ಸರ್ಕಾರಿ ಮಳಿಗೆ ದುರುಪಯೋಗವಾದರೆ ಕ್ರಮ

ಹರಿಹರ ನಗರಸಭೆ-ತಾಲೂಕು ಕಚೇರಿಗೆ ಡಿಸಿ ಭೇಟಿ•ಅಗತ್ಯವಿರುವೆಡೆ ಅನುದಾನ ಬಳಸಿ

Team Udayavani, Jul 5, 2019, 12:51 PM IST

05-July-21

ಹರಿಹರ: ಇಲ್ಲಿನ ನಗರಸಭೆ ಹಾಗೂ ತಾಲೂಕು ಕಛೇರಿಗೆ ಗುರುವಾರ ಜಿಲ್ಲಾಧಿಕಾರಿ ಬಿ.ಎಸ್‌.ಶಿವಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹರಿಹರ: ಸರ್ಕಾರಿ ಅಥವಾ ಅರೆ ಸರ್ಕಾರಿ ಸಂಸ್ಥೆಗಳಿಂದ ಪಡೆದ ಮಳಿಗೆ ದುರ್ವಿನಿಯೋಗ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್‌.ಶಿವಮೂರ್ತಿ ಎಚ್ಚರಿಸಿದರು.

ವಿವಿಧ ಅಭಿವೃದ್ಧಿ ಯೋಜನೆಗಳ ಕಡತ ಪರಿಶೀಲನೆಗೆ ಇಲ್ಲಿನ ನಗರಸಭೆ ಹಾಗೂ ತಾಲೂಕು ಕಚೇರಿಗೆ ಗುರುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಗರಸಭೆ ಮಳಿಗೆಗಳನ್ನು ಪಡೆದಿರುವ ಕೆಲವರು ನಿಯಮ ಉಲ್ಲಂಘಿಸಿರುವ ಆರೋಪ ಬಂದಿದ್ದು, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸ್ಥಳದಲ್ಲಿದ್ದ ಪೌರಾಯುಕ್ತೆ ಎಸ್‌.ಲಕ್ಷ್ಮಿ ಅವರಿಗೆ ಸೂಚಿಸಿದರು.

ನಗರದ ಕ್ರೀಡಾ ಇಲಾಖೆ ವಾಣಿಜ್ಯ ಸಂಕೀರ್ಣದಲ್ಲಿ ನಿಯಮಬಾಹಿರವಾಗಿ ಮದ್ಯ, ಮಾಂಸ ಮಾರಾಟ ಮಾಡುವ, ಗೋಡೆ- ಛಾವಣಿ ತೆರವುಗೊಳಿಸಿ ಎರಡು ಮಳಿಗೆಗಳನ್ನು ಒಟ್ಟುಗೂಡಿಸಿಕೊಂಡಿರುವ ಅಲ್ಲದೆ ಸಬ್‌ಲೀಸ್‌ ನೀಡಿರುವ ಆರೋಪಗಳು ಕೇಳಿ ಬಂದಿವೆ. ಇಂತಹ ನಿಯಮ ಉಲ್ಲಂಘಿಸಿರುವ ಮಳಿಗೆ ಮಾಲೀಕರಿಗೆ ಕೂಡಲೆ ನೋಟಿಸು ಜಾರಿಗೊಳಿಸಲು ಸೂಚಿಸಲಾಗಿದೆ ಎಂದರು.

ಶೀಘ್ರ ಸ್ವತ್ತುಗಳ ದಾಖಲೀಕರಣ: ದೂಡಾ ಪರವಾನಿಗೆ ಇಲ್ಲದ ದಶಕಗಳಷ್ಟು ಹಳೆಯ ಬಡಾವಣೆಗಳ ನಿವಾಸಿಗಳ ಮನೆ ದುರಸ್ತಿ, ನಿರ್ಮಾಣಕ್ಕೆ ಪರವಾನಗಿ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಿದ್ದಾÃ.ೆ ಆದರೆ 1976 ಕ್ಕಿಂತ ಮುಂಚಿನ ಬಡಾವಣೆ, ರಚನೆಗಳು ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಬರುವುದರಿಂದ ಅಂತಹ ಸ್ವತ್ತುಗಳಿಗೆ ಖಾತಾ ಎಕ್ಸ್‌ಟ್ರ್ಯಾಕ್ಟ್, ಕಟ್ಟಡ ಪರವಾನಿಗೆ ನೀಡಲಾಗುತ್ತಿದೆ.

