ಅನ್ನ-ನೀರಿನಷ್ಟೇ ವಿಜ್ಞಾನ-ತಂತ್ರಜ್ಞಾನ ಮಹತ್ವದ್ದು
ಪ್ರಾಚೀನ ಭಾರತ ಋಷಿಮುನಿಗಳ ಕಾಲದಿಂದಲೂ ಸಂಶೋಧನೆಯಲ್ಲಿ ಅಗ್ರಸ್ಥಾನದಲ್ಲಿದೆ
Team Udayavani, Apr 5, 2019, 1:36 PM IST
ಹರಿಹರ: ಎಸ್‌ಜೆವಿಪಿ ಪದವಿ ದರ್ಜೆ ಕಾಲೇಜಿನಲ್ಲಿ ಶಿವಮೊಗ್ಗ ವಲಯ ಮಟ್ಟದ ಪದವಿ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಗಣ್ಯರು ಉದ್ಘಾಟಿಸಿದರು.
ಹರಿಹರ: ಆಧುನಿಕ ಜಗತ್ತಿನಲ್ಲಿ ವಿಜ್ಞಾನ ತಂತ್ರಜ್ಞಾನಗಳಿಗೆ ಅನ್ನ, ನೀರಿನಷ್ಟೆ ಮಹತ್ವವಿದೆ ಎಂದು ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಅಧ್ಯಕ್ಷರು ಹಾಗೂ ದಾವಣಗೆರೆ ಬಿಐಇಟಿ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ಬಿ.ಇ.ರಂಗಸ್ವಾಮಿ ಹೇಳಿದರು.
ನಗರದ ಎಸ್‌ಜೆವಿಪಿ ಪದವಿ ಕಾಲೇಜಿನಲ್ಲಿ ಗುರುವಾರ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ, ತಂತ್ರಜ್ಞಾನ ಇಲಾಖೆ, ಕಾಲೇಜಿನ ಐಕ್ಯೂಎಸಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ವಲಯ ಮಟ್ಟದ ಪದವಿ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆದಲ್ಲಿ ಉಪನ್ಯಾಸ ನೀಡಿದ ಅವರು, ಆಹಾರ, ಗಾಳಿ, ನೀರಿನಷ್ಟೆ ವಿಜ್ಞಾನ ಮತ್ತು ತಂತ್ರಜ್ಞಾನವೂ ಮನುಷ್ಯನ ಬದುಕಿಗೆ ಅತ್ಯವಶ್ಯವಾಗಿದೆ ಎಂದರು.
ಸ್ವಾತಂತ್ರ್ಯ ನಂತರದಲ್ಲಿ ಬರ ಪರಿಸ್ಥಿತಿಯಿಂದ ದೇಶ ಬಳಲುತ್ತಿದ್ದಾಗ ಸಹಾಯ ಕೋರಿ ಅಮೆರಿಕಾ ಪ್ರವಾಸ ಕೈಗೊಂಡಿದ್ದ ಅಂದಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರಿಗೆ ನಿರಾಶೆಯಾಯಿತು. ಅಲ್ಲಿನ ವೈಜ್ಞಾನಿಕ ಬೆಳವಣಿಗೆ ಗಮನಿಸಿದ ಶಾಸ್ತ್ರೀಜಿ ಆಹಾರ ಸ್ವಾವಲಂಬನೆಯ ಶಪಥ ಕೈಗೊಂಡರು.
ವಿಜ್ಞಾನ ಮತ್ತು ತಂತ್ರಜ್ಞಾನ ಆಧರಿಸಿಯೇ ಅವರು ಅದರಲ್ಲಿ ಯಶಸ್ವಿಯೂ ಆದರು ಎಂದರು.
ಭಾರತದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿ ಸಿದ ಸಂಶೋಧನೆ ಪ್ರಾಚೀನ ಕಾಲದಿಂದಲೂ ಪರಿಚಿತವಾದ ಕ್ಷೇತ್ರಗಳೇ ಆಗಿವೆ. ಪ್ರಾಚೀನ ಭಾರತ ಋಷಿಮುನಿಗಳ ಕಾಲದಿಂದಲೂ
ಸಂಶೋಧನೆಯಲ್ಲಿ ಅಗ್ರಸ್ಥಾನದಲ್ಲಿದೆ. ಸ್ವತಂತ್ರ್ಯ
ನಂತರವೂ ಅನೇಕ ಸಂಶೋಧನೆಗಳನ್ನು ನಡೆಸಿದ್ದು ಹಾಗೂ ಆ ವಿಷಯಗಳ ತಂತ್ರಜ್ಞಾನವನ್ನು ಕೊಡುವ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರ ಪರಿಣಾಮವಾಗಿ ಭಾರತಿಯರು ಹೆಮ್ಮೆ
ಪಡುವಂತಹ ವೈಜ್ಞಾನಿಕ ಸಾಧನೆ ಮಾಡಿದೆ ಎಂದರು.
ವಿಜ್ಞಾನ ಪ್ರಗತಿಯು ಒಂದು ದೇಶವನ್ನು ಶಕ್ತಿಶಾಲಿಗೊಳಿಸುತ್ತದೆ. ವಿದ್ಯಾರ್ಥಿಗಳು ಹೊಸ, ಹೊಸ ಪ್ರಯೋಗಗಳನ್ನು ಮಾಡುವುದರಿಂದ ಚಿಂತನಾ ಸಾಮರ್ಥ್ಯ ಹಾಗೂ ವೈಜ್ಞಾನಿಕ
ಮನೋಭಾವ ಹೆಚ್ಚುತ್ತದೆ. ವಿಜ್ಞಾನ ಪ್ರದರ್ಶನ, ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ದಿಸೆಯಲ್ಲಿ ಪ್ರಾಧ್ಯಾಪಕರು, ಪೋಷಕರು ಬೆಂಬಲಿಸಬೇಕು ಎಂದರು.
ಸ್ಪರ್ಧೆಯಲ್ಲಿ ಶಿವಮೊಗ್ಗ ವಲಯ ಮಟ್ಟದ ವಿವಿಧ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ತಮ್ಮ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಡಿ.ಎಂ. ಹಾಲಸ್ವಾಮಿ ಉದ್ಘಾಟಿಸಿದರು. ಪ್ರಾಚಾರ್ಯ ಪ್ರೊ | ಹದಡಿ ಯಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯ ಉದಯರತ್ನಕುಮಾರ್, ಕೌಶಿಕ್, ಸಂಸ್ಥೆಯ ಕಾರ್ಯದರ್ಶಿ ಪ್ರೊ | ಶಕುಂತಲಮ್ಮ ಗುರುಸಿದ್ದಯ್ಯ, ವಿಶೇಷ ಆಹ್ವಾನಿತರಾಗಿ ಸಂಸ್ಥೆಯ
ನಿರ್ದೇಶಕ ಮೂರ್ಕಲ್ ಜಯಣ್ಣ, ಐಕ್ಯೂಎಸಿ ಸಂಯೋಜಕರಾದ ಡಾ| ಎ.ಬಿ. ರಾಮಚಂದ್ರಪ್ಪ, ವೀರೇಶ್ ಶೆಟ್ಟರ್, ಆರ್. ಅಶ್ವಿನಿ, ಸಮರ್ಥರಾಮ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.