ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಆಗ್ರಹ
ಹೆದ್ದಾರಿ ಬೈಪಾಸ್ ಅಕ್ಕಪಕ್ಕದ ಗ್ರಾಮಗಳಲ್ಲಿ ಸಾರಿಗೆ ಸಮಸ್ಯೆ•ಹರಿಹರ ಡಿಪೋ ಬಸ್ ಬಿಡಲು ಒತ್ತಾಯ
Team Udayavani, Jul 31, 2019, 10:12 AM IST
ಹರಿಹರ: ನಗರದ ಬಸ್ ನಿಲ್ದಾಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಲೇಜು ವಿದ್ಯಾರ್ಥಿಗಳು ಬಸ್ ಸೌಲಭಕ್ಕೆ ಆಗ್ರಹಿಸಿದರು.
ಹರಿಹರ: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಅಕ್ಕಪಕ್ಕದ ಗ್ರಾಮಗಳ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಡಿಆರ್‌ಎಂ ಕಾಲೇಜು ಆವರಣದಿಂದ ಬೆಳಿಗ್ಗೆ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು, ಪ್ರಮುಖ ರಸ್ತೆಗಳ ಮೂಲಕ ಬಸ್ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಸಂಚಾರ ನಿಯಂತ್ರಕರೊಂದಿಗೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗದಿದ್ದಾಗ ಡಿಪೋ ಮ್ಯಾನೇಜರ್ ಸ್ಥಳಕ್ಕೆ ಆಗಮಿಸಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.
ನಿಲ್ದಾಣದ ಒಳ ಬರುವ ಹಾಗೂ ಹೊರ ಹೋಗುವ ರಸ್ತೆಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಕೆಲ ಸಮಯದ ನಂತರ ಸ್ಥಳಕ್ಕೆ ಡಿಪೋ ಮ್ಯಾನೇಜರ್ ಆಗಮಿಸಿದ್ದರಿಂದ ಬಸ್ ಸಂಚಾರಕ್ಕೆ ಅವಕಾಶ ನೀಡಲಾಯಿತು.
ನಂತರ ಎಬಿವಿಪಿ ತಾಲೂಕು ಸಂಚಾಲಕ ಕುಮಾರ್ ಕರೂರ್ ಮಾತನಾಡಿ, ತುಂಗಭದ್ರಾ ನದಿ ಮೇಲಿನ ಹೊಸ ಸೇತುವೆ ಭಾರಿ ವಾಹನಗಳ ಸಂಚಾರಕ್ಕೆ ತೆರೆದುಕೊಂಡಾಗಿನಿಂದ ಕುಮಾರಪಟ್ಟಣಂ ನಿಂದ ರಾಷ್ಟ್ರೀಯ ಹೆದ್ದಾರಿ, ಬೈಪಾಸ್ ಮೂಲಕ ಹರಿಹರ-ರಾಣೆಬೆನ್ನೂರು ನಡುವಿನ ಬಸ್‌ಗಳ ಸಂಚಾರ ಮಾರ್ಗ ಬದಲಾವಣೆಯಾಗಿದೆ.
ಪರಿಣಾಮವಾಗಿ ಬೈಪಾಸ್‌ನ ಸಿದ್ಧವೀರಪ್ಪ ಸರ್ಕಲ್, ಹನಗವಾಡಿ, ಹರಗನಹಳ್ಳಿ, ನಾಗೇನಹಳ್ಳಿ, ರಾಜನಹಳ್ಳಿ, ಹಲಸಬಾಳು, ಕುಮಾರಪಟ್ಟಣಂ ಹಾಗೂ ಸುತ್ತಲಿನ ಹಲವು ಗ್ರಾಮಗಳ ಜನತೆಗೆ ವಿಶೇಷವಾಗಿ ಹರಿಹರ, ದಾವಣಗೆರೆಗೆ ಶಾಲಾ, ಕಾಲೇಜುಗಳಿಗೆ ಬಂದು ಹೋಗುವ ನೂರಾರು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.
ಈ ಗ್ರಾಮಗಳ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಬಸ್ ಸಿಗದೆ ಶಾಲಾ, ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದಾರೆ. ತಡವಾಗಿ ಬರುವವರಿಗೆ ತರಗತಿಗೆ ಬಿಟ್ಟುಕೊಳ್ಳುತ್ತಿಲ್ಲ. ಪರಿಣಾಮವಾಗಿ ಇವರ ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗಿದೆ.
ಬಸ್ ಪಾಸ್‌ಗಳಿಗೆ ಎಸ್ಸಿ, ಎಸ್ಟಿ ವರ್ಗದವರನ್ನು ಬಿಟ್ಟು ಉಳಿದ ವಿದ್ಯಾರ್ಥಿಗಳು ಹಣ ನೀಡುತ್ತಾರೆ. ಇದಕ್ಕೆ ಹೆಚ್ಚುವರಿಯಾಗಿ ಉಳಿದ ಹಣವನ್ನು ಸರಕಾರ ಸಾರಿಗೆ ಸಂಸ್ಥೆಗೆ ಅನುದಾನ ನೀಡುತ್ತದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಹಣವನ್ನು ಸರಕಾರವೇ ಭರಿಸುತ್ತದೆ. ಆದರೂ ಸಾರಿಗೆ ಸಂಸ್ಥೆ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಎರಡನೆ ದರ್ಜೆ ಪ್ರಜೆಗಳಂತೆ ವ್ಯವಹರಿಸುತ್ತಿದೆ.
ಈ ಮಾರ್ಗದಲ್ಲಿ ನಿಯಮಿತವಾಗಿ ಬಸ್ ಸಂಚಾರ ಆರಂಭಿಸಿದರೆ ವಿದ್ಯಾರ್ಥಿಗಳ ಜೊತೆಗೆ ಹತ್ತಾರು ಗ್ರಾಮಗಳ ಜನತೆಗೂ ಅನುಕೂಲವಾಗುತ್ತದೆ. ಸಾರಿಗೆ ಸಂಸ್ಥೆಗೂ ಆದಾಯ ಬರುತ್ತದೆ. ಆದಾಯ ಹೆಚ್ಚಿಸುವತ್ತ ಚಿತ್ತ ಹರಿಸದ ಸ್ಥಳೀಯ ಸಾರಿಗೆ ಸಂಸ್ಥೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಂಸ್ಥೆಗೆ ಆರ್ಥಿಕ ನಷ್ಟವೂ ಆಗುತ್ತಿದೆ ಎಂದರು.
ಡಿಪೋ ಮ್ಯಾನೇಜರ್ ಪರಮೇಶ್ವರಪ್ಪ, ರಾಣೆಬೆನ್ನೂರು ಕಡೆಯಿಂದ ಬರುವ ಎರಡು ಬಸ್‌ಗಳನ್ನು ಕುಮಾರಪಟ್ಟಣಂನಿಂದ ಬೈಪಾಸ್ ಮೂಲಕ ಸಂಚರಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರಾದರೂ, ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ರಾಣೆಬೆನ್ನೂರು ಡಿಪೋ ಬದಲು ಹರಿಹರ ಡಿಪೋಗೆ ಸೇರಿದ ಬಸ್‌ಗಳನ್ನು ಈ ಮಾರ್ಗದಲ್ಲಿ ಪ್ರತಿ ದಿನ ಬೆಳಿಗ್ಗೆ 9, ಮಧ್ಯಾಹ್ನ 1, ಸಂಜೆ 4 ಮತ್ತು 6ಕ್ಕೆ ಸಂಚರಿಸುವಂತೆ ವ್ಯವಸ್ಥೆ ಮಾಡಬೇಕು. ಒಂದು ವಾರದಲ್ಲಿ ಈ ಸೌಲಭ್ಯ ಕಲ್ಪಿಸದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದರು. ಪ್ರತಿಭಟನೆಯಿಂದಾಗಿ ನಿಲ್ದಾಣಕ್ಕೆ ಬಂದು ಹೋಗುವ ಬಸ್ ಹಾಗೂ ಪ್ರಯಾಣಿಕರಿಗೆ ಕೆಲ ಕಾಲ ತೊಂದರೆಯಾಯಿತು. ಎಬಿವಿಪಿ ಮುಖಂಡರಾದ ಶುಭಾಷ್, ಶಿವಕುಮಾರ್, ಚೇತನ್, ವಿದ್ಯಾಧರ, ವಿನುತಾ, ಸ್ವಾತಿ, ರಂಗನಾಥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.