ಸದಸ್ಯರ ರಾಜೀನಾಮೆ ಬೆದರಿಕೆ
Team Udayavani, Dec 7, 2019, 5:55 PM IST
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಪಂನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚುನಾಯಿತ ಸದಸ್ಯರು ರಾಜೀನಾಮೆಗೆ ಮುಂದಾದ ಘಟನೆ ನಡೆದಿದೆ.
ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ , ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹುಸೇನ್ ಅವರ ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ಆಕ್ಷೇಪಿಸಿ ತಾಪಂ ಇಒಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಪಂನಲ್ಲಿ ಒಟ್ಟು 16 ಜನ ಸದಸ್ಯರುಗಳಿದ್ದು ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸ್ಪಂದಿಸುತ್ತಿಲ್ಲ. ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಅವರ ತವರು ಗ್ರಾಮವಾಗಿದ್ದರೂ ಮೂಲ ಸೌಕರ್ಯಗಳು ಮರೀಚಿಕೆಯಾಗಿವೆ. 6 ವಾರ್ಡ್‌ಗಳ ಕುಡಿಯುವ ನೀರಿನ ಕೊಳವೆ ಪೈಪ್‌ಗ್ಳು ಒಡೆದು ಚರಂಡಿ ನೀರು ಸೇರ್ಪಡೆಗೊಳ್ಳುತ್ತಿದ್ದರೂ ದುರಸ್ತಿ ಕಾಮಗಾರಿ ಕೈಗೊಳ್ಳಲು ಸಹಕಾರ ನೀಡುತ್ತಿಲ್ಲ. ಸಣ್ಣ ಪುಟ್ಟ ಕಾಮಗಾರಿಗೆ ಬಳಸಿದ ವೆಚ್ಚವನ್ನು ಭರಿಸದೆ ಕಾಲಹರಣ ಮಾಡುತ್ತಿರುವ ಪಿಡಿಒ ವಿರುದ್ಧ ಆಕ್ರೋಶಗೊಂಡ ಸದಸ್ಯರು ಕಾರ್ಯ ನಿರ್ವಹಣಾಧಿಕಾರಿಗೆ ದೂರು ಸಲ್ಲಿಸಿದರು.
ಸದಸ್ಯರ ಸಮಸ್ಯೆ ಆಲಿಸಿದ ಕಾರ್ಯನಿರ್ವಹಣಾಧಿಕಾರಿ ಅನಂತರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಅಧ್ಯಕ್ಷೆ, ಪಿಡಿಒ ಹಾಗೂ ಕಂಪ್ಯೂಟರ್ ಆಪರೇಟರ್ ಕವಿತಾ ಅವರು 2019-20 ರಲ್ಲಿ ಉದ್ಯೋಗ ಖಾತರಿ ಯೋಜನೆ ಯಡಿಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ 6.20 ಲಕ್ಷ ರೂ. ಆತ್ಮೀಯರ ಹೆಸರಲ್ಲಿ ಪಾವತಿ ಮಾಡಿಕೊಂಡಿದ್ದಾರೆ.
ಬಸವನಕೋಟೆ ಮುಖ್ಯರಸ್ತೆಯಿಂದ ಕಡೆಮನೆ ಹಾಲಪ್ಪ ಮನೆಯವರೆಗೆ ಸಿ.ಸಿ ರಸ್ತೆ, ಹೊಲದ ಬದು ನಿರ್ಮಾಣ ಕಾಮಗಾರಿಗಳಲ್ಲಿ ಪರ್ಯಾಯ ಫೋಟೋಗಳನ್ನು ಬಳಸಿ ವಂಚಿಸಿದ್ದಾರೆ ಎಂದು ಸದಸ್ಯರು ದೂರಿದರು. ಪಿಡಿಒ ಬಂದು 8 ತಿಂಗಳ ಅವ ಧಿಯಲ್ಲಿ ಕೇವಲ ಒಂದು ಗ್ರಾಮ ಸಭೆ ನಡೆಸಿದ್ದಾರೆ. ಪಂಚಾಯಿತಿ ನಿಯಮಗಳನ್ನು ಗಾಳಿಗೆ ತೂರಿ, ಸದಸ್ಯರ ಗಮನಕ್ಕೆ ತರದೆ ಕಾಮಗಾರಿ ರೂಪುರೇಷೆ ತಯಾರಿಸಲಾಗಿದೆ ಎಂದು ಆರೋಪಿಸಿದ ಸದಸ್ಯೆ ಮಾಳಿಗೇರ್ ರೇಣುಕಾ ಹಾಗೂ ಎಂ. ಮಧು ರಾಜೀನಾಮೆ ಪತ್ರವನ್ನು ಅಧ್ಯಕ್ಷರಿಗೆ ಸಲ್ಲಿಸಿದರು.
ಇಒ ಅನಂತರಾಜ್, “ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಸೂಕ್ತ ದಾಖಲೆ ಒದಗಿಸಲು ಸೂಚಿಸಿ, ನೆರೇಗಾ ಯೋಜನೆ ಕುರಿತು ಎರಡು ದಿನಗಳಲ್ಲಿ ಸಮಿತಿ ರಚಿಸಿ ತನಿಖೆ ಕೈಗೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.
ಒಂದು ವರ್ಷದ ವಿದ್ಯುತ್ ಲೈಟ್, ಪರಿಕರಗಳನ್ನು ನಿರ್ವಹಣೆ ಮಾಡಿದ ಬಿಲ್ ಗಳನ್ನು ಪಾವತಿ ಮಾಡದೆ, ಪ್ರತ್ಯೇಕ ಬಿಲ್ ಸೃಷ್ಟಿಸಿ ಪಾವತಿ ಮಾಡಿದ್ದಾರೆ ಎಂದು ಸದಸ್ಯ ಮಂಜುನಾಥಗೌಡ ಆಕ್ರೋಶ ವ್ಯಕ್ತಪಡಿಸಿದರೆ ಬರಗಾಲದ ಅವಧಿಯಲ್ಲಿ ದೈವತ್ವದ ಕೊಳವೆ ಬಾವಿಯಿಂದ ನೀರು ಪೂರೈಕೆ ಮಾಡಲಾಗಿತ್ತು. 3 ವರ್ಷದ ಹಿಂದಿನ ಬಿಲ್ ಪಾವತಿಸಬೇಕು ಎಂದು ಮಾಜಿ ಅಧ್ಯಕ್ಷ ಸಲಾಂ ಸಾಬ್ ಒತ್ತಾಯಿಸಿದರು. ಪಿಡಿಒ ಮಹ್ಮದ್ ಹುಸೇನ್ ಅವರು, ಪಂಚಾಯಿತಿ ಆಡಳಿತ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸೂಕ್ತ ದಾಖಲೆಗಳನ್ನು ಸಂಬಂಧಿಸಿದ ಅಧಿ ಕಾರಿಗಳಿಗೆ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಸದಸ್ಯರಾದ ವೈ.ಡಿ.ಅಣ್ಣಪ್ಪ, ಎ.ಬಿ.ಮಂಜುನಾಥಗೌಡ, ಪರಸಪ್ಪ, ಯೋಗೇಶ್, ಹಾದಿಮನೆ ನಾಗರಾಜ್, ಸಿದ್ದಪ್ಪ, ಬಸಪ್ಪ, ಮುಖಂಡರಾದ ಮಾಜಿ ಅಧ್ಯಕ್ಷ ಸಲಾಮ್ ಸಾಬ್, ನಜೀರ್ ಸಾಬ್, ಪರಶುರಾಮ, ಷಣ್ಮುಖಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.