ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಆಹಾರ, ಸುರಕ್ಷತೆಗೆ ಆದ್ಯತೆ ನೀಡಿ
ಹಾಸ್ಟೆಲ್ ಗಳಿಗೆ ಜಿಪಂ ಸಿಇಒ ವಿಜಯಪ್ರಕಾಶ್ ಭೇಟಿ: ವಿದ್ಯಾರ್ಥಿಗಳ ಹಿತ ಕಾಪಾಡಿ
Team Udayavani, Jun 5, 2019, 3:32 PM IST
ಹಾಸನದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಗೆ ಜಿಪಂಸಿಇಒ ವಿಜಯಪ್ರಕಾಶ್ ಅವರು ಭೇಟಿ ನೀಡಿ ವ್ಯವಸ್ಥೆ, ಸುರಕ್ಷತೆ ಪರಿಶೀಲನೆ ನಡೆಸಿದರು.
ಹಾಸನ: ಎಲ್ಲಾ ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗಬೇಕು, ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಬೇಕು. ಸಂಜೆಯೂ ವಿದ್ಯಾರ್ಥಿಗಳ ಕಲಿಕಾ ಚಟು ವಟಿಕೆಗಳ ಮೇಲೆ ನಿಗಾವಹಿಸಿ, ಅಗತ್ಯ ಮಾರ್ಗ ದರ್ಶನ ಹಾಗೂ ವಿಶೇಷ ಬೋಧನಾ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್. ವಿಜಯಪ್ರಕಾಶ್ ಅವರು ತಾಕೀತು ಮಾಡಿದರು.
ನಗರದ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಬಾಲಕಿಯ ಹಾಸ್ಟೆಲ್ಗಳಿಗೆ ಅಪರಿಚಿತರು ಪ್ರವೇಶಿಸಲು ಪ್ರಯತ್ನಿಸುವ ಘಟನೆಗಳು ನಡೆದಿವೆ. ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಹಿಳಾ ವಸತಿ ನಿಲಯದ ವಿದ್ಯಾಥಿಗಳ ಸಂಪೂರ್ಣ ಸುರಕ್ಷತೆ ಅಧಿಕಾರಿಗಳು, ವಾರ್ಡ್‌ನಗಳು ಮತ್ತು ಭದ್ರತಾ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಹಿತ ಕಾಪಾಡಿ: ನಿಲಯ ಪಾಲಕರು ಹಾಸ್ಟೆಲ್ಗಳಲ್ಲೇ ಇದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಕಾಯಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಸಮಗ್ರ ಶೈಕ್ಷಣಿಕ ಪ್ರಗತಿಗೆ ಪಣ ತೊಟ್ಟಿದ್ದು ಅದಕ್ಕೆ ಪೂರಕವಾಗಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗಲಿ: ಸರ್ಕಾರಿ ವಸತಿ ನಿಯಲಗಳು ಹಾಗೂ ಶಾಲೆಗಳು ವಿದ್ಯಾರ್ಥಿಗಳ ಶೈಕ್ಷಣಿಕ, ಬೌದ್ಧಿಕ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಹಾದಿ ಯಾಗಬೇಕು. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಹಾಸ್ಟೆಲ್ಗಳಲ್ಲಿ ಪೂರಕ ವಾತಾವರಣ ಸೃಷ್ಟಿಸುವುದು ಅಧಿಕಾರಿ, ಸಿಬ್ಬಂದಿಯ ಜವಾಬ್ದಾರಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಹೆಚ್ಚಿನ ಮುತುರ್ವಜಿ ವಹಿಸಿದ್ದಾರೆ ಎಂದು ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್. ವಿಜಯಪ್ರಕಾಶ್ ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಕೇವಲ ಊಟೋಪಚಾರ, ವಸತಿ ಯನ್ನು ಒದಗಿಸವುದಷ್ಟೇ ಇಲಾಖೆಯ ಗುರಿಯಾಗದೇ ಅವರನ್ನು ಸಮಾಜದ ಶಕ್ತಿಗಳನ್ನಾಗಿ, ಆಸ್ತಿಗಳನ್ನಾಗಿ ರೂಪಿಸುವ ಹೊಣೆಗಾರಿಕೆ ನಿರ್ವಸಬೇಕು ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಅಭಿವೃದ್ದಿಗೆ ಪೂರಕವಾಗಿ ಇಂದಿನ ವಿದ್ಯಾರ್ಥಿ ನಿಲಯಗಳ ಸಮರ್ಥ ನಿರ್ವ ಹಣೆಯಾಗಬೇಕು. ವಿದ್ಯಾರ್ಥಿಗಳು ಸಮಾಜವನ್ನು ಎದುರಿಸುವ, ಶಕ್ತಿ ತುಂಬುವ ವ್ಯಕ್ತಿತ್ವ ವಿಕಸನ ಕೇಂದ್ರಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ವೃತ್ತಿಪರ ಶಿಕ್ಷಣ ನೀಡಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ತರಬೇತಿಗಳನ್ನು ನೀಡಬೇಕು. ಮೊಬೈಲ್ಗಳ ಕನಿಷ್ಠ ಬಳಕೆ ಮಾಡಬೇಕು. ಎಲ್ಲಾ ವಸತಿ ನಿಲಯಗಳಲ್ಲಿ ಕೈತೋಟ ನಿರ್ಮಾಣಕ್ಕೆ ಕ್ರಮ ಕೈಗೊಂಡು ತರಕಾರಿಗಳನ್ನು ಬೆಳೆಯುವುದರ ಜೊತೆಗೆ ಪರಿಸರಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. .
ನಗರದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕಚೇರಿಗೂ ದಿಢೀರ್ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿದರು. ವಿಳಂಬಲ್ಲದೆ ಸಕಾರದ ಸೌಲತ್ತುಗಳನ್ನು ಒದಗಿಸಬೇಕು ಕಡತಗಳನ್ನು ಶೀಘ್ರ ಲೇವಾರಿಯಾಗದಿದ್ದಲ್ಲಿ ಸಂಬಂಧಪಟ್ಟವರ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ವಿದ್ಯಾರ್ಥಿನಿಲಯಗಳ ವಸತಿ ಶಾಲೆಗಳ ವ್ಯವಹಿಸ್ಥಿತವಾಗಿ ನಿರ್ವಹಣೆ ಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.