1976ರ ನಂತರದ ದೂಡಾ ಪರವಾನಿಗೆ ಇಲ್ಲದ ಬಡಾವಣೆ ಸ್ವತ್ತುಗಳಿಗೆ ನಿಗದಿತ ಶುಲ್ಕ ಪಾವತಿಸಿಕೊಂಡು ಬಿ ಖಾತೆ ಎಂದು ದಾಖಲಿಸಿ ಅವರಿಗೂ ಖಾತಾ ಎಕ್ಸ್‌ಟ್ರ್ಯಾಕ್ಟ್, ಕಟ್ಟಡ ಪರವಾನಗಿ ನೀಡಲಾಗುತ್ತಿದೆ. ಸರ್ಕಾರ ರೂಪಿಸಿದ್ದ ಅಕ್ರಮ ಸಕ್ರಮ ಯೋಜನೆಯಲ್ಲಿ ಕನಿಷ್ಟ ಶುಲ್ಕದಲ್ಲಿ ಸಕ್ರಮಗೊಳಿಸಲು ಅವಕಾಶವಿದ್ದರೂ ಆ ಯೋಜನೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಆ ಸೌಕರ್ಯ ಈಗ ದೊರೆಯದಾಗಿದೆ ಎಂದರು.

ನಗರ ಹೊರವಲಯದ ಗ್ರಾಮಗಳು ನಗರಕ್ಕೆ ಸೇರ್ಪಡೆಯಾಗಿದ್ದು, ಅಂತಹ ಗ್ರಾಮಗಳ ಸ್ವತ್ತುಗಳನ್ನು ನಗರಸಭೆಯಲ್ಲಿ ದಾಖಲಿಸುವ ಕಾರ್ಯ ಪ್ರಗತಿಯಲ್ಲಿದ್ದು, ಆದಷ್ಟು ಬೇಗ ಎಲ್ಲಾ ಸ್ವತ್ತುಗಳ ಖಾತಾ ಎಕ್ಸ್‌ಟ್ರ್ಯಾಕ್ಟ್ ದೊರೆಯಲಿವೆ ಎಂದರು.

ಅಕ್ರಮ ತಡೆಗೆ ಕ್ರಮ: ಗಣಿ ಮತ್ತು ಭೂವಿಜ್ಞಾನ ಸಚಿವರು ಅಕ್ರಮ ಮರಳುಗಾರಿಕೆ ತಡೆಗೆ ಹೊಸದಾಗಿ ಕಾನೂನು ರೂಪಿಸುವುದಾಗಿ ತಿಳಿಸಿದ್ದಾರೆ. ಈಗಿರುವ ನಿಯಮಾನುಸಾರ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಶಾಸನ ಸಂರಕ್ಷಿಸಿ: ನಗರದ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿನ ಪುರಾತನ ಶಾಸನಗಳನ್ನು ಸಂರಕ್ಷಿಸಿ ವಿವಿಧ ಭಾಷೆಗೆ ತರ್ಜುಮೆ ಮಾಡಿ ಪ್ರವಾಸಿಗರಿಗೆ ಮಾಹಿತಿ ದೊರೆಯುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ ರೆಹನ್‌ ಪಾಷಾಗೆ ಡಿಸಿ ತಿಳಿಸಿದರು.

ಅನುದಾನ ತಾರತಮ್ಯ: ನಗರದ ಅಭಿವೃದ್ಧಿಗೆ ಸರ್ಕಾರದಿಂದ 8 ಕೋ.ರೂ. ಅನುದಾನ ಮಂಜೂರಾಗಿದ್ದು, ಅದನ್ನು ಕೆಲವೇ ವಾರ್ಡ್‌ಗೆ ಹಂಚಿಕೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೌರಾಯುಕ್ತೆ, ನಗರಸಭೆ ಕ್ರಿಯಾಯೋಜನೆಯಂತೆ ಈ ಅನುದಾನ ಬಿಡುಗಡೆಯಾಗಿದೆ ಎಂದರು.

ಮುಂದೆ ಬಿಡುಗಡೆಯಾಗುವ ಅನುದಾನವನ್ನು ಅತ್ಯಗತ್ಯವಿರುವ ಕಡೆಗೆ ಆದ್ಯತೆ ಅನುಸಾರ ಹಂಚಿಕೆ ಮಾಡುವಂತೆ ಡಿಸಿ ಸೂಚಿಸಿದರು.

ನಗರಕ್ಕೆ ಕುಡಿಯುವ ನೀರು ಪೂರೈಸುವ ಜಾಕ್‌ವೆಲ್ ಘಟಕಕ್ಕೆ 24 ಗಂಟೆ ವಿದ್ಯುತ್‌ ಪೂರೈಸುವ ಎಕ್ಸ್‌ಪ್ರೆಸ್‌ ಲೈನ್‌ ಯೋಜನೆ ಪ್ರಗತಿಯಲ್ಲಿದೆ. ವಿದ್ಯುತ್‌ ಪೂರೈಸುವ ಹೆಸ್ಕಾಂಗೆ 40 ಲಕ್ಷ ರೂ. ಪಾವತಿಸಬೇಕಿದ್ದು, ಸರ್ಕಾರಕ್ಕೆ ವರದಿ ನೀಡಲಾಗಿದೆ. ಅನುದಾನ ಬಂದ ಕೂಡಲೆ ವಿದ್ಯುತ್‌ ಸಂಪರ್ಕ ಪಡೆಯಲಾಗುವುದು ಎಂದು ಪೌರಾಯುಕ್ತರು ತಿಳಿಸಿದರು.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.