ಸಂತ್ರಸ್ತರಿಗೆ ತುರ್ತು ಪರಿಹಾರ ವಿತರಿಸಿ

ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತದಿಂದ 60 ದಿನಗಳ ಸೌಲಭ್ಯ ಒದಗಿಸಿ: ಡೀಸಿ ನಿರ್ದೇಶನ

Team Udayavani, Aug 15, 2019, 3:33 PM IST

15-Agust-36

ಹಾಸನ ಜಿಲ್ಲಾಧಿಕಾರಿ ಅಕ್ರಂಪಾಷಾ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂಬಂಧ ವಿವಿಧ ಇಲಾಖೆಗಳ ಅಧಿಧಿಕಾರಿಗಳ ಸಭೆ ನಡೆಸಿದರು.

ಹಾಸನ: ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರವನ್ನು ತುರ್ತಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರ ಕುಟುಂಬಗಳಿಗೆ ತುರ್ತು ಅವಶ್ಯಕತೆಗಳಾದ ಬಟ್ಟೆ, ಪಾತ್ರೆ ಇತರೆ ಸಾಮಗ್ರಿಗಳನ್ನು ಖರೀದಿಸಲು 3,800 ರೂ. ತಾತ್ಕಾಲಿಕ ಪರಿಹಾರ ಧನದ ಚೆಕ್‌ನ್ನು ಆದಷ್ಟು ಬೇಗ ವಿತರಿಸಬೇಕು. ಸಂತ್ರಸ್ತರಾಗಿರುವ ಕುಟುಂಬಗಳಿಗೆ 60 ದಿನಗಳ ಕಾಲ ಜಿಲ್ಲಾಡಳಿತವೇ ಸೌಲಭ್ಯ ಒದಗಿಸಬೇಕಿದೆ. ಹಾಗಾಗಿ ಪುನರ್ವಸತಿ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕು. ನೋಡಲ್ ಅಧಿಕಾರಿಗಳು ತಾಲೂಕುವಾರು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿ ಸೌಲಭ್ಯ ಒದಗಿಸಬೇಕು ಎಂದರು.

ಜಂಟಿ ಸಮೀಕ್ಷೆ ನಡೆಸಿ: ಜಿಲ್ಲಾದ್ಯಂತ ಬೆಳೆ ಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ನಡೆಸಬೇಕು. ಈ ಸಂದರ್ಭದಲ್ಲಿ ಸಂತ್ರಸ್ತ ರೈತರ ಹೆಸರು, ಊರು, ಆಧಾರ್‌ ಸಂಖ್ಯೆ, ಬ್ಯಾಂಕ್‌ ಖಾತೆಯ ಸಂಖ್ಯೆ ಸೇರಿದಂತೆ ಬೆಳೆ ಹಾನಿಯಾಗಿರುವ ಪ್ರಮಾಣದ ಕುರಿತು ಮಾಹಿತಿ ಕ್ರೋಢೀಕರಿಸಿ ಪರಿಹಾರದ ನೋಂದಣಿ ಪಟ್ಟಿಯನ್ನು ತಾಲೂಕುವಾರು ಸಿದ್ಧ‌್ದಪಡಿಸಬೇಕು ಎಂದು ನಿರ್ದೇಶಿಸಿದರು.

ಖಾಲಿ ಗೋಶಾಲೆಗಳನ್ನು ಮುಚ್ಚಿ: ಗೋಶಾಲೆಗಳು ಖಾಲಿಯಿದ್ದರೆ ಆ ಕುರಿತಂತೆ ಫೋಟೋ ಮತ್ತು ಅಗತ್ಯ ದಾಖಲೆಗಳನ್ನು ಮಾಡಿ ಖಾಲಿಯಿರುವ ಗೋಶಾಲೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ನಿರ್ದೇಶಿಸಿದರು. ಸಾರ್ವಜನಿಕರಿಗೆ ತೊಂದರೆಯಾಗ ದಂತೆ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿ ಕಾರ್ಯ ವನ್ನು ಶೀಘ್ರದಲ್ಲೇ ಮಾಡಿ ಮುಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪುನರ್ವಸತಿ ಕಲ್ಪಿಸಿ: ಆಲೂರು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಪುನಃ ನೆರೆ ಬಂದಾಗ ಬಿದ್ದು ಹೋಗುವಂತಹ ಮನೆಗಳಲ್ಲಿ ವಾಸಿಸದಂತೆ ಜನರಿಗೆ ಎಚ್ಚರಿಕೆ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಸ್ಥಳಗಳಲ್ಲಿ ಪುನರ್ವಸತಿ ಸೌಲಭ್ಯವನ್ನು ನಿರ್ಮಿಸಿ ಸ್ಥಳಾಂತರಕ್ಕೆ ಅವರ ಮನವೊಲಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜ್‌, ಜಂಟಿ ಕೃಷಿ ನಿರ್ದೇಶಕ ಮಧುಸೂದನ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.