ನೆರೆ-ಬರ ಎದುರಿಸಲು ಸರ್ಕಾರ ಸನ್ನದ್ಧ

800 ಹೆಕ್ಟೇರ್‌ ಬೆಳೆ ನಾಶ•ನೆರೆ ಸಂತ್ರಸ್ತರಿಗೆ 1.50 ಲಕ್ಷ ರೊಟ್ಟಿ, 1 ಸಾವಿರ ಸೀರೆ ಸಂಗ್ರಹ

Team Udayavani, Aug 16, 2019, 11:30 AM IST

16-Agust-14

ಹರಪನಹಳ್ಳಿ: ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು, ಉಪವಿಭಾಗಾಧಿಕಾರಿ, ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಹರಪನಹಳ್ಳಿ: ರಾಜ್ಯದಲ್ಲಿ ಉಂಟಾಗಿರುವ ನೆರೆ ಮತ್ತು ಬರವನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದ್ದು, ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ಸಿಗುವ ಭರವಸೆಯಿದೆ ಎಂದು ಶಾಸಕ ಜಿ. ಕರುಣಾಕರರೆಡ್ಡಿ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಂಚರಿಸುರತ್ತ ನೆರೆ ಸಂತ್ರಸ್ತರ ಅಹವಾಲು ಅಲಿಸಿ ಪರಿಹಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ನೆರೆ ಪೀಡಿತ ಪ್ರದೇಶದ ಜನರ ಜೊತೆಗೆ ನಾನಿದ್ದೇನೆ. ನೆರೆಪೀಡಿತ ಪ್ರದೇಶವಾದ ಕಡತಿ, ಹಲುವಾಗಲು, ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 800 ಹೆಕ್ಟೇರ್‌ ವಿವಿಧ ಬೆಳೆಗಳು ನಾಶವಾಗಿವೆ. 340 ಮನೆಗಳು ಬಿದ್ದಿದ್ದು, ತಕ್ಷಣವೇ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ನೆರೆ ಸಂತ್ರಸ್ತರಿಗೆ ನೆರವಾಗಲು ತಾಲೂಕಿನ ಜನರಿಗೆ ರೊಟ್ಟಿ ದೇಣಿಗೆ ನೀಡುವಂತೆ ವಿನಂತಿಸಿಕೊಳ್ಳಲಾಗಿತ್ತು. ಕೇವಲ ನಾಲ್ಕೈದು ದಿನಗಳಲ್ಲಿ ಹಳ್ಳಿಗಳಿಂದ 1 ಲಕ್ಷ ಜೋಳದ ರೊಟ್ಟಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನೂ 50 ಸಾವಿರ ರೊಟ್ಟಿ ಬರುವ ನೀರಿಕ್ಷೆಯಿದೆ. ಜೊತೆಗೆ ಅಕ್ಕಿ, ಬಟ್ಟೆ ಕೂಡ ಕೊಡುತ್ತಿದ್ದಾರೆ. ನಾನು ವೈಯಕ್ತಿವಾಗಿ 1 ಸಾವಿರ ಸೀರೆ, ಕೊಬ್ಬರಿ ಎಣ್ಣೆ ಡಬ್ಟಾಗಳನ್ನು ಬೆಳಗಾವಿ, ಬಾಗಲಕೋಟೆ, ಕೊಡಗು ಪ್ರದೇಶದ ಸಂತ್ರಸ್ತರಿಗೆ ಕಳುಹಿಸಲು ನಿರ್ಧರಿಸಿದ್ದೇನೆ. ಜನರಲ್ಲಿ ದಾನ ಮಾಡುವ ಗುಣವಿರುವುದು ಶ್ಲಾಘನೀಯ. ದುಡಿಮೆಯಲ್ಲಿ ಶೇ. 5ರಷ್ಟು ದಾನ ಮಾಡುವ ಗುಣ ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದರು. ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್‌ ಮಾತನಾಡಿ, ದೇಶದ ಸಂವಿಧಾನವನ್ನು ತಾವು ಅರ್ಥೈಸಿಕೊಂಡು ಕಾನೂನಿನಡಿಯಲ್ಲಿ ಜೀವನ ನಡೆಸಿದಾಗ ಬದುಕು ಸಾರ್ಥಕವಾಗುತ್ತದೆ. ಬಡತನ, ಹಸಿವು, ನಿರುದ್ಯೋಗ ನಿರ್ಮೂಲನೆ ದೇಶದ ದೊಡ್ಡ ಪಿಡುಗಾಗಿದ್ದು, ಸ್ವಯಂ ಉದ್ಯೋಗದ ಮೂಲಕ ದೇಶದ ಅರ್ಥಿಕ ಸದೃಢತೆಗೆ ಮುನ್ನುಡಿ ಬರೆಯಬೇಕಿದೆ ಎಂದರು.

ಪುರಸಭೆ ಸದಸ್ಯ ಎಚ್.ಎಂ. ಅಶೋಕ್‌ 10 ಸಾವಿರ ರೂ. ಚೆಕ್‌ನ್ನು ಉಪವಿಭಾಗಾಧಿಕಾರಿಗಳ ಮೂಲಕ ನೆರೆ ಸಂತ್ರಸ್ತರಿಗೆ ನೀಡಿದರು. ಹಿರಿಯ ಸ್ವಾತಂತ್ರ ಹೋರಾಟಗಾರರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಲ್ಯಾಪಟಾಪ್‌, ಸೈಕಲ್ ವಿತರಿಸಲಾಯಿತು. ತಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ತಹಶೀಲ್ದಾರ್‌ ಡಾ|ನಾಗವೇಣಿ ಮಾತನಾಡಿದರು. ಜಿಪಂ ಸದಸ್ಯೆ ಆರುಂಡಿ ಸುವರ್ಣಮ್ಮ, ಡಿ. ಸಿದ್ದಪ್ಪ, ಉತ್ತಂಗಿ ಮಂಜುನಾಥ್‌, ತಾಪಂ ಉಪಾಧ್ಯಕ್ಷ ಎಲ್. ಮಂಜ್ಯಾನಾಯ್ಕ, ಡಿವೈಎಸ್ಪಿ ನಾಗೇಶ್‌ ಐತಾಳ್‌, ಸಿಪಿಐ ಕೆ.ಕುಮಾರ್‌, ಬಿಇಒ ಎಂ.ಮಂಜುನಾಥ್‌, ಪಿಎಸ್‌ಐ ಶ್ರೀಧರ್‌, ಪುರಸಭೆ ಮುಖ್ಯಾಧಿಕಾರಿ ಬಿ.ಆರ್‌. ನಾಗರಾಜ್‌ನಾಯ್ಕ, ಇಒ ಮಮತ ಹೊಸಗೌಡರ್‌, ಎಚ್.ಎಂ. ವೀರಭದ್ರಯ್ಯ, ಎಸ್‌.ಜಾಕೀರ್‌ ಸರ್ಕಾವಸ್‌, ಸತ್ತೂರ್‌ ಹಾಲೇಶ್‌, ಎಂ.ಪಿ.ನಾಯ್ಕ, ಸಣ್ಣಹಾಲಪ್ಪ, ಆರ್‌.ಲೋಕೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.