೇ ಗ್ರಾಮದಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಸದ್ಯ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಸಂಬಂಧಿತ ಅಧಿಕಾರಿಗಳು ಟ್ಯಾಂಕರ್ ವ್ಯವಸ್ಥೆ ಮಾಡಿಸಿ ನೀರಿನ ಸಮಸ್ಯೆ ಬಗೆಹರಿಸಬೆಕು.
• ನಾಗೇಂದ್ರ ಬಿರಾದಾರ, ಗ್ರಾಮಸ್ಥ.
ನೀರಿನ ಬರ ನಿಗಿಸಲು ಖಾಸಗಿಯವಾಗಿ ಕಿರಣ ಪಾಟೀಲ್ ಅವರ ಹೊಲದ ಕೊಳವೆ ಬಾವಿಯಿಂದ ಉಚಿತ ನೀರು ಕೊಡುತ್ತಿದ್ದಾರೆ. ಮತ್ತೂಬ್ಬ ಖಾಸಗಿ ಅವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಜನರಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
• ಹಣಮಂತರಾಯ ಕೌಟಗೆ,
ಮುರ್ಕಿ ಪಿಡಿಒ.
ಗ್ರಾಮದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ನಮ್ಮ ಹೊಲದಲ್ಲಿರುವ ಕೊಳವೆಯಿಂದ ಉಚಿತವಾಗಿ ನೀರನ್ನು ಪೂರೈಸುತ್ತಿದ್ದೇನೆ. ಮುಂದೆಯೂ ಕೂಡಾ ನೀರಿನ ಸಮಸ್ಯೆ ಬಗೆಹರಿಸಲು ಉಚಿತವಾಗಿ ನೀರನ್ನು ಕೊಡಲು ಸಿದ್ಧ.
•ಕಿರಣ ಪಾಟೀಲ್, ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.