ಪ್ರಗತಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ
ಏಕರೂಪ ಶಿಕ್ಷಣ ಪದ್ಧತಿ ಜಾರಿಗೆ ಬರಲಿ•ಶಿಕ್ಷಣದ ಜತೆಗೆ ಸಂಸ್ಕಾರ-ಮೌಲ್ಯ ಬೋಧಿಸಿ
Team Udayavani, Sep 6, 2019, 10:58 AM IST
ಹರಿಹರ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಸ್.ರಾಮಪ್ಪ ಮಾತನಾಡಿದರು.
ಹರಿಹರ: ಉನ್ನತ ಮಟ್ಟದ ನಾಗರಿಕತೆ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಎಸ್.ರಾಮಪ್ಪ ಹೇಳಿದರು.
ನಗರದ ಮರಿಯಾ ಸದನದಲ್ಲಿ ಗುರುವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ಶಿಕ್ಷಕರು ಸಮಾಜದಲ್ಲಿ ಸೂಕ್ತ ಮಾರ್ಗದರ್ಶನ, ತಿಳಿವಳಿಕೆ ನೀಡುವಲ್ಲಿ ಶ್ರಮಿಸುತ್ತಾ ಬಂದಿದ್ದಾರೆ. ದೇಶದ ಪ್ರಗತಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ ಎಂದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ. ಪ್ರತಿಯೊಬ್ಬರೂ ತಮಗೆ ಮಾರ್ಗದರ್ಶನ ನೀಡಿ ವ್ಯಕ್ತಿತ್ವ ರೂಪಿಸಿರುವ ಶಿಕ್ಷಕರನ್ನು ಸ್ಮರಿಸುವ ದಿನವೇ ಶಿಕ್ಷಕರ ದಿನಾಚರಣೆಯಾಗಿದೆ. ಇಂದಿನ ದಿನಮಾನಗಳಲ್ಲಿ ಖಾಸಗಿಗಿಂತ ಸರಕಾರಿ ಶಾಲೆಗಳ ಮಕ್ಕಳೇ ಉನ್ನತ ಸಾಧನೆ ಮಾಡುತ್ತಿದ್ದಾರೆ ಎಂದರು.
ಸಾಮಾನ್ಯ ಶಿಕ್ಷಕನೂ ಕೂಡ ತನ್ನ ಸಾಧನೆಗಳ ಮೂಲಕ ರಾಷ್ಟ್ರಪತಿ ಸ್ಥಾನಕ್ಕೇರಬಹುದೆಂಬ ಸಂದೇಶ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರಿಂದ ತಿಳಿಯುತ್ತದೆ. ಅವರ ಜೀವನ ಎಲ್ಲಾ ಶಿಕ್ಷಕರಿಗೆ ಆದರ್ಶವಾಗಲಿ ಎಂದು ಆಶಿಸಿದರು.ಎಸ್‌ಜೆವಿಪಿ ಕಾಲೇಜು ನಿವೃತ್ತ ಉಪನ್ಯಾಸಕ ಪ್ರೊ| ಬಿ.ಬಿ.ನಂದ್ಯಾಲ ಮಾತನಾಡಿ, ಮಾನವೀಯ ಮೌಲ್ಯ, ಪ್ರೀತಿ, ವಿಶ್ವಾಸಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು. ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಕರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಶ್ರೀ ಹರಿಹರೇಶ್ವರ ದೇವಸ್ಥಾನದಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರ ಭಾವಚಿತ್ರದ ಮೆರವಣಿಗೆ ನಡೆಯಿತು. ಆರೋಗ್ಯ ಮಾತೆ ಚರ್ಚ್‌ನ ಫಾ|ಡಾ| ಅಂತೋನಿ ಪೀಟರ್, ತಾಪಂ ಅಧ್ಯಕ್ಷ ಶ್ರೀದೇವಿ ಮಂಜಪ್ಪ, ಉಪಾಧ್ಯಕ್ಷೆ ಜಯಮ್ಮ ಬಸವಲಿಂಗಪ್ಪ, ಜಿಪಂ ಸದಸ್ಯ ಬಿ.ಎಂ. ವಾಗೀಶ್ ಸ್ವಾಮಿ, ಹೇಮಾವತಿ ಭೀಮಪ್ಪ, ಎಪಿಎಂಸಿ ಅಧ್ಯಕ್ಷ ನರೇಂದ್ರ ಕೆ.ಎಂ., ನಗರಸಭಾ ಸದಸ್ಯ ನಿಂಬಕ್ಕ ಚಂದಾಪೂರ್, ಬಿಇಒ ಬಸವರಾಜಪ್ಪ ಯು. ಸಿಪಿಐ ಐ.ಎಸ್. ಗುರುನಾಥ್, ಶಿಕ್ಷಕರ ಸಂಘದ ಅಧ್ಯಕ್ಷ ನಜೀರ್ ಅಹ್ಮದ್, ರೇವಣಸಿದ್ದಪ್ಪ ಅಂಗಡಿ, ರೇವಣ್ಣ ನಾಯಕ್, ಎ.ಸಿದ್ದಲಿಂಗಪ್ಪ, ರಿಯಾಜ್ ಅಹ್ಮದ್, ಬಿಆರ್‌ಪಿ ಎಸ್.ಬಿ.ಮಹಬೂಬ್ ಬಾಷಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.