ಸಾಧನೆಗೆ ಪುರಸ್ಕಾರ ಪ್ರೇರಣೆ
ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿ: ಸ್ವಾಮೀಜಿ
Team Udayavani, Jun 10, 2019, 3:18 PM IST
ಹರಪನಹಳ್ಳಿ: ಕನ್ನಡ ರತ್ನ ಮತ್ತು ಜ್ಞಾನ ಜ್ಯೋತಿ ಪ್ರಶಸ್ತಿ ವಿತರಣೆ ಸಮಾರಂಭವನ್ನು ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಹರಪನಹಳ್ಳಿ: ವಿದ್ಯಾರ್ಥಿಗಳ ಸಾಧನೆ ಹಿಂದೆೆ ಅವರ ಪರಿಶ್ರಮದ ಜೊತೆಗೆ ಶಿಕ್ಷಕರು, ಪೋಷಕರ ಪ್ರೋತ್ಸಾಹ ಕೂಡ ಕಾರಣವಾಗಿರುತ್ತದೆ. ಮಕ್ಕಳಿಗೆ ನೀಡುವ ಪುರಸ್ಕಾರ ಮುಂದಿನ ಸಾಧನೆಗೆ ಪ್ರೇರಣೆ ನೀಡುತ್ತದೆ ಎಂದು ಹೂವಿನಹಡಗಲಿ ಮಾನಿಹಳ್ಳಿ ಪುರವರ್ಗ ಮಠದ ಪೀಠಾಧ್ಯಕ್ಷ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ನಟರಾಜ ಕಲಾಭವನದಲ್ಲಿ ಭಾನುವಾರ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಎಸ್‌ಎಸ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ‘ಕನ್ನಡ ರತ್ನ ಮತ್ತು ಜ್ಞಾನ ಜ್ಯೋತಿ’ ಪ್ರಶಸ್ತಿ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರೆ ಇತರೇ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಸಮಾಜದ ಜವಾಬ್ದಾರಿ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಅಧ್ಯಯನ ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿದ್ದು, ಹೆಚ್ಚಿನ ಆಸಕ್ತಿವಹಿಸಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಸಾಧನೆಗೆ ಪ್ರಯತ್ನಿಸಿದರೆ ಸಮಾಜಕ್ಕೆ ಮತ್ತು ಪೋಷಕರಿಗೆ ಕೀರ್ತಿ ತರಲು ಸಾಧ್ಯವಾಗಲಿದೆ ಎಂದರು.
ತೆಗ್ಗಿನಮಠ ಕಾರ್ಯದರ್ಶಿ ಟಿ.ಎಂ. ಚಂದ್ರಶೇಖರಯ್ಯ ಮಾತನಾಡಿ, ಎಸ್‌ಎಸ್‌ಎಲ್ಸಿ ನಂತರ ಮುಂದೇನು ಎಂಬ ವಿಷಯ ಕುರಿತು ಪ್ರಶಸ್ತಿ ಜೊತೆ ಮಾಹಿತಿ ಒಳಗೊಂಡ ಪುಸ್ತಕ ಹಂಚಿಕೆ ಮಾಡಬೇಕು. ಹೊಸ-ಹೊಸ ಕೋರ್ಸ್‌ಗಳ ವಿದ್ಯಾರ್ಥಿಗಳು ಮುಖ ಮಾಡಬೇಕು. ವಿದೇಶಗಳಿಗೆ ಹೋಗಿ ನೆಲೆಸುವ ಬದಲು ನಮಲ್ಲಿಯೇ ನಮ್ಮ ಪ್ರತಿಭೆ ಪ್ರದರ್ಶಿಸಿದ ಬಲಿಷ್ಠ ಭಾರತವನ್ನಾಗಿಸಲು ಶಕ್ತಿ ತುಂಬಬೇಕು ಎಂದು ಹೇಳಿದರು.
ಎಂ.ಪಿ. ಪ್ರಕಾಶ್ ಸಮಾಜಮುಖೀ ಟ್ರಸ್ಟ್ ಅಧ್ಯಕ್ಷೆ ಎಂ.ಪಿ. ವೀಣಾ ಮಹಾಂತೇಶ್ ಮಾತನಾಡಿ, ಕನ್ನಡ ಭಾಷೆ ಬೆಳವಣಿಗೆ ಪೂರಕವಾಗಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸುವ ಕೆಲಸವಾಗಿದೆ. ಮಕ್ಕಳು ಶಿಕ್ಷಣದಲ್ಲಿ ರ್‍ಯಾಂಕ್ ಪಡೆಯುವುದು ಮುಖ್ಯವಲ್ಲ, ವೈದ್ಯರು, ಇಂಜಿನಿಯರ್ ಆಗಬೇಕು ಎನ್ನುವ ಬದಲು ಅನ್ನ ನೀಡುವ ರೈತನಾಗಿ ಬೆಳೆಯಬೇಕು ಎನ್ನುವ ಭಾವನೆ ಮೂಡಲಿ ಎಂದರು.
ಕಾರ್ಯಕ್ರಮ ಸಂಘಟಕ, ಉಪನ್ಯಾಸಕ ಎಚ್.ಮಲ್ಲಿಕಾರ್ಜುನ ಮತ್ತು ಕಾರ್ಮಿಕ ಭದ್ರತಾ ಮಂಡಳಿ ರಾಜ್ಯ ಮಾಜಿ ನಿರ್ದೇಶಕ ಶಶಿಧರ ಪೂಜಾರ್ ಮತ್ತು ಪಿ.ಎಲ್.ಪೋಮ್ಯನಾಯ್ಕ ಮಾತನಾಡಿದರು. ನವಜ್ಯೋತಿ ಸಾಂಸ್ಕೃತಿಕ ಸೇವಾ ಸಮಿತಿ ಸ್ವಪ್ನ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು.
ತಾಪಂ ಸದಸ್ಯ ಒ.ರಾಮಪ್ಪ, ವಕೀಲ ಬಿ.ಮಹಬೂಬ್‌ಸಾಬ್, ಪಿ.ಮಂಜುನಾಥ, ಮಲ್ಲಿಕಾರ್ಜುನಸ್ವಾಮಿ ಕಲ್ಮಠ, ಮಕಬುಲ್ ಸಾಹೇಬ್, ಸರ್ವೇಶ್, ವೆಂಕಟಪತಿರಾಜು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.