ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ ಇಲ್ಲ

ತಿಂಗಳಿಗೊಮ್ಮೆ ಭೇಟಿ ನೀಡಿ ಕುಂದುಕೊರತೆ ಪರಿಶೀಲನೆ: ಡಿಸಿ

Team Udayavani, Jul 20, 2019, 11:28 AM IST

20-July-13

ಹರಪನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರ ಕಟ್ಟಡ ಹಾಗೂ ಜಾಗವನ್ನು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಪರಿಶೀಲನೆ ನಡೆಸಿದರು.

ಹರಪನಹಳ್ಳಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರದ ಪ್ರತ್ಯೇಕ ಕೌಂಟರ್‌ ತೆರೆಯುವುದಿಲ್ಲ, ಬದಲಿಗೆ ನಾನೇ ತಿಂಗಳಿಗೊಮ್ಮ ಭೇಟಿ ನೀಡಿ ಕುಂದುಕೊರತೆಗಳ ಅರ್ಜಿ ಸ್ವೀಕರಿಸುತ್ತೇನೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ತಿಳಿಸಿದರು.

ಪಟ್ಟಣಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿ ಕಂದಾಯ ಇಲಾಖೆ ಸಿಬ್ಬಂದಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಬಳ್ಳಾರಿ ದೂರವಾಗುವ ಹಿನ್ನೆಲೆಯಲ್ಲಿ ಹರಪನಹಳ್ಳಿ ಮಿನಿವಿಧಾನಸೌಧದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕಾರಕ್ಕೆ ಜಿಲ್ಲಾಧಿಕಾರಿಗಳ ಪ್ರತ್ಯೇಕ ಕೌಂಟರ್‌ ತೆರೆದು ಇಲ್ಲಿಯೇ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡುವುದಾಗಿ ಹಿಂದಿನ ಜಿಲ್ಲಾಧಿಕಾರಿಗಳು ಭರವಸೆ ನೀಡಿರುವುದು ನನ್ನ ಗಮನಕ್ಕೆ ಇಲ್ಲ. ಇಂತಹ ವ್ಯವಸ್ಥೆ ಎಲ್ಲಿಯೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹರಪನಹಳ್ಳಿ ತಾಲೂಕು ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಎಲ್ಲ ಇಲಾಖೆಗಳ ಸಿಬ್ಬಂದಿ ವೇತನಕ್ಕೆ ಬಿಡುಗಡೆ ವಿಳಂಬವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಕಂದಾಯ ಇಲಾಖೆ ಕೋಡ್‌ ಕೊಟ್ಟು ಅನುದಾನ ಕೂಡ ಬಿಡುಗಡೆಯಾಗಿದೆ. ತೋಟಗಾರಿಕೆ ಮತ್ತು ಕೃಷಿ ಇಲಾಖೆ ವೇತನಕ್ಕೆ ಸಂಬಂಧಿಸಿದಂತೆ ಸಿಇಒ ಅವರು ನಾಳೆ ಸಂಜೆವೊಳಗೆ ಸಮಸ್ಯೆ ಪರಿಹಾರ ಮಾಡಲಿದ್ದಾರೆ. ಆರೋಗ್ಯ ಇಲಾಖೆ ಸಂಬಂಧಿಸಿದಂತೆ ಕೆಲವೊಂದು ಪ್ರಕ್ರಿಯೆ ನಡೆಯಬೇಕಾಗಿದೆ ಎಂದರು.

ಬರಗಾಲದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಈಗಾಗಲೇ ಮೇವು ಬ್ಯಾಂಕ್‌ ತೆರೆಯಲಾಗಿದೆ. ಇದಲ್ಲದೇ ಅಗತ್ಯವಿರುವ ವಿವಿಧ ಗ್ರಾಮಗಳಲ್ಲಿ 60 ಖಾಸಗಿ ಬೋರ್‌ವೆಲ್ ಹಾಗೂ 10 ಕಡೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮಳೆಯಾಗಿರುವ ಹಿನ್ನೆಲೆಯಲ್ಲಿ ಬೋರ್‌ವೆಲ್ಗಳು ಅಂತರ್ಜಲ ಹೆಚ್ಚಳವಾಗಿರಬಹುದು. ಹೀಗಾಗಿ ಮುಂದುವರೆಸಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹರಪನಹಳ್ಳಿ, ಕೊಟ್ಟೂರು, ಹಡಗಲಿ ಮೂರು ತಾಲೂಕುಗಳನ್ನು ಒಳಗೊಂಡ ಕಂದಾಯ ಉಪವಿಭಾಗ ಕಚೇರಿ ಹರಪನಹಳ್ಳಿಯಲ್ಲಿ ಮುಂದುವರೆಸುವ ಕುರಿತು ಇದೀಗ ಆಕ್ಷೇಪಣೆಗೆ ಕಾಲಾವಕಾಶವಿದ್ದು, ಜು. 25ರಂದು ಅಂತಿಮ ಆದೇಶ ಹೊರ ಬೀಳಲಿದೆ ಎಂದು ತಿಳಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರ ಕಟ್ಟಡ ಹಾಗೂ ಜಾಗವನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್‌, ತಹಶೀಲ್ದಾರ್‌ ಡಾ| ನಾಗವೇಣಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.