ಟಿಕೆಟ್ ಪಡೆಯಲು ಆಕಾಂಕ್ಷಿಗಳ ಕಸರತ್ತು

•ಪ್ರತಿ ವಾರ್ಡ್‌ಗಳಲ್ಲಿ ನಾಲ್ಕೈದು ಜನ ಆಕಾಂಕ್ಷಿಗಳು •ಟಿಕೆಟ್ ಹಂಚಿಕೆ ಪಕ್ಷದ ವರಿಷ್ಠರಿಗೆ ತಲೆನೋವು

Team Udayavani, May 10, 2019, 11:40 AM IST

10-May-10

ಹರಪನಹಳ್ಳಿ ಪುರಸಭೆ ನೋಟ.

ಹರಪನಹಳ್ಳಿ: ಲೋಕಸಭೆ ಚುನಾವಣೆಯ ಜಿದ್ದಾಜಿದ್ದಿ ಕೊನೆಗೊಂಡ ಬೆನ್ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪುರಸಭೆಯ ಗದ್ದುಗೆ ಏರಲು ಪೈಪೋಟಿಗಿಳಿದರೆ, ಸ್ಪರ್ಧಾಕಾಂಕ್ಷಿಗಳು ಪುಟಿದೇಳುವ ಮೂಲಕ ಮತ್ತೂಂದು ಸುತ್ತಿನ ರಾಜಕೀಯ ಜಿದ್ದಾಜಿದ್ದಿಗೆ ಕಣ ಸಿದ್ಧವಾಗಿದೆ.

ಕಳೆದ ಪುರಸಭೆ ಚುನಾವಣೆಯಲ್ಲಿ ಒಟ್ಟು 27 ಸ್ಥಾನಗಳಲ್ಲಿ 7 ಅಭ್ಯರ್ಥಿಗಳನ್ನು ಗೆಲ್ಲಿಸಿದ್ದ ಕಾಂಗ್ರೆಸ್‌ ಪಕ್ಷವು ಬಿಎಸ್ಸಾರ್‌, ಕೆಜೆಪಿ, ಪಕ್ಷೇತರ ಬೆಂಬಲದೊಂದಿಗೆ ಪಕ್ಷದ ಆಂತರಿಕ ಒಪ್ಪಂದದಂತೆ 3 ಜನ ಅಧ್ಯಕ್ಷರೊಂದಿಗೆ ಆಡಳಿತ ನಡೆಸಿತ್ತು. ನಂತರ ಬದಲಾದ ರಾಜಕೀಯ ಚಿತ್ರಣದಲ್ಲಿ ಬಿಜೆಪಿ ಅಧಿಕಾರದ ಗದ್ದುಗೇರಿ ಅಧಿಕಾರ ಅವಧಿ ಪೂರ್ಣಗೊಳಿಸಿದೆ. ಇದೀಗ ಪುನಃ ಬಿಜೆಪಿ ಮತ್ತು ಕಾಂಗ್ರೆಸ್‌ ಅಧಿಕಾರ ಪಡೆಯಲು ಹವಣಿಸುತ್ತಿವೆ.

ಆಕಾಂಕ್ಷಿಗಳ ದಂಡು: ಪ್ರಮುಖ ಪಕ್ಷಗಳಿಂದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳ ದಂಡು ಹೆಚ್ಚಾಗಿದೆ. ಪ್ರತಿ ವಾರ್ಡ್‌ಗಳಿಗೂ ಕನಿಷ್ಠ ಇಬ್ಬರಿಂದ ಮೂವರು ಆಕಾಂಕ್ಷಿಗಳಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಇಂತಹ ವಾರ್ಡ್‌ನ ಪ್ರಬಲ ಆಕಾಂಕ್ಷಿ ಎಂದು ತಮ್ಮ ಮತ್ತು ಮುಖಂಡರ ಫೋಟೋ ಸಹಿತ ಹಾಕುತ್ತಿದ್ದಾರೆ. ಟಿಕೆಟ್ ಪಕ್ಕಾ ಎನ್ನುವಂತಹವರು ಆಯಾ ವಾರ್ಡ್‌ಗಳಲ್ಲಿ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಟಿಕೆಟ್ ನೀಡುವ ವಿಚಾರವು ಆಯಾ ಪಕ್ಷಗಳ ನಾಯಕರು, ಮುಖಂಡರಿಗೆ ತಲೆ ನೋವಾಗಿ ಪರಿಣಮಿಸಿದೆ. ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದ್ದು, ಸ್ವಲ್ಪ ಯಾಮಾರಿದರೂ ಬೇರೆ ಯಾರಾದರೂ ಲಾಬಿ ಮಾಡಿ ಟಿಕೆಟ್ ಗಿಟ್ಟಿಸಿ ಬಿಡುತ್ತಾರೆ ಎಂಬ ಆತಂಕ ಆಕಾಂಕ್ಷಿಗಳಲ್ಲಿ ಇದೆ. ಹೀಗಾಗಿ ಸ್ಥಳೀಯ ಶಾಸಕರು, ಸಚಿವರು ಸೇರಿದಂತೆ ಮುಖಂಡರ ಮೇಲೆ ಒತ್ತಡ ಹೇರಿ ಟಿಕೆಟ್‌ಗೆ ದುಂಬಾಲು ಬಿದ್ದಿದ್ದಾರೆ.

ಮೀಸಲಾತಿ ಬದಲು: ಹಾಲಿ ಸದಸ್ಯರ ವಾರ್ಡ್‌ಗಳಲ್ಲಿ ಮೀಸಲಾತಿ ಬಹುತೇಕ ಬದಲಾಗಿದೆ. ಹೀಗಾಗಿ ತಮ್ಮ ವಾರ್ಡ್‌ಗಳಲ್ಲೇ ಸ್ಪರ್ಧೆ ಮಾಡುವ ಅವಕಾಶ ಹಾಲಿಗಳಿಗೆ ಇಲ್ಲ.

ನೆರೆಹೊರೆಯ ಅಥವಾ ತಮ್ಮ ವರ್ಗಕ್ಕೆ ಅನುಕೂಲವಾಗಿರುವ ವಾರ್ಡ್‌ಗಳ ಮೇಲೆ ಹಾಲಿಗಳ ಕಣ್ಣು ಬಿದ್ದಿದೆ. ದೂರದ ವಾರ್ಡ್‌ ಆದರೂ ಪರವಾಗಿಲ್ಲ. ನಮಗೇ ಟಿಕೆಟ್ ಇರಲಿ ಎಂದು ಪಟ್ಟು ಹಿಡಿದು ಲಾಬಿ ನಡೆಸುವ ಯತ್ನವೂ ನಡೆದಿದೆ.

ಹಿರಿಯರು ಮತ್ತು ಯುವಕರನ್ನು ಸಮತೋಲದಲ್ಲಿ ಸರಿದೂಗಿಸಿಕೊಂಡು ಹೋಗುತ್ತಿದ್ದ ಮಾಜಿ ಶಾಸಕ ಎಂ.ಪಿ.ರವೀಂದ್ರ ಅಗಲಿಕೆ ಕಾಂಗ್ರೆಸ್‌ ಪಾಲಿಗೆ ನುಂಗಲಾರದ ತುತ್ತಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಾಮಿಸಿದೆ. ಬಹುತೇಕ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷದ ನಾಯಕರು ಮುಖಂಡರ ಸಭೆ ನಡೆಸಿಯೇ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಒತ್ತುವ ಸಾಧ್ಯತೆಗಳಿವೆ. ಆದರೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೇಳುವ ಸಾಧ್ಯತೆಗಳು ಕೂಡ ಹೆಚ್ಚಾಗಿವೆ. ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಜಿ.ಕರುಣಾಕರರೆಡ್ಡಿ ಶಾಸಕರಾಗಿರುವುದರಿಂದ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ಅದರ ಸದುಪಯೋಗ ಪಡೆದುಕೊಂಡು ಪುರಸಭೆ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಸಿದ್ಧತೆ ನಡೆಸಿದೆ. ಅಧಿಕಾರದಿಂದ ವಂಚಿತವಾದ ಕಾಂಗ್ರೆಸ್‌ ಪಕ್ಷವು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಸಾರಥ್ಯದಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಮತ್ತೂಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದ್ದು, ವಾರ್ಡನ ಹಿರಿಯರು, ಪಕ್ಷದ ಪ್ರಮುಖರು ಸೂಚಿಸುವ ಅಭ್ಯರ್ಥಿಗಳನ್ನು ಪಕ್ಷದಿಂದ ಕಣಕ್ಕಿಳಿಸಲು ರಣತಂತ್ರ ರೂಪಿಸುತ್ತಿದೆ.

ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.