ಶೋಷಿತ ಸಮಾಜಗಳಿಗೆ ಶಿಕ್ಷಣವೇ ಪ್ರಬಲ ಅಸ್ತ್ರ: ಸ್ವಾಮೀಜಿ

ಶರಣರ-ಆದರ್ಶ ವ್ಯಕ್ತಿಗಳ ಪುತ್ಥಳಿಗಳನ್ನು ನಗರ, ಗ್ರಾಮಗಳ ಪ್ರಮುಖ ವೃತ್ತಗಳಲ್ಲಿ ಪ್ರತಿಷ್ಠಾಪಿಸಿ

Team Udayavani, May 10, 2019, 4:28 PM IST

10-May-31

ಹರಪನಹಳ್ಳಿ: ಕಲ್ಲಹಳ್ಳಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮವನ್ನು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಉದ್ಘಾಟಿಸಿದರು.

ಹರಪನಹಳ್ಳಿ: ಪ್ರಸಕ್ತ ದಿನಮಾನಗಳಲ್ಲಿ ಶಿಕ್ಷಣದಿಂದ ಮಾತ್ರ ಸಾಮಾಜಿಕವಾಗಿ ಮುಂದುವರೆಯಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಗಂಗಾಮತ ಸಮಾಜವನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಮಾಡಬೇಕಿದೆ. ಶೋಷಿತ ಸಮಾಜಗಳಿಗೆ ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ ಎಂದು ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಯು.ಕಲ್ಲಹಳ್ಳಿ ಗ್ರಾಮದಲ್ಲಿ ನೂತನ ಗಂಗಾಪರಮೇಶ್ವರಿದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಬಸವಣ್ಣ, ಅಂಬಿಗರ ಚೌಡಯ್ಯ, ಶಿಶುನಾಳ ಶರೀಫ, ಅಕ್ಕಮಹಾದೇವಿ ಅವರಂತಹ ಆದರ್ಶ ವ್ಯಕ್ತಿಗಳ ಮೂರ್ತಿಗಳನ್ನು ನಗರ, ಗ್ರಾಮಗಳ ಪ್ರಮುಖ ವೃತ್ತಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು. ಇದರಿಂದ ಅವರ ಆದರ್ಶ ತತ್ವಗಳು, ಸಾಮಾಜಿಕ ಹಾಗೂ ಸಮಾನತೆಯ ಹೋರಾಟ, ತ್ಯಾಗ ಬಲಿದಾನಗಳು ಸ್ಮರಣೆಗೊಂಡು ನಮಗೆ ದಾರಿದೀಪ ಆಗಲಿದೆ ಎಂದರು.

ದೇವಸ್ಥಾನಗಳು ಸೋಮಾರಿಗಳ ಅಡ್ಡೆಯಾಗಬಾರದು. ಬದಲಾಗಿ ಶಿವಾನುಭವ, ತಾತ್ವಿಕ ಚಿಂತನೆ, ದಾಸೋಹಗಳನ್ನು ಬಿತ್ತುವ ಕೇಂದ್ರಗಳಾಗಬೇಕು. ದೊಡ್ಡ ಸಮುದಾಯಗಳೊಂದಿಗೆ ಅನ್ಯೋನ್ಯ ಸಂಬಂಧ ಹೊಂದಿರುವ ಬೆಸ್ತ ಸಮುದಾಯ ಸಾಮಾಜದಲ್ಲಿ ಘನತೆಯನ್ನು ಕಾಪಾಡಿಕೊಂಡು ಬಂದಿದೆ. ಎಲ್ಲಾ ಜಾತಿ, ಧರ್ಮದವರೊಂದಿಗೆ ಬೇರೆತು ಬದುಕುವುದೇ ನಿಜವಾದ ತಾತ್ವಿಕ ಆದರ್ಶ ಜೀವನ ಎಂದರು.

ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಬಿ.ಕೆ ಮಂಜುನಾಥ್‌ ಮಾತನಾಡಿ, ದೇವಸ್ಥಾನ ಕಟ್ಟುವ ನೆಪದಲ್ಲಿ ಮುಂದಾಳುಗಳು ರಾಜಕೀಯವಾಗಿ ಬಳಸಿಕೊಳ್ಳುವ ಆರೋಪಗಳು ನಡುವೆ ಸಮುದಾಯದಲ್ಲಿ ಒಡಕು ಮೂಡುತ್ತಿದೆ. ಈ ನಡುವೆ ಅನ್ಯ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಅವರ ಸಹಕಾರದೊಂದಿಗೆ ದೇವಸ್ಥಾನ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಂಗವಾಗಿ ಕಾಲಾಕರ್ಷಣೆ ಹೋಮ, ನೇತ್ರನ್ಮಲನ, ಮೂಲ ವಿಗ್ರಹ ಪ್ರತಿಷ್ಠಾಪನೆ, ಮಹಾಪೂರ್ಣಾಹುತಿ ಹೋಮಗಳು ನಡೆದವು. ಶಾಂತಾಭೀಷ್ಮ ಸ್ವಾಮೀಜಿ ಅವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ, ನಂದಿಕೋಲು, ಕುಂಭಮೇಳ, ಡೊಳ್ಳು, ಶಿವ ನರ್ತನಗಳ ಮೂಲಕ ಮೆರವಣಿಗೆ ಮಾಡಲಾಯಿತು.

ತಾಪಂ ಸದಸ್ಯ ಪಾಟೀಲ್ ಕೆಂಚನಗೌಡ, ಗಿರಿಜಮ್ಮ ಮಹೇಶಪ್ಪ, ಗ್ರಾಪಂ ಅಧ್ಯಕ್ಷೆ ಸುಧಾ ಭೈರೇಗೌಡ, ಉಪಾಧ್ಯಕ್ಷ ರಾಮನಾಯ್ಕ, ಉಚ್ಚಂಗಿದುರ್ಗ ಬೆಸ್ತರ ಗುಳದಳ್ಳಿ ಮಂಜಪ್ಪ, ಮುಖಂಡರಾದ ಕೆ.ಪಿ ಚಂದ್ರಶೇಖರ್‌, ಮೋರಗೆರೆ ಭೀಮಣ್ಣ ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ಬಿ.ರಾಜಕುಮಾರ್‌, ಕೆ.ನಾಗಾರಾಜ್‌, ಮಹಾಂತೇಶ್‌ ನಿಟ್ಟೂರು, ಕೆ.ಪರಶುರಾಮ, ಮೈಲಪ್ಪ, ಫಣಿಯಾಪುರ ನಿಂಗರಾಜ್‌, ಚಂದ್ರನಾಯ್ಕ, ಕೆ.ಪಿ.ಮಹೇಶ್ವರ, ವೆಂಕಟೇಶಪ್ಪ, ಅಂಜಿನಪ್ಪ ಇದ್ದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.