ಮನೆಮನೆಗೆ ತೆರಳಿ ಪೌರತ್ವ ಕಾಯ್ದೆ ಪಾಠ
ಓಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಅಪಪ್ರಚಾರ: ಹರೀಶ್, ಭಾರತೀಯ ಮುಸ್ಲಿಂರಿಗೆ ಭಯ ಬೇಡ: ರೇಣುಕಾಚಾರ್ಯ
Team Udayavani, Jan 6, 2020, 12:03 PM IST
ಹರಿಹರ: ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಸೂಕ್ತ ಮಾಹಿತಿ ನೀಡಲು ಜ.1ರಿಂದ ಬಿಜೆಪಿ ಹಮ್ಮಿಕೊಂಡಿರುವ ಜನಸಂಪರ್ಕ ಆಂದೋಲನದಂತೆ ಮಾಜಿ ಶಾಸಕ ಬಿ.ಪಿ.ಹರೀಶ್ ಹಾಗೂ ಪಕ್ಷದ ಮುಖಂಡರು ಭಾನುವಾರ ನಗರದ 21ನೇ ವಾರ್ಡ್‌ನ ಮನೆಮನೆಗೆ ತೆರಳಿ ನೂತನ ಕಾಯ್ದೆ ಕುರಿತು ವಿವರಣೆ ನೀಡುವ ಮೂಲಕ ಮನವರಿಕೆ ಮಾಡುವ ಪ್ರಯತ್ನ ನಡೆಸಿದರು.
ಚುನಾವಣಾ ಪ್ರಚಾರ ಸಮಯದಲ್ಲಿ ಮತಭಿಕ್ಷೆಗೆ ತೆರಳಿದಂತೆ ಮನೆಮನೆಗೆ ತೆರಳಿ ಕರಪತ್ರ ವಿತರಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲ ಎಂಬ ವಾಸ್ತವ ಸತ್ಯವನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೊಳಗಾಗಿ, ಚಿತ್ರಹಿಂಸೆ ಅನುಭವಿಸಿ ಭಾರತಕ್ಕೆ ಬಂದಿರುವ ಅಲ್ಲಿನ ಹಿಂದೂಗಳಿಗೆ ಪೌರತ್ವ ನೀಡುವುದಕ್ಕಷ್ಟೇ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಪ್ರತಿಪಕ್ಷಗಳು ಜನರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿವೆ ಎಂದರು.
ಯಾರು ಕದ್ದು ಮುಚ್ಚಿ ದೇಶದೊಳಗೆ ನುಸುಳಿ ಬಂದಿದ್ದಾರೋ ಅಂಥವರು ಹೊರ ಹೋಗಬೇಕಾಗುತ್ತದೆ. ಅದರೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಓಟ್ ಬ್ಯಾಂಕ್‌ಗಾಗಿ ಸಿಎಎ ಬಗ್ಗೆ ಅಪಪ್ರಚಾರ ಮಾಡುತ್ತಾ ಅಲ್ಪ ಸಂಖ್ಯಾತರ ಓಲೈಸುತ್ತಿವೆ. ರಾಜಕೀಯ ಲಾಭಕ್ಕಾಗಿ ಹಿಂಸಾಚಾರವನ್ನೂ ಪ್ರಚೋದಿಸುತ್ತಿರುವುದು ಅಕ್ಷಮ್ಯ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಇಲ್ಲಿನ ಅಲ್ಪಸಂಖ್ಯಾತರು, ಮುಸ್ಲಿಂ
ಸಮುದಾಯದವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಆದರೂ ಸಹ
ವಿರೋಧ ಪಕ್ಷಗಳು ಅಪ ಪ್ರಚಾರ ನಡೆಸುವ ಮೂಲಕ ದೇಶದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿವೆ. ಈ ಅಂಶಗಳನ್ನು ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಮನೆ-ಮನೆಗೆ ತೆರಳಿ
ಜನರಿಗೆ ಮನದಟ್ಟು ಮಾಡಬೇಕು ಎಂದು ಕರೆ ನೀಡಿದರು.
ಜಿಪಂ ಮಾಜಿ ಅಧ್ಯಕ್ಷ ಎಸ್.ಎಂ ವಿರೇಶ್ ಹನಗವಾಡಿ ಮಾತನಾಡಿ, ದೇಶದ ಆಂತರಿಕ
ಭದ್ರತೆಗಾಗಿ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ. ಸಿಎಎ ಜಾರಿ ತರದಿದ್ದರೆ ಮತಾಂಧ ದೇಶಗಳಿಂದ ಹೊರದಬ್ಬಲ್ಪಟ್ಟು ಕಳೆದ ಹಲವು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿರುವ ಹಿಂದೂ, ಕ್ರೈಸ್ತ, ಬೌದ್ಧ, ಜೈನ, ಸಿಖ್ ಸಮುದಾಯದವರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜೀತ್ ಸಾವಂತ್, ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್,
ನಗರಸಭಾ ಸದಸ್ಯೆ ನೀತಾ ಮೆಹರ್ವಾಡೆ, ತಾಪಂ ಮಾಜಿ ಅಧ್ಯಕ್ಷ ಅಣ್ಣಪ್ಪ ಐರಣಿ,
ಬಾತಿ ಚಂದ್ರಶೇಖರ್, ಮಂಜಾನಾಯ್ಕ, ಪ್ರವೀಣ್ ಪವಾರ್, ಮಾಲತೇಶ್ ಭಂಡಾರಿ, ರಾಜೇಶ್ ವರ್ಣೆಕರ್, ಮೋತ್ಯನಾಯ್ಕ, ಸ್ವಾತಿ ಹನುಮಂತ್, ಜೆ.ಎಂ.ಪ್ರಶಾಂತ್, ರವಿಕುಮಾರ್, ಎನ್.ಇ.ಸ್ವಾಮಿ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.