ಸರ್ಕಾರಿ ಸೌಲಭ್ಯ ಜನರಿಗೆ ತಲುಪಲಿ

ಸ್ಮಾರ್ಟ್‌ಕಾರ್ಡ್‌ ತಾಲೂಕುಗಳಲ್ಲಿ ದೊರೆಯುವಂತಾಗಲಿ

Team Udayavani, Aug 1, 2019, 3:16 PM IST

1-Agust-34

ಹಳಿಯಾಳ: ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕಾಡಳಿತದ ಅಧಿಕಾರಿಗಳೊಂದಿಗೆ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಪುರಸಭೆ ಸದಸ್ಯರು ಅಭಿವೃದ್ಧಿ ಕುರಿತು ಚರ್ಚಿಸಿದರು.

ಹಳಿಯಾಳ: ಮಾಜಿ ಶಾಸಕ ಸುನೀಲ್ ಹೆಗಡೆ ಮಿನಿ ವಿಧಾನಸೌಧಕ್ಕೆ ಬಿಜೆಪಿ ತಾಲೂಕಾಧ್ಯಕ್ಷ, ಪದಾಧಿಕಾರಿಗಳು, ಪುರಸಭೆ ಬಿಜೆಪಿ ಸದಸ್ಯರ ನಿಯೋಗದೊಂದಿಗೆ ದಿಢೀರ್‌ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.

ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಹಶೀಲ್ದಾರ್‌ ಕಚೇರಿಗೂ ಭೇಟಿ ನೀಡಿ ತಾಲೂಕಾಡಳಿತದ ಅಧಿಕಾರಿಗಳೊಂದಿಗೆ ಕ್ಷೇತ್ರದ ಅಭಿವೃದ್ಧಿ, ಯೋಜನೆಗಳ ಪ್ರಗತಿ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆ ಹಾಗೂ ಪ್ರಗತಿ ಕುರಿತು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕರಿಂದ ಮಾಹಿತಿ ಪಡೆದರು.

ಕೇಂದ್ರ ಸರ್ಕಾರದ ಉಜ್ವಲಾ ಯೋಜನೆ ಪ್ರಗತಿ ಬಗ್ಗೆ ಹಾಗೂ ಆಯುಷ್ಮಾನ್‌ ಯೋಜನೆಯಡಿ ನೀಡಲಾಗುವ ಸ್ಮಾರ್ಟ್‌ ಕಾರ್ಡ್‌ಗಳನ್ನು ಜಿಲ್ಲಾ ಕೇಂದ್ರ ಕಾರವಾರದಲ್ಲಿಯೇ ನೀಡಲಾಗುತ್ತಿದ್ದು ಈ ಭಾಗದ ಜನರಿಗೆ ಕಾರ್ಡ್‌ಗಳು ದೊರೆಯದೆ ಸಮಸ್ಯೆ ಆಗುತ್ತಿರುವ ಕಾರಣ, ತಾಲೂಕು ಆಸ್ಪತ್ರೆಯಲ್ಲಿಯೇ ಸ್ಮಾರ್ಟ್‌ಕಾರ್ಡ್‌ ನೀಡುವಂತೆ ತಹಶೀಲ್ದಾರ್‌ ವಿದ್ಯಾಧರ ಗುಳಗುಳಿ ಅವರಲ್ಲಿ ಆಗ್ರಹಿಸಿದರು.

ದಿನದಯಾಳ್‌ ಉಪಾಧ್ಯಾಯ ಹಾಗೂ ಸೌಭಾಗ್ಯ ಯೋಜನೆಯಡಿ ಗ್ರಾಮಾಂತರ ಭಾಗದವರಿಗೆ ಉಚಿತ ವಿದ್ಯುತ್‌, ಎಲ್ಇಡಿ ಬಲ್ಬ್ ನೀಡುವ ಕಾರ್ಯಕ್ಕೆ ವೇಗ ನೀಡುವಂತೆಯು ಕೋರಿದರು.

ಇನ್ನೂ ಫಸಲ್ಬಿಮಾ ಯೋಜನೆಯಡಿ ಎಷ್ಟು ಜನ ರೈತರಿಗೆ ವಿಮೆ ಮಾಡಲಾಗಿದೆ. ಪ್ರಗತಿ ಯಾವ ಹಂತದಲ್ಲಿದೆ ಎಂದು ಕೇಳಿದ ಹೆಗಡೆ, ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು ಸರ್ಕಾರದ ಪ್ರತಿಯೊಂದು ಯೋಜನೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.

ಪಟ್ಟಣದಿಂದ ಊರ ಹೊರಗೆ ಹೋಗುವ ಕೊಳಚೆ ನೀರನ್ನು ಶುದ್ಧೀಕರಣಗೊಳಿಸಿ ರೈತರ ಹೊಲಗಳಿಗೆ ನೀಡುವ ಬಗ್ಗೆ ಯೋಜನೆಯ ಪ್ರಸ್ತಾಪವನ್ನು ಬಿಜೆಪಿ ಚುನಾಯಿತ ಸದಸ್ಯರೊಂದಿಗೆ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ ಅವರು ಹಳಿಯಾಳಕ್ಕೆ ಕೊಳಚೆ ನೀರು ಶುದ್ಧೀಕರಣ ಘಟಕದ ಅವಶ್ಯಕತೆ ಇದ್ದು ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು. ಇನ್ನು ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಾನೂನು ಬಾಹಿರವಾಗಿ ಅಕ್ರಮವಾಗಿ ಚಿಕನ್‌ ಅಂಗಡಿಗಳು ತಲೆ ಎತ್ತಿದ್ದು ಇದರಿಂದ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಸಮಸ್ಯೆಯಾಗುತ್ತಿದ್ದು, ತಕ್ಷಣ ಒಂದು ಬದಿ ಅವುಗಳಿಗೆ ಮಾರುಕಟ್ಟೆ ನಿರ್ಮಿಸಿಕೊಡಬೇಕೆಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಅವರಿಗೆ ಹೇಳಿದರು.

ತಾಪಂ ಇಒ ಡಾ| ಮಹೇಶ ಕುರಿಯವರ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಮುತ್ನಾಳ, ಅಜೋಬಾ ಕರಂಜೆಕರ, ಪುರಸಭೆ ಸದಸ್ಯರಾದ ಸಂತೋಷ ಘಟಕಾಂಬಳೆ, ಉದಯ ಹೂಲಿ, ಚಂದ್ರಕಾಂತ ಕಮ್ಮಾರ, ರೂಪಾ ಗಿರಿ, ಸಂಗೀತಾ ಜಾಧವ, ರಾಜೇಶ್ವರಿ ಹಿರೇಮಠ, ಮುಖಂಡರಾದ ಉಲ್ಲಾಸ ಇತರರಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